ಅಮಿತ್‌ ಶಾ, ಸಿ.ಟಿ.ರವಿ ವಿರುದ್ಧ ಪ್ರತಿಭಟನೆ

KannadaprabhaNewsNetwork |  
Published : Dec 24, 2024, 12:47 AM IST
ಚಿತ್ರದುರ್ಗದಲ್ಲಿ ಆಮ್‌ಆದ್ಮಿ ಪಕ್ಷದಿಂದ ಕೇಂದ್ರದ ಗೃಹ ಮಂತ್ರಿ ಅಮಿತ್‌ ಶಾ ಹಾಗೂ ಸಿಟಿ ರವಿ ವಿರುದ್ದ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್‌ ಬಗ್ಗೆ ಅವಹೇಳನಕಾರಿಯಾದ ಮಾತುಗಳನ್ನು ಆಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಶಾ ರವರನ್ನು ಸಚಿವ ಸಂಪುಟದಿಂದ ಕಿತ್ತು ಹಾಕಬೇಕು, ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯನ್ನು ಬಿಜೆಪಿಯಿಂದ ಹಾಗೂ ಪರಿಷತ್ ಸ್ಥಾನದಿಂದ ಉಚ್ಛಾಟಿಸುವಂತೆ ಆಗ್ರಹಿಸಿ ನಗರದಲ್ಲಿ ಆಮ್‌ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್‌ ಬಗ್ಗೆ ಅವಹೇಳನಕಾರಿಯಾದ ಮಾತುಗಳನ್ನು ಆಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಶಾ ರವರನ್ನು ಸಚಿವ ಸಂಪುಟದಿಂದ ಕಿತ್ತು ಹಾಕಬೇಕು, ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯನ್ನು ಬಿಜೆಪಿಯಿಂದ ಹಾಗೂ ಪರಿಷತ್ ಸ್ಥಾನದಿಂದ ಉಚ್ಛಾಟಿಸುವಂತೆ ಆಗ್ರಹಿಸಿ ನಗರದಲ್ಲಿ ಆಮ್‌ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ನೀಲಕಂಠೇಶ್ವರ ದೇವಾಲಯದಿಂದ ಪಾದಯಾತ್ರೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಆಗಮಿಸಿದ ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು ದಾರಿಯುದ್ದಕ್ಕೂ ಅಮಿತಾ ಶಾ ಹಾಗೂ ಸಿ.ಟಿ.ರವಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಆಮ್‌ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್ ಮಾತನಾಡಿ, ನಮಗೆ ಅಂಬೇಡ್ಕರ್ ನೀಡಿದ ಸಂವಿಧಾನವೇ ದೇವರು, ಈ ದೇವರು ನೀಡಿದ ಸಂವಿಧಾನದಿಂದ ನಮ್ಮ ಬದುಕಿಗೆ ಸಹಾಯ ಸಹಕಾರಿಯಾಗಿದೆ, ಇದರಿಂದ ನಾವುಗಳು ಮನುಷ್ಯರಾಗಲು ಸಾಧ್ಯವಾಗಿದೆ, ಅಲ್ಲದೆ ಆಧಿಕಾರವನ್ನು ಅನುಭವಿಸಲು ಸಹಾ ಸಹಾಯವಾಗಿದೆ. ಬೇರೆ ಯಾವ ದೇವರು ಸಹಾ ನಮಗೆ ಸಹಾಯ ಮಾಡಿಲ್ಲ, ಅಲ್ಲದೆ ನಾವುಗಳು ದೇವರು ಹಾಗೂ ಸ್ವರ್ಗವನ್ನು ನೋಡಿಲ್ಲ, ನಮಗೆ ಅಂಬೇಡ್ಕರ್ ನೀಡಿದ ಸಂವಿಧಾನವೇ ದೇವರಾಗಿದೆ. ಈ ಹಿನ್ನಲೆಯಲ್ಲಿ ನಾವುಗಳು ಅವರ ಜಪವನ್ನು ಮಾಡುತ್ತೇವೆ ಎಂದರು.ಆಮ್ ಆದ್ಮಿ ಪಾರ್ಟಿಯ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಮಾತನಾಡಿ, ಬಿಜೆಪಿಯಲ್ಲಿ ಇರುವ ರವಿಯವರು ಮಹಿಳೆಯವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅವರ ಮನೆಯ ಹೆಣ್ಣು ಮಕ್ಕಳ ಬಗ್ಗೆ ಈ ರೀತಿಯಾಗಿ ಮಾತನಾಡಿದ್ದರೇ ಸುಮ್ಮನೇ ಇರುತ್ತಿದ್ದರಾ, ಬೇರೆಯವರ ಹೆಣ್ಣು ಮಕ್ಕಳು ಹೆಣ್ಣು ಮಕ್ಕಳಲ್ಲವೇ ಚುನಾಯುತ ಪ್ರತಿನಿಧಿಗಳು ತಮ್ಮ ನಡೆ-ನುಡಿಯಲ್ಲಿ ಸರಿಯಾಗಿ ಇರಬೇಕಿದೆ. ನೀವುಗಳು ಸಾರ್ವಜನಿಕ ಕ್ಷೇತ್ರದಲ್ಲಿ ಇರುವವರು ಜನತೆ ನಿಮ್ಮನ್ನು ನೋಡುತ್ತಿರುತ್ತಾರೆ ಎಂಬ ಗಮನ ಇರಲಿ. ಮಹಿಳೆಯರನ್ನು ಅವಮಾನ ಮಾಡಿದ ಸಿ.ಟಿ.ರವಿಯವರನ್ನು ಕೂಡಲೇ ಬಿಜೆಪಿಯಿಂದ ಹಾಗೂ ವಿಧಾನ ಪರಿಷತ್‌ ಸದಸ್ಯ ಸ್ಥಾನದಿಂದ ಉಚ್ಛಾಟನೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ರಾಮಣ್ಣ, ಹೊಳಲ್ಕೆರೆ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜನ್, ವಿನೋಧಮ್ಮ, ಶಿವಮ್ಮ, ರವಿ, ಸುಧಾಕರ್, ಪ್ರಹ್ಲಾದ್, ತನ್ವೀರ್, ಲೋಕೇಶ್, ಸಂದೀಪ್‍ ಸೇರಿದಂತೆ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌