ಸಾಗರ: ಪ್ರಜಾಪ್ರಭುತ್ವದ ಮೌಲ್ಯ ರಕ್ಷಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸಂವಿಧಾನದ ಆಶಯಗಳನ್ನು ನಾವು ರಕ್ಷಣೆ ಮಾಡಿದಷ್ಟು ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗುತ್ತದೆ. ಹಕ್ಕುಗಳನ್ನು ಪ್ರತಿಪಾದಿಸುವ ಜೊತೆಗೆ ಕರ್ತವ್ಯ ಪರಿಪಾಲನೆ ಬಗ್ಗೆ ಸಹ ಗಮನಹರಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾದಷ್ಟು ಸೌಲಭ್ಯ ಪಡೆಯಲು ಅವಕಾಶವಾಗುತ್ತದೆ ಎಂದರು.
ರಾಜ್ಯ ಸರ್ಕಾರವು ಪ್ರಜಾಪ್ರಭುತ್ವದ ಮಹತ್ಮ, ಮೌಲ್ಯ ಮತ್ತು ಜನರ ಹಕ್ಕುಗಳ ಬಗ್ಗೆ ತಿಳಿಸಿಕೊಡುವ ಉದ್ದೇಶದಿಂದ ರಾಜ್ಯದೆಲ್ಲೆಡೆ ಪ್ರಜಾಪ್ರಭುತ್ವ ದಿನವನ್ನು ವಿಶೇಷವಾಗಿ ನಡೆಸುತ್ತಿದೆ. ಇದು ಜನರ ಏಕತೆ ಕಾಪಾಡಲು ಸರ್ಕಾರ ನೀಡಿದ ಅವಕಾಶವಾಗಿದ್ದು, ಸಮಾನತೆ ಸಾಧಿಸಲು ಪ್ರಜಾಪ್ರಭುತ್ವ ವ್ಯವಸ್ಥೆ ಅಗತ್ಯ ಎಂದು ಹೇಳಿದರು.ನ್ಯಾಯವಾದಿ ಜ್ಯೋತಿ ಆನಂದ್ ಉಪನ್ಯಾಸ ನೀಡಿದರು. ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಮೌನೇಶ್ ಬಡಿಗೇರ್, ಸಮಾಜ ಕಲ್ಯಾಣಾಧಿಕಾರಿ ಸುರೇಶ್, ಸಹನ ಇದ್ದರು.
ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಿ ಬೇಳೂರು ಮಾತನಾಡಿದರು.