ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಇಲ್ಲಿನ ಒಕ್ಕಲಿಗರ ಭವನದಲ್ಲಿ ಮಂಗಳವಾರ ನಡೆದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಪೂರ್ವಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಮ್ಮ ಸಂವಿಧಾನ ನಮ್ಮ ಹಕ್ಕು ಎಂಬುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ಮಹಿಳೆಯರು, ಯುವಜನರು ಮತ್ತು ಬಡವರ ವಿರೋಧಿ ಪಕ್ಷವಾಗಿದೆ. ನೋಟು ಅಮಾನ್ಯೀಕರಣ, ರೈತರ ಹಿತ ಬಲಿಕೊಡುವ ಕಾಯ್ದೆಗಳನ್ನು ಜಾರಿಗೆ ತಂದು ದೇಶದ ಸಾಮಾಜಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ ಅಪಕೀರ್ತಿ ಆ ಪಕ್ಷಕ್ಕೆ ಸಲ್ಲುತ್ತದೆ ಎಂದ ಅವರು, ಕಾಂಗ್ರೆಸ್ ದೇಶ ಕಟ್ಟುವ ಕೆಲಸ ಮಾಡಿದೆ. 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಕಾಂಗ್ರೆಸ್‌ನ ದಶಕಗಳ ಪರಿಶ್ರಮದ ಫಲವನ್ನು ತನ್ನ ಸಾಧನೆಯೆಂದು ಬಿಂಬಿಸಿಕೊಳ್ಳುವ ಕೆಲಸವನ್ನಷ್ಟೇ ಮಾಡಿದೆ ಎಂದು ಟೀಕಿಸಿದರು.ಸುಧಾಕರ್ ವಿರುದ್ಧ ಬಿಜೆಪಿಗರಿಂದಲೇ ಆರೋಪ:
ಬಿಜೆಪಿ ಶಾಸಕರಿಂದ ಸುಳ್ಳು ಹೇಳಿಕೆ:
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ರವಿ , ಜಿಪಂ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ತಾಲೂಕು ಅಧ್ಯಕ್ಷ ಬೈರೇಗೌಡ, ನಗರಾಧ್ಯಕ್ಷ ಕೆ.ಪಿ.ಜಗನ್ನಾಥ್, ಕಸಬಾ ಅಧ್ಯಕ್ಷ ವೆಂಕಟೇಶ್, ತಾಪಂ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿಶ್ವನಾಥ ರೆಡ್ಡಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ವಿಧಾನ ಪರಿಷತ್ ಸ್ಪರ್ಧಾಕಾಂಕ್ಷಿ ರಾಮೋಜಿಗೌಡ ಸೇರಿದಂತೆ ವಿವಿಧ ಘಟಕಗಳ ಮುಖ್ಯಸ್ಥರು, ಪದಾಧಿಕಾರಿಗಳು ಹಾಜರಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷ ಯುವಜನತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಈ ಬಾರಿ ರಾಜ್ಯದಲ್ಲಿ 9 ಜನ ಯುವಕ-ಯುವತಿಯರಿಗೆ ಟಿಕೆಟ್ ನೀಡಿದೆ. ಯುವ ನಾಯಕತ್ವ ಬೆಳೆಸುವ ಮಹತ್ವಾಕಾಂಕ್ಷೆ ಸಾಬೀತು ಮಾಡಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನಾಲ್ಕೂವರೆ ಕೋಟಿಗೂ ಅಧಿಕ ಜನರನ್ನು ತಲುಪುತ್ತಿವೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಯುವ ಉತ್ಸಾಹಿ ಹಾಗೂ ಸೇವಾ ಹಿನ್ನೆಲೆಯ ಅಭ್ಯರ್ಥಿಯನ್ನು ನೀಡಲಾಗಿದ್ದು, ಹೆಚ್ಚಿನ ಬಹುಮತದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.