ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಹೊಣೆ: ಜಿಪಂ ಸಿಇಒ ಸದಾಶಿವ ಪ್ರಭು

KannadaprabhaNewsNetwork | Published : Mar 2, 2024 1:47 AM

ಸಾರಾಂಶ

ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ಸುಕ್ಷಿತರನ್ನಾಗಿ ಮಾಡುವ ಜವಾಬ್ದಾರಿ ಇದೆ.

ಹೊಸಪೇಟೆ: ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಮತ್ತು ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಸದಾಶಿವ ಪ್ರಭು ತಿಳಿಸಿದರು.

ನಗರದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಹಾಯವಾಣಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ಸುಕ್ಷಿತರನ್ನಾಗಿ ಮಾಡುವ ಜವಾಬ್ದಾರಿ ಇದೆ ಎಂದರು.ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಮಕ್ಕಳು ಭಿಕ್ಷಾಟನೆ ಅಂಗಡಿ, ಮಾಲ್‌ಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುವ ಮತ್ತು ಮಾದಕ ವ್ಯಸನಿ ಮಕ್ಕಳಿರುತ್ತಾರೆ ಹಾಗೂ ಒಬ್ಬಂಟಿಯಾಗಿ ತಿರುಗಾಡುತ್ತಿರುವವರು ಕಂಡಾಗ ಚೈಲ್ಡ್ ಹೆಲ್ಪ್‌ಲೈನ್ ದಿನದ 24 ಗಂಟೆಗಳ ಕಾಲ ಇರುತ್ತದೆ. ಯಾವ ಸಮಯದಲ್ಲಿ ಆದರೂ ಕರೆ ಮಾಡಿ ಮಾಹಿತಿ ನೀಡಬಹುದು ಎಂದರು.ಮಕ್ಕಳ ಸಹಾಯವಾಣಿ ನಂಬರ್ 1098 ಕ್ಕೆ ಕರೆ ಮಾಡಬಹುದಾಗಿದೆ. ಮಾಹಿತಿ ನೀಡಿದವರ ಹೆಸರುಗಳನ್ನು ಸಂಪೂರ್ಣವಾಗಿ ಗೌಪ್ಯವಾಗಿ ಇಡಲಾಗುತ್ತದೆ. ಮಕ್ಕಳ ರಕ್ಷಣೆ ಮಾಡುವುದು ಬರೀ ಇಲಾಖೆಯಿಂದ ಮಾತ್ರ ಸಾಧ್ಯವಾಗುದಿಲ್ಲ. ಜತೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಆಗ ಮಾತ್ರ ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಮಕ್ಕಳ ಘಟಕದ ರಕ್ಷಣಾಧಿಕಾರಿ ಸುದೀಪ್ ಮಾತನಾಡಿ, ಜಿಲ್ಲಾದ್ಯಂತ ಯಾವುದೇ ತುರ್ತು ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿದಾಗ ನಮ್ಮ ಇಲಾಖೆ ದಿನದ 24 ಗಂಟೆಯಲ್ಲಿ ಕಾರ್ಯ ಮಾಡುವುದಕ್ಕೆ ಸಿದ್ಧವಿರುತ್ತದೆ. ಮಕ್ಕಳ ರಕ್ಷಣೆಗೆ ಪೋಷಕರ ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ನಿರೂಪಣಾಧಿಕಾರಿ ಸುಭದ್ರದೇವಿ, ಜಿಲ್ಲಾ ಅಂಗವಿಕಲ ಕಲ್ಯಾಣಧಿಕಾರಿ ಅವಿನಾಶ್, ಮಕ್ಕಳ ಘಟಕದ ಸಿಬ್ಬಂದಿಗಳಾದ ಗಂಗಾಧರ, ಶರಣಪ್ಪ ಶ್ರೀಕಾಂತ, ದಿವ್ಯ, ಚಿದಾನಂದ ಮತ್ತು ಇನ್ನಿತರ ಸಿಬ್ಬಂದಿ ಭಾಗಿಯಾಗಿದ್ದರು.

Share this article