ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಆಯೋಜಿತ ಪ್ರಾಚೀನ ಸ್ಮಾರಕಗಳ ಮಹತ್ವದ ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಕೊಡಗು ಜಿಲ್ಲೆಯಲ್ಲಿ ಈವರೆಗೆ ದೊರಕಿದ ಅನೇಕ ಪ್ರಾಚೀನ ಮಹತ್ವದ ಸ್ಮಾರಕಗಳ ಪ್ರಾತ್ಯಕ್ಷಿಕೆಯೊಂದಿಗೆ ಉಪನ್ಯಾಸ ನೀಡಿದರು.
ಪ್ರಾಚೀನ ಸ್ಮಾರಕಗಳು ದೇಶದ ಭವ್ಯ ಇತಿಹಾಸದ ಮಹತ್ವ ಸಾರಿಹೇಳುತ್ತವೆ. ಇಂಥ ಸ್ಮಾರಕಗಳ ಸಂರಕ್ಷಣೆ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂರಕ್ಷಣೆಗೆ ಸಾರ್ವಜನಿಕರೂ ಸಹಕಾರ ನೀಡುವಂತೆ ರೇಖಾ ಮನವಿ ಮಾಡಿದರು,ಕೊಡಗು ಜಿಲ್ಲೆಯಲ್ಲಿಯೂ ಐತಿಹಾಸಿಕ ಸ್ಮಾರಕಗಳನ್ನು ದತ್ತು ಪಡೆದು ನಿರ್ವಹಿಸಲು ಸಂಘ ಸಂಸ್ಥೆಗಳು ಸಿದ್ಧರಿದ್ದರೆ ಅದಕ್ಕೆ ಕೂಡ ಅವಕಾಶ ಇದೆ ಎಂದೂ ಅವರು ಮಾಹಿತಿ ನೀಡಿದರು, ವೀರಗಲ್ಲು, ಮಾಸ್ತಿಗಲ್ಲು ಸೇರಿದಂತೆ ಪ್ರಾಚೀನ ದೇವಾಲಯಗಳು, ಶಿಲೆಗಳು ಕಂಡುಬಂದಲ್ಲಿ ಅವುಗಳ ಬಗ್ಗೆ ಮಾಹಿತಿಯನ್ನು ಕೊಡಗು ಜಿಲ್ಲಾ ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಗೆ ನೀಡುವಂತೆಯೂ ರೇಖಾ ವಿನಂತಿಸಿದರು,