ಕನ್ನಡಪ್ರಭ ವಾರ್ತೆ ಹಿರಿಯೂರು
ತಾಲೂಕಿನ ಭೀಮನಬಂಡೆ ಗ್ರಾಮದ ಯಾಜ್ಞವಲ್ಕ್ಯ ಪಬ್ಲಿಕ್ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಯಾಜ್ಞವಲ್ಕ್ಯ ವಿದ್ಯಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಗೆ 2000 ವರ್ಷಗಳ ಇತಿಹಾಸವಿದ್ದು ತಾಯಿಯ ಭಾಷೆಯಾದ ಕನ್ನಡವನ್ನು ಉಳಿಸಿ ಬೆಳೆಸಲು 1,915 ಮೇ 5ರಂದುಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಮಿರ್ಜಾ ಇಸ್ಮಾಯಿಲ್, ಸರ್ ಎಂ.ವಿಶ್ವೇಶ್ವರಯ್ಯನವರು ಜೊತೆಗೂಡಿ ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿದರು. ಅಂದಿನಿಂದ ಇಲ್ಲಿಯವರೆಗೆ ಕನ್ನಡ ಸಾಹಿತ್ಯ ಪರಿಷತ್ತು ಹಲವು ಘಟಕಗಳನ್ನು ಆರಂಭಿಸುವ ಮೂಲಕ ಜಿಲ್ಲಾ ಮಟ್ಟದ, ತಾಲೂಕು, ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆ ಯೋಜನೆ ಮಾಡುವ ಮೂಲಕ ಸ್ಥಳೀಯ ಸಾಹಿತಿಗಳನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಮಾಡುತ್ತ ಬಂದಿದೆ. ಜೊತೆಗೆ ಯುವ ಬರಹಗಾರರಿಗೆ ಕವಿಗೋಷ್ಠಿ ವಿಚಾರ ಸಂಕಿರಣ ಹೀಗೆ ಹಲವು ಕಾರ್ಯಕ್ರಮಗಳನ್ನು ಮಾಡುತ್ತಾ ಸಾಹಿತಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿದೆ ಎಂದರು.