ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ಇಬ್ಬರು ಮಕ್ಕಳ ರಕ್ಷಣೆ

KannadaprabhaNewsNetwork |  
Published : Jun 25, 2024, 12:31 AM IST
ಬೆಂ.ಗ್ರಾ ಜಿಲ್ಲೆಯ ವಿವಿದೆಡೆ ಕಾರ್ಮಿಕ ಇಲಾಖೆ, ಬಾಲ ಕಾರ್ಮಿಕ ಯೋಜನೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅರಿವು ಮೂಡಿಸಿದರು. | Kannada Prabha

ಸಾರಾಂಶ

ಈ ತಪಾಸಣೆ ವೇಳೆಯಲ್ಲಿ ಒಬ್ಬ ಬಾಲ ಕಾರ್ಮಿಕ ಹಾಗೂ ಒಬ್ಬ ಕಿಶೋರ ಕಾರ್ಮಿಕ ಸೇರಿ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ರಕ್ಷಿಸಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಎದುರು ಮುಂದಿನ ಕ್ರಮಕ್ಕಾಗಿ ಹಾಜರುಪಡಿಸಲಾಗಿದೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ-1098 ಜಂಟಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿ ಸಂಘಟಿಸಿತ್ತು.

ಈ ತಪಾಸಣೆ ವೇಳೆಯಲ್ಲಿ ಒಬ್ಬ ಬಾಲ ಕಾರ್ಮಿಕ ಹಾಗೂ ಒಬ್ಬ ಕಿಶೋರ ಕಾರ್ಮಿಕ ಸೇರಿ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ರಕ್ಷಿಸಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಎದುರು ಮುಂದಿನ ಕ್ರಮಕ್ಕಾಗಿ ಹಾಜರುಪಡಿಸಲಾಗಿದೆ.

ಅಲ್ಲದೇ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ 20 ಸಾವಿರ ರುಪಾಯಿಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು 50 ಸಾವಿರ ರುಪಾಯಿವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.

ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದರು.

ಈ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಕಾರ್ಮಿಕ ಅಧಿಕಾರಿ ನಾಗೇಂದ್ರ ಎಚ್ ಆರ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಕಾರ್ಮಿಕ ನಿರೀಕ್ಷಕ ಯತೀಶ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಮ್ಮ, ಶಿಕ್ಷಣ ಇಲಾಖೆಯ ಬಿ.ಆರ್.ಸಿ ನಾಗರಾಜು, ಸ್ವಯಂ ಸೇವಕ ಸಣ್ಣಕರಿಯಪ್ಪ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ‌ಹಾಗೂ ಸೌಮ್ಯ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಶಕಗಳಲ್ಲೇ ಅಪರೂಪದ ಘಟನೆ ಸ್ಪೀಕರ್‌ ಖಾದರ್‌ ಎದ್ದು ಹೋದರ್‌!
2 ಸಾವಿರ ಬೋಧಕ ಹುದ್ದೆಗಳ ನೇರ ನೇಮಕಾತಿ : ಸುಧಾಕರ್‌