ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

KannadaprabhaNewsNetwork |  
Published : Jan 17, 2025, 12:48 AM IST
ಪೊಟೊ: 16ಎಸ್‌ಎಂಜಿಕೆಪಿ04ಶಿವಮೊಗ್ಗ ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಚೇರಿಯಲ್ಲಿ ಗುರುವಾರ ಜಿಲ್ಲಾ ಕೇಂದ್ರ ವಸತಿ ಶಾಲೆ, ಕಾಲೇಜುಗಳ ಅಧಿಕಾರಿಗಳಿಗೆ ‘ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ’ ಕುರಿತು ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್‌ ಉದ್ಘಾಟಿಸಿದರು.   | Kannada Prabha

ಸಾರಾಂಶ

ಶಿವಮೊಗ್ಗ: ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪೋಕ್ಸೋ ಕಾಯ್ದೆಯಂತಹ ಅನೇಕ ಕಠಿಣ ಕಾಯ್ದೆಗಳು ಜಾರಿಗೆ ಬಂದಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಹೇಳಿದರು.

ಶಿವಮೊಗ್ಗ: ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪೋಕ್ಸೋ ಕಾಯ್ದೆಯಂತಹ ಅನೇಕ ಕಠಿಣ ಕಾಯ್ದೆಗಳು ಜಾರಿಗೆ ಬಂದಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ, ಪರಿವರ್ತನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಶಿರಾಳಕೊಪ್ಪ ಸಹಯೋಗದಲ್ಲಿ ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಚೇರಿಯಲ್ಲಿ ಗುರುವಾರ ಜಿಲ್ಲಾ ಕೇಂದ್ರ ವಸತಿ ಶಾಲೆ, ಕಾಲೇಜುಗಳ ಅಧಿಕಾರಿಗಳಿಗೆ ‘ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ’ ಕುರಿತು ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ವಿರುದ್ಧದ ಕೆಟ್ಟ ಘಟನೆಗಳು, ಪ್ರಕರಣಗಳನ್ನು ಶಮನ ಮಾಡಲು ಕಠಿಣವಾದ ಪೋಕ್ಸೋ ಕಾಯ್ದೆ ಜಾರಿಗೆ ಬಂದಿತು. ಈ ಕಾಯ್ದೆ ಜಾರಿಗೆ ಬಂದು 13 ವರ್ಷ ಆಯ್ತು. ಇದು ಕಟ್ಟುನಿಟ್ಟಿನ ಸ್ವರೂಪ ಹೊಂದಿದ್ದು, ಕಠಿಣ ಶಿಕ್ಷೆ ಸಹ ಹೊಂದಿದೆ. ಆದರೆ, ನಿಷ್ಠೆಯಿಂದ ಇದರ ಅನುಷ್ಠಾನ ಮಾಡಲು ಮುಂದಾದಾಗ, ಈ ಕಾಯ್ದೆಯ ದುರ್ಬಳಕೆ ಸವಾಲಾಗಿ ನಿಲ್ಲುತ್ತದೆ. ಇಂತಹ ಗಂಭೀರ ವಿಚಾರವನ್ನು ಮಂಥನ ಮಾಡಬೇಕಿದೆ ಎಂದರು.

ಮಕ್ಕಳನ್ನು ಆಯುಧದ ರೀತಿ ಉಪಯೋಗಿಸುವುದು ಸರಿಯಲ್ಲ. ಈ ಕಾಯ್ದೆಯನ್ನು ಮೂಲಭೂತವಾಗಿ ಮಕ್ಕಳ ಹಕ್ಕು ರಕ್ಷಣೆಗಾಗಿ ಜಾರಿ ಮಾಡಲಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳು ಸೇರಿದಂತೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಡಿಡಿಪಿಯು ಚಂದ್ರಪ್ಪ ಎಸ್.ಗುಂಡಪಲ್ಲಿ ಮಾತನಾಡಿ, ಈಗಿನ ಕಾಲದಲ್ಲಿಯೂ ಮೂಢನಂಬಿಕೆ, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಬಾಲ್ಯ ವಿವಾಹದಂತ ಅನಿಷ್ಟ ಪದ್ಧತಿ ಜ್ವಲಂತವಾಗಿದೆ. ಹೆಣ್ಣು ಮಕ್ಕಳು ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದರೂ ಅವರ ವಿರುದ್ಧ ದೌರ್ಜನ್ಯ ನಡೆಯುತ್ತಲೇ ಇದೆ. ಆದ್ದರಿಂದ ಎಲ್ಲ ಕಾಲೇಜುಗಳಲ್ಲಿ ದೌರ್ಜನ್ಯ ತಡೆ ಸಮಿತಿಗಳು ರಚನೆಯಾಗಬೇಕು. ಗುರುಗಳು ದೇವರ ಸಮಾನವಾಗಿದ್ದು, ಮಕ್ಕಳ ಹಕ್ಕುಗಳನ್ನು ರಕ್ಷಿಸಿ, ಪೋಷಿಸಬೇಕು. ಇಂದಿನ ಕಾರ್ಯಾಗಾರದಲ್ಲಿ ಕಾಯ್ದೆಗಳ ಕುರಿತು ತಿಳಿದುಕೊಂಡು ಕಾಲೇಜುಗಳಲ್ಲಿ ತಮ್ಮ ಅಧೀನ ನೌಕರರಿಗೆ ಹಾಗೂ ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಹೇಳಿದರು.

ಡಿಡಿಪಿಐ ಎಸ್.ಆರ್.ಮಂಜುನಾಥ್ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಕುರಿತಾದ ಇಂತಹ ತರಬೇತಿ ಕಾರ್ಯಾಗಾರ ಬಹಳ ಮುಖ್ಯ ಪಾತ್ರ ವಹಿಸುತ್ತವೆ. ಶಾಲಾ-ಕಾಲೇಜುಗಳಲ್ಲಿ ಇಂತಹ ಘಟನೆಗಳು ಆಗದಂತೆ ಎಚ್ಚರಿಕೆಯಿಂದ ಇರಬೇಕು. ಕಾಯ್ದೆ ಬಗ್ಗೆ ತಿಳಿದು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

ಪರಿವರ್ತನ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ನಿಕಟಪೂರ್ವ ಸದಸ್ಯ ಡಿ.ಶಂಕರಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಿ.ಮಲ್ಲೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶೋಭಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶ್ರೀನಿವಾಸ, ಭದ್ರಾವತಿ ಬಿಇಒ ನಾಗೇಂದ್ರ ಪ್ರಸಾದ್ ಮತ್ತಿತರರಿದ್ದರು.

ವೇದಿಕೆ ಕಾರ್ಯಕ್ರಮದ ಬಳಿಕ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ – 2006 ಮತ್ತು ಪೋಕ್ಸೋ ಕಾಯ್ದೆ 2012 ಕುರಿತು ಗೋಷ್ಠಿಗಳು ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡಿಮೆಯಾಗಲಿದೆ ಬೆಂಗಳೂರು - ದಾವಣರೆ ಮಧ್ಯೆ ಅಂತರ : ಎರಡೂ ಗಂಟೆ ಪ್ರಯಾಣ ಸಮಯ ಉಳಿತಾಯ
ನೇಮಕಾತಿ ಪ್ರಕ್ರಿಯೆ ಇನ್ನು ಸುಗಮ-ಒಳಮೀಸಲು ಬಿಲ್‌ಗೆ ಕೊನೆಗೂ ಗೌರ್ನರ್‌ ಗೆಹಲೋತ್‌ ಅಂಕಿತ