ಕನ್ನಡಪ್ರಭ ವಾರ್ತೆ ಉಡುಪಿ
ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿ ಆಡಿದ ಮಾತುಗಳು ಮತ್ತು ಕರ್ನಾಟಕ ವಿಧಾನ ಸಭಾ ಅಧಿವೇಶನದಲ್ಲಿ ಶಾಸಕ ಸಿ. ಟಿ. ರವಿ ಅವರು ರಾಜ್ಯದ ಮಹಿಳಾ ಮತ್ತು ಮಕ್ಕಳ ಸಚಿವರಾದ ಲಕ್ಷೀ ಹೆಬ್ಬಾಲ್ಕರ್ ಬಗ್ಗೆ ಆಡಿದ ಅಕ್ಷೇಪಾರ್ಹ ಮಾತುಗಳನ್ನು ಖಂಡಿಸಿ ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ದಲಿತ ಹಕ್ಕುಗಳ ಸಮಿತಿ ಹಾಗೂ ಜನವಾದ ಮಹಿಳಾ ಸಂಘ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಅಂಬೇಡ್ಕರ್ ರವರಿಗೆ ಅವಮಾನ ಮಾಡಿದ ಅಮಿತ್ ಶಾ ಅವರಿಗೆ ಸಚಿವರಾಗಿ ಮುಂದುವರಿಯುವ ಯಾವ ಅಧಿಕಾರವೂ ಇಲ್ಲ ಅವರು ತಕ್ಷಣವೇ ರಾಜಿನಾಮೆ ಕೊಡಬೇಕು. ಕರ್ನಾಟಕದ ವಿಧಾನ ಪರಿಷತ್ನಲ್ಲಿ ಬಿಜೆಪಿಯ ಶಾಸಕ ಸಿ.ಟಿ.ರವಿ ಅವರು ರಾಜ್ಯದ ಮಹಿಳಾ ಸಚಿವರನ್ನು ಉದ್ದೇಶಿಸಿ ಅಕ್ಷೇಪಾರ್ಹ ಮಾತುಗಳನ್ನು ನಾವು ಖಂಡಿಸುತ್ತೇವೆ. ಸಡಿಲ ನಾಲಗೆಯ ಹಗುರ ಮಾತುಗಳಾನ್ನಾಡುವ ಚಾಳಿಯನ್ನು ಹೊಂದಿರುವ ಸಿ.ಟಿ. ರವಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಲಾಯಿತು.ಪ್ರತಿಭಟನಾ ಸಭೆಯಲ್ಲಿ ಜನವಾದಿ ಮಹಿಳಾ ಸಂಘದ ಜಿಲ್ಲಾ ಕಾರ್ಯದರ್ಶಿ ಶೀಲಾವತಿ, ಕುಂದಾಪುರ ಮಹಿಳಾ ಸಂಘದ ಅಧ್ಯಕ್ಷರಾದ ಬಲ್ಕೀಸ್, ಬೈಂದೂರು ಮಹಿಳಾ ಸಂಘದ ಅಧ್ಯಕ್ಷರಾದ ನಾಗರತ್ನ ನಾಡ, ಮುಖಂಡರಾದ ನಳಿನಿ ಎಸ್., ಗಿರಿಜಾ, ರವಿಕಲಾ, ಪದ್ದು, ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಸಂಚಾಲಕ ಸಂಜೀವ ಬಳ್ಕೂರು, ಮುಖಂಡರಾದ ರವಿ ವಿ. ಎಮ್. ಕುಂದಾಪುರ, ರಾಮ ಕಾರ್ಕಡ ಸಾಲಿಗ್ರಾಮ, ರಂಗನಾಥ ಉಡುಪಿ, ಸಿಐಟಿಯು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಕೋಶಾಧಿಕಾರಿ ಶಶಿಧರ ಗೋಲ್ಲ, ಉಪಾಧ್ಯಕ್ಷ ರಾದ ಎಚ್.ನರಸಿಂಹ, ಚಿಕ್ಕ ಮೊಗವೀರ, ಕಾರ್ಯದರ್ಶಿ ಚಂದ್ರಶೇಖರ, ಸಿಐಟಿಯು ಉಡುಪಿ ವಲಯ ಸಂಚಾಲಕರಾದ ಕವಿರಾಜ್. ಎಸ್.ಕಾಂಚನ್, ಮುಖಂಡರಾದ ಸುಭಾಸ್ ನಾಯಕ್, ಸದಾಶಿವ ಪೂಜಾರಿ, ಉಮೇಶ್ ಕುಂದರ್, ಮೋಹನ್, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ಕೋಣಿ ಉಪಸ್ಥಿತರಿದ್ದರು