ಸಮಾಜದ ಆರೋಗ್ಯವನ್ನು ರಕ್ಷಿಸುವುದು ಎಲ್ಲರ ಹೊಣೆ

KannadaprabhaNewsNetwork |  
Published : May 07, 2026, 01:30 AM IST
ಮಧುಗಿರಿ ತಾಲೂಕು ಯರಗುಂಟೆಯಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರದಲ್ಲಿ ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ತಪಾಸಣೆ ಮಾಡಿಸಿಕೊಳ್ಳುತ್ತಿರುವ ದೃಶ್ಯ ಕಾಣಬಹುದು.  | Kannada Prabha

ಸಾರಾಂಶ

ಆರೋಗ್ಯವೇ ಭಾಗ್ಯ ಎಂಬಂತೆ ನಮ್ಮ ದೇಹದ ಆರೋಗ್ಯವನ್ನು ಸದೃಢರಾಗಿಸಿಕೊಂಡು ಸಮಾಜದ ಆರೋಗ್ಯವನ್ನು ರಕ್ಷಿಸುವುದು ಎಲ್ಲರ ಹೊಣೆ ಎಂದು ಜಿಪಂ ಮಾಜಿ ಸದಸ್ಯ ಎಚ್‌.ಕೆಂಚಮಾರಯ್ಯ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಧುಗಿರಿ

ಆರೋಗ್ಯವೇ ಭಾಗ್ಯ ಎಂಬಂತೆ ನಮ್ಮ ದೇಹದ ಆರೋಗ್ಯವನ್ನು ಸದೃಢರಾಗಿಸಿಕೊಂಡು ಸಮಾಜದ ಆರೋಗ್ಯವನ್ನು ರಕ್ಷಿಸುವುದು ಎಲ್ಲರ ಹೊಣೆ ಎಂದು ಜಿಪಂ ಮಾಜಿ ಸದಸ್ಯ ಎಚ್‌.ಕೆಂಚಮಾರಯ್ಯ ತಿಳಿಸಿದರು.

ತಾಲೂಕಿನ ಐ.ಡಿ.ಹಳ್ಲಿ ಹೋಬಳಿ ಯರಗುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಶ್ರೀಮುದ್ದಮ್ಮ ಸ್ಮಾರಕ ಗ್ರಾಮೀಣಾಭಿವೃದ್ಧಿ ಸೇವಾ ಟ್ರಸ್ಟ್, ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಆಕಾಶ್ ವೈದ್ಯಕೀಯ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ .ಡಾ.ಬಿ.ಆರ್ ಅಂಬೇಡ್ಕರ್ ರವರ 135ನೇ ಜಯಂತಿ ಹಾಗೂ ಡಾ.ಬಾಬೂ ಜಗಜೀವನ್ ರಾಮ್ ಅವರ 119ನೇ ಜಯಂತಿ ಅಂಗವಾಗಿ ನಡೆದ ಆರೋಗ್ಯ ತಪಾಸಣಾ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿದರು.

ತುಮುಲ್ ನಿರ್ದೆಶಕ ಕೊಂಡವಾಡಿ ಚಂದ್ರಶೇಖರ್ ಮಾತನಾಡಿ, ಗ್ರಾಮೀಣರು ಶುದ್ಧವಾದ ನೀರು,ಗಾಳಿ ಸೇವಿಸುವ ಮೂಲಕ ಆರೋಗ್ಯ ರಕ್ಷಿಸಿಕೊಳ್ಳಬೇಕು. ಅಶುದ್ಧ ನೀರು ಬಳಕೆಯಿಂದ ರೋಗಗಳು ಹರಡುತ್ತವೆ. ಆದ್ದರಿಂದ ಎಚ್ಚರ ವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದರು.

ಸಂಸ್ಥಾಪಕ ಅಧ್ಯಕ್ಷ ಎಂ.ಅಶ್ವತ್ಥಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ತಜ್ಞರು ಭಾಗವಹಿಸಿದ್ದು ಸಾರ್ವಜನಿಕರು ಎಲ್ಲ ಕಾಯಿಲೆಗಳಿಗೂ ಉಚಿತವಾಗಿ ಪರೀಕ್ಷಿಸಿಕೊಂಡು ಇದರ ಪ್ರಯೋಜನ ಪಡೆದು ಕೊಳ್ಳವುಂತೆ ಸಲಹೆ ನೀಡಿದರು. ಸಮಾರಂಭದಲ್ಲಿ ಜಿ.ಪಂ ಮಾಜಿ ಸದಸ್ಯ ಎಸ್.ಡಿ.ಕೃಷ್ಣಪ್ಪ,ಮುಖಂಡರಾದ ರಮೇಶ್,ರಂಗನಾಥ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಲಿತಾಂಶ ರದ್ದು ಪಡಿಸಿ ಪ್ರಜಾಪ್ರಭುತ್ವ ಎತ್ತಿ ಹಿಡಿಯಲಿ: ಎಂ.ಆರ್.ರವಿಶಂಕರ್ ಆಗ್ರಹ
ವೀರ ಯೋಧರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು