ಕನ್ನಡಪ್ರಭ ವಾರ್ತೆ ಗುಡಿಬಂಡೆ
ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಗುಡಿಬಂಡೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮನುಷ್ಯನಿಂದ ಪರಿಸರಕ್ಕೆ ಧಕ್ಕೆಭೂಮಿಯ ಮೇಲೆ ಬುದ್ದಿವಂತ ಜೀವಿ ಎನ್ನಿಸಿಕೊಂಡ ಮನುಜ ಇಂದು ಭೂಮಿಯ ಪರಿಸರವನ್ನೇ ಹಾಳು ಮಾಡುತ್ತಿದ್ದಾನೆ. ಇದರಿಂದಾಗಿ ಭೂಮಿಯ ಆಯಸ್ಸು ಕ್ಷೀಣಿಸುತ್ತಿದೆ. ಇದೀಗ ನಾವು ಭೂಮಿಯನ್ನು ಉಳಿಸದೇ ಇದ್ದರೇ ಮುಂದಿನ ದಿನಗಳಲ್ಲಿ ಭೂಮಿಯ ಮೇಲೆ ಜೀವರಾಶಿಗಳೇ ಇಲ್ಲದಂತಾಗುತ್ತದೆ. ಈ ನಿಟ್ಟಿನಲ್ಲಿ ಭೂಮಿಯ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಏ.22 ರಂದು ವಿಶ್ವ ಭೂಮಿ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದರು.
ಭೂಮಿಯ ರಕ್ಷಣೆ ಎಲ್ಲರ ಹೊಣೆ
ಬಳಿಕ ವಕೀಲರ ಸಂಘದ ಅಧ್ಯಕ್ಷ ಟಿ.ಸಿ.ಅಶ್ವತ್ಥರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಭೂಮಿಯ ಸಂರಕ್ಷಣೆಯಲ್ಲಿ ಸಮಸ್ತ ಮಾನವಕುಲದ ಜವಾಬ್ದಾರಿ ಮಹತ್ತರವಾಗಿದೆ. ಪರಿಸರ ಹಾಗೂ ಭೂಮಿಯೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಇಂದಿನ ಹಾಗೂ ಭವಿಷ್ಯದ ಪೀಳಿಗೆಗಾಗಿ ಆರ್ಥಿಕ, ಸಾಮಾಜಿಕ ಹಾಗೂ ನೈಸರ್ಗಿಕ ಸಮತೋಲನ ಸಾಧಿಸುವುದು ಎಲ್ಲರ ಹೊಣೆಗಾರಿಕೆಯಾಗಿದೆ ಎಂಬ ಗೊತ್ತುವಳಿಯನ್ನು 1992ರ ರಿಯೋ ಸಮಾವೇಶದಲ್ಲಿ ಅಂಗೀಕರಿಸಲಾಗಿದೆ ಎಂದರು.ಈ ವೇಳೆ ವಕೀಲರ ಸಂಘದ ಉಪಾಧ್ಯಕ್ಷ ಕೆ.ಆರ್.ಮಂಜುನಾಥ, ವಕೀಲರಾದ ತೇಜಶ್ರೀ, ನ್ಯಾಯಾಲಯದ ಸಿಬ್ಬಂದಿ ಸುರೇಶ್ ಸೇರಿದಂತೆ ಹಲವರು ಇದ್ದರು.