ಸರ್ಕಾರದ ಗ್ಯಾರಂಟಿಯಿಂದ ಬಡವರ ರಕ್ಷಣೆ: ಸಚಿವ ಡಿ.ಸುಧಾಕರ್

KannadaprabhaNewsNetwork |  
Published : Mar 03, 2024, 01:30 AM IST
ಪೋಟೋ೨ಸಿಎಲ್‌ಕೆ೧ ಚಳ್ಳಕೆರೆ ನಗರದ ಅಂಬೇಡ್ಕರ್‌ನಗರದಲ್ಲಿ ಕರ್ನಾಟಕ ಕೊಳಗೇರಿಅಭಿವೃದ್ದಿ ಮಂಡಳಿಯ ವತಿಯಿಂದ ನಿರ್ಮಾಣವಾದ ಸಿದ್ದಪಡಿಸಿದ ಮನೆಗಳ ಮನೆಹಂಚಿಕೆ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಮಾತನಾಡಿದರು. | Kannada Prabha

ಸಾರಾಂಶ

ಮನೆಹಂಚಿಕೆ ಪತ್ರ ವಿತರಣೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚ್ಯುಯಲ್ ಮೂಲಕ ಚಾಲನೆ ನೀಡಿದರು. ಚಳ್ಳಕೆರೆ ಕ್ಷೇತ್ರದಲ್ಲಿ ೧೯೮೪ರಲ್ಲೇ ಕೊಳಚೆ ಪ್ರದೇಶಗಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಲಾಗಿತ್ತು. ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಟಿ.ರಘುಮೂರ್ತಿ ಹಂತ, ಹಂತವಾಗಿ ಕೊಳಚೆ ಪ್ರದೇಶ ನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ವಿಧಾನಸಭಾ ಚುನಾವಣೆ ವೇಳೆ ಜನರಿಗೆ ಭರವಸೆ ನೀಡಿದ್ದ ಐದು ಗ್ಯಾರಂಟಿಗಳ ಈಡೇರಿಸಿ ಬಡವರ, ನಿರ್ಗತಿಕರ ರಕ್ಷಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಫಲವಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.

ಅಂಬೇಡ್ಕರ್‌ ನಗರದಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾದ ಮನೆಗಳ ಮನೆಹಂಚಿಕೆ ಪತ್ರ ಶನಿವಾರ ವಿತರಿಸಿ ಮಾತನಾಡಿದರು. ಈ ಮನೆಹಂಚಿಕೆ ಪತ್ರ ವಿತರಣೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚ್ಯುಯಲ್ ಮೂಲಕ ಚಾಲನೆ ನೀಡಿದರು. ಚಳ್ಳಕೆರೆ ಕ್ಷೇತ್ರದಲ್ಲಿ ೧೯೮೪ರಲ್ಲೇ ಕೊಳಚೆ ಪ್ರದೇಶಗಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಲಾಗಿತ್ತು. ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಟಿ.ರಘುಮೂರ್ತಿ ಹಂತ, ಹಂತವಾಗಿ ಕೊಳಚೆ ಪ್ರದೇಶ ನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಣ್ಣ ಕೈಗಾರಿಕೆಗಳ ಮಂಡಳಿ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ಮಾತನಾಡಿ, ಪ್ರಧಾನಮಂತ್ರಿ ಆವಾಸ್ ಯೋಜನೆ, ಸರ್ವರಿಗೂ ಸೂರು ಯೋಜನೆಯಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಮನೆಗಳ ವಿತರಣೆ ಕಾರ್ಯ ನಡೆಯುತ್ತಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ೧೦ ಸ್ಲಂ ಘೋಷಿತ ಪ್ರದೇಶಗಳಿದ್ದು, ೫, ೫೧೨ಕುಟುಂಬಗಳು ವಾಸವಾಗಿವೆ. ೨೯,೮೪೦ ಜನಸಂಖ್ಯೆ ಹೊಂದಿದೆ. ಇದರಲ್ಲಿ ಪರಿಶಿಷ್ಟ ಜಾತಿ, ವರ್ಗದ ಜನರೇ ಹೆಚ್ಚಿದ್ದಾರೆ. ₹೬೩.೯೩ ಕೋಟಿ ವೆಚ್ಚದಲ್ಲಿ ೧೧೨೭ ಮನೆಗಳು ಮಂಜೂರಾಗಿದ್ದು, ೮೫೦ ಮನೆಗಳು ಪೂರ್ಣಗೊಂಡಿವೆ, ೨೭೭ ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ. ಶನಿವಾರ ೧೦ ಜನರಿಗೆ ಸಾಂಕೇತಿಕವಾಗಿ ಪತ್ರ ವಿತರಣೆ ಮಾಡಲಾಗಿದೆ ಎಂದರು.

ಕಾರ್ಯಕ್ರಮ ಉದ್ದೇಶಿಸಿ ಕಾಂಗ್ರೆಸ್ ಹಿರಿಯ ನಾಯಕ ಟಿ.ಪ್ರಭುದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂದ್ರ, ಸುಮಕ್ಕ, ಜೈತುಂಬಿ, ಪ್ರಭಾರ ಪೌರಾಯುಕ್ತ ಕೆ.ವಿನಯ್, ಸಹಾಯಕ ಇಂಜಿನಿಯರ್ ಲೋಕೇಶ್, ಸ್ಲಂಬೋರ್ಡ್ ಇಂಜಿನಿಯರ್ ಕೃಷ್ಣಾರೆಡ್ಡಿ, ಕಾಂಗ್ರೆಸ್ ಮುಖಂಡರಾದ ಅನ್ವರ್‌ ಮಾಸ್ಟರ್, ಬಡಗಿಪಾಪಣ್ಣ, ಟಿ.ಭದ್ರಿ, ನಾಗಲಕ್ಷ್ಮಿ ಮುಂತಾದವರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...