ಕನ್ನಡ ನಾಡು, ನುಡಿ ರಕ್ಷಣೆ ಎಲ್ಲರ ಕರ್ತವ್ಯ

KannadaprabhaNewsNetwork |  
Published : Nov 02, 2024, 01:32 AM IST
 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ, ತಾಲೂಕು ಆಡಳಿತ ಹಾಗೂ ನಗರಸಭೆ ವತಿಯಿಂದ ಶಹಾಪುರ ನಗರದ ಸಿಪಿಎಸ್ ಶಾಲೆಯ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ತಹಸೀಲ್ದಾರ ಉಮಾಕಾಂತ ಹಳ್ಳೆ ಮಾತನಾಡಿದರು. | Kannada Prabha

ಸಾರಾಂಶ

ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಾಗೆಯೇ, ನಮ್ಮ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಹಸೀಲ್ದಾರ್ ಉಮಾಕಾಂತ್ ಹಳ್ಳೆ ಹೇಳಿದರು.

ಕನ್ನಡಪ್ರಭ ವಾರ್ತೆ ಶಹಾಪುರಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಾಗೆಯೇ, ನಮ್ಮ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಹಸೀಲ್ದಾರ್ ಉಮಾಕಾಂತ್ ಹಳ್ಳೆ ಹೇಳಿದರು.

69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ, ತಾಲೂಕು ಆಡಳಿತ ಹಾಗೂ ನಗರಸಭೆ ವತಿಯಿಂದ ನಗರದ ಸಿಪಿಎಸ್ ಶಾಲೆಯ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಹಾಗೂ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಅವರು, ಕನ್ನಡ ನಾಡಿನಲ್ಲಿ ಅನೇಕ ಕವಿಗಳು, ವಚನಕಾರರು ಮತ್ತು ಕೀರ್ತನಾಕಾರರು ಕನ್ನಡ ಕೀರ್ತಿ ಪತಾಕೆ ಜಗತ್ತಿನಾದ್ಯಂತ ಪಸರಿಸಿದ್ದಾರೆ. ಸುಮಾರು 2 ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ಇದುವರೆಗೆ 8 ಜ್ಞಾನಪೀಠ ಪ್ರಶಸ್ತಿಗಳು ದೊರಕಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು.ಬೇರೆ ಭಾಷೆಗಳನ್ನು ಗೌರವಿಸಬೇಕು ಹಾಗೂ ನಮ್ಮನ್ನು ನಾವು ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ತಾಂತ್ರಿಕವಾಗಿ, ಸಾಹಿತ್ಯಾತ್ಮಕವಾಗಿ, ಆಡಳಿತಾತ್ಮಕವಾಗಿ, ಹೀಗೆ ಮುಂತಾದ ಕ್ಷೇತ್ರಗಳಲ್ಲಿ ಕನ್ನಡ ನಾಡನುಡಿಯ ಉಳಿವಿಗಾಗಿ ತೊಡಗಿಸಿಕೊಳ್ಳಬೇಕು. ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ನಾವೆಲ್ಲರೂ ಪ್ರಮಾಣ ಮಾಡೋಣ ಎಂದರು.ತಾಲೂಕು ಪಂಚಾಯಿತ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಬಿರಾದಾರ್ ಮಾತನಾಡಿ, ಕನ್ನಡನಾಡು ರಚನೆಗೊಳ್ಳುವುದರ ಹಿಂದೆ ಅನೇಕರ ಹೋರಾಟ, ಪರಿಶ್ರಮ ಇದೆ. ನಾಡು ನುಡಿಯ ಬಗ್ಗೆ ಚಿಂತನೆ ನಡೆಸಿ ಜಾತಿ ಧರ್ಮಗಳನ್ನು ಬದಿಗೊತ್ತಿ ಇಲ್ಲಿ ವಾಸಿಸುವ ಎಲ್ಲರೂ ಒಂದೇ ಎಂಬ ಭಾವನೆಯಿಂದ ಕನ್ನಡ ಜನಾಂಗವನ್ನು ಉಳಿಸಿ ಬೆಳೆಸಬೇಕಿದೆ, ಅನ್ನ ನೀಡುವ ನೆಲ ರಕ್ಷಿಸಬೇಕಾಗಿದೆ ಎಂದರು.ನಂತರ ಶಾಲಾ ಮಕ್ಕಳಿಂದ ಸಾಸ್ಕೃತಿಕ ಕಾರ್ಯಕ್ರಮಗಳು ನಡೆದವು.

ನಗರಸಭೆ ಅಧ್ಯಕ್ಷೆ ಮೆಹರೂನ್ ಬೇಗo, ನಗರಸಭೆ ಪೌರಾಯುಕ್ತ ರಮೇಶ್ ಬಡಿಗೇರ್, ಪೋಲಿಸ್ ಸರ್ಕಲ್ ಇನ್ಸ್ಪೆಕ್ಟರ್ ಸಾಹೇಬ್ ಗೌಡ ಪಾಟೀಲ್, ಸಿಪಿಐ ಶರಣಗೌಡ ದ್ಯಾಮಣ್ಣನವರ್, ಅಬಕಾರಿ ಉಪನಿರೀಕ್ಷಕ ವಿಜಯ ಹಿರೇಮಠ್, ಕಸಾಪ ಅಧ್ಯಕ್ಷ ಡಾ. ರವೀಂದ್ರನಾಥ್ ಹೊಸ್ಮನಿ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲನಗೌಡ ಬಿರಾದಾರ್, ಲಕ್ಷ್ಮಣ ಲಾಳಸೇರಿ, ರಮೇಶ್, ಬಸವರಾಜ್, ಸೂರ್ಯಕಾಂತ್, ವೀರಭದ್ರಯ್ಯ, ಸೇರಿದಂತೆ ಶಿಕ್ಷಕರು, ಕಂದಾಯ ಇಲಾಖೆ ಸಿಬ್ಬಂದಿಗಳು, ಕನ್ನಡಪರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಶಾಲಾ ಮಕ್ಕಳು ಭಾಗವಹಿಸಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ