ನಾಲ್ವರು ಕಿಶೋರ ಕಾರ್ಮಿಕರ ರಕ್ಷಣೆ

KannadaprabhaNewsNetwork |  
Published : Jul 08, 2024, 12:33 AM IST
ಬೆಂ.ಗ್ರಾ ಜಿಲ್ಲೆಯ ಹಲವೆಡೆ ಬಾಲ, ಕಿಶೋರ ಕಾರ್ಮಿಕ ಕಾಯ್ದೆಗಳ ಕುರಿತು ಜಾಗೃತಿ ಮೂಡಿಸಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ-1098 ಜಂಟಿಯಾಗಿ ನಡೆಸಿದ ದಾಳಿಯಲ್ಲಿ ನಾಲ್ವರು ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ.

ದೊಡ್ಡಬಳ್ಳಾಪುರ: ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ-1098 ಜಂಟಿಯಾಗಿ ನಡೆಸಿದ ದಾಳಿಯಲ್ಲಿ ನಾಲ್ವರು ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ.

ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿ ನಡೆಸಿ 4 ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಲಾಗಿದೆ.

ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕಾನೂನಡಿ ಶಿಕ್ಷೆ ವಿಧಿಸಲಾಗುವುದು ಎಂದು ಜಾಗೃತಿ ಮೂಡಿಸಿದರು.

ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರ ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸಿದರು. ಮಕ್ಕಳನ್ನು ದುಡಿಮೆಗೆ ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡಿ ಮಕ್ಕಳನ್ನು ರಕ್ಷಿಸಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕರಿಸುವಂತೆ ಅಧಿಕಾರಿಗಳು ಸೂಚಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್, ಕಾರ್ಮಿಕ ನಿರೀಕ್ಷಕಿ ಅಂಬಿಕಾ ವೈ, ಶಿಕ್ಷಣ ಇಲಾಖೆಯ ಬಿಆರ್‌ಸಿ ನಾಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನರಸಿಂಹರಾಜು, ಮಕ್ಕಳ ಸಹಾಯವಾಣಿಯ ಮಲ್ಲಿಕಾರ್ಜುನ ಮತ್ತು ಲಾವಣ್ಯ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ನನ್ನ ಮಾತು ನಡೆಯುತ್ತಾ, ಇಲ್ವಾ? ನಂಗಷ್ಟೇ ಗೊತ್ತು’
ರಾಜ್ಯಾದ್ಯಂತ ಪ್ರಧಾನಿ ಮೋದಿ ಜನ್ಮದಿನ ಸಂಭ್ರಮ