ಕನ್ನಡಪ್ರಭ ವಾರ್ತೆ ಮೈಸೂರು
ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ಜ.1 ರಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ದೌರ್ಜನ್ಯ ಹಾಗೂ ಹೀನಾಯ ಬಲಪ್ರಯೋಗ ನಡೆಸಿ ಬಂಧಿಸಿದ್ದಲ್ಲದೆ, ಕೊಲೆ ಯತ್ನ, ಕೊಲೆ ಬೆದರಿಕೆಯಂತಹ ಮೊಕದ್ದಮೆ ಹೂಡಿರುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಇದು ನ್ಯಾಯಯುತ ಹೋರಾಟ ಹತ್ತಿಕ್ಕುವ ಸರ್ಕಾರದ ಹತಾಶ ಕ್ರಮ. ಸಾರ್ವಜನಿಕ ಹಿತಾಸಕ್ತಿಗೆ ಸಂಪೂರ್ಣ ವಿರುದ್ಧವಾಗಿರುವ ಜನ ವಿರೋಧಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ. ಇದನ್ನು ವಿರೋಧಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಆಗ್ರಹಿಸಿ ಕಳೆದ 106 ದಿನಗಳಿಂದ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ. ಸರ್ಕಾರದ ಮೇಲೆ ಒತ್ತಡ ಹೇರಲು ಸಚಿವ ಎಂ.ಬಿ. ಪಾಟೀಲ್ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾಗ ಪೊಲೀಸರು ಅನಾಗರಿಕರಂತೆ ವರ್ತಿಸಿದ್ದಾರೆ ಎಂದು ಅವರು ಕಿಡಿಕಾರಿದರು.ಜನರಿಗೆ ಲಭ್ಯವಾಗಬೇಕಾದ ಸಾರ್ವಜನಿಕ ಆರೋಗ್ಯ ಸೇವೆಗಾಗಿ ನಡೆಯುತ್ತಿರುವ ಜನಾಂದೋಲನ ಕುಗ್ಗಿಸಲು ಸರ್ಕಾರ ಕೈಗೊಂಡಿರುವ ಕ್ರಮ ಅತ್ಯಂತ ಹೀನ ಮತ್ತು ಅಧಿಕಾರಶಾಹಿಯಾಗಿದೆ. ಜನರನ್ನು ಭಯಭೀತಗೊಳಿಸಿ ಹೋರಾಟ ಇನ್ನಷ್ಟು ವ್ಯಾಪಿಸುವುದನ್ನು ತಡೆಯುವುದೇ ಈ ಬಂಧನದ ಉದ್ದೇಶ ಎಂದು ಅವರು ಆರೋಪಿಸಿದರು.
ಸಂಘಟನೆಯ ರಾಜ್ಯಾಧ್ಯಕ್ಷ ಎಂ. ಶಶಿಧರ್, ಜಿಲ್ಲಾಧ್ಯಕ್ಷ ಎಚ್.ಎಂ. ಬಸವರಾಜು, ಮುಖಂಡರಾದ ಉಗ್ರನರಸಿಂಹೇಗೌಡ, ಎಸ್.ಎನ್. ಸ್ವಾಮಿ, ಕೆಲ್ಲಹಳ್ಳಿ ರಾಮಣ್ಣ, ಶಿವಣ್ಣ ನಾಯಕ, ಮಹೇಶ್, ಬಿ. ರವಿ, ಜಯಲಕ್ಷ್ಮೀ, ಸುಮತಿ, ನಾಗರತ್ನ, ಮಂಗಳಮ್ಮ, ಚಂದ್ರಶೇಖರ್ ಮೇಟಿ, ಟಿ.ಆರ್. ಸುನಿಲ್, ಸೀಮಾ, ನೀತುಶ್ರೀ, ಪುಷ್ಪಾ ಮೊದಲಾದವರು ಇದ್ದರು.
ಮೈಸೂರು: ಸಾರ್ವಜನಿಕ ವಿವಿಗಳು ಅವನತಿಯ ಹಾದಿಯಲ್ಲಿದ್ದು, ಸರ್ಕಾರ ಅವುಗಳ ಪುನಶ್ಚೇತನಕ್ಕೆ ಗಮನ ಹರಿಸಬೇಕು ಎಂದು ಜನಾಂದೋಲನ ಮಹಾ ಮೈತ್ರಿ ರಾಜ್ಯ ಸಂಚಾಲಕ ಉಗ್ರ ನರಸಿಂಹೇಗೌಡ ಆಗ್ರಹಿಸಿದರು.
ಕಳೆದ ಎರಡೂವರೆ ವರ್ಷಗಳಲ್ಲಿ ನಾಲ್ವರು ಪ್ರಧಾನ ಕಾರ್ಯದರ್ಶಿಗಳನ್ನು ಬದಲಾಯಿಸಿದ್ದಾರೆ. ವಿವಿಗಳ ಬೋಧಕ ಸಿಬ್ಬಂದಿಗೆ ನೀಡಲು ಹಣವಿಲ್ಲ ಎಂದು ದೂರಿದರು.