ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಇತ್ತೀಚೆಗೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ವಿವಸ್ತ್ರ ಘಟನೆ ಖಂಡಿಸಿ ಬಿಜೆಪಿಯು ರಾಜ್ಯಾದ್ಯಂತ ಪ್ರತಿಭಟನೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಬಸವೇಶ್ವರ ಸರ್ಕಲ್‌ನಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ, ದಲಿತರ ಮೇಲೆ ಕೊಲೆಗಳು, ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿದ್ದು, ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದಂತಹ ಎರಡು ಘಟನೆಗಳು ಯಾರೂ ಮರೆಯಲು ಸಾಧ್ಯವಿಲ್ಲ. ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿರುವಂತಹದ್ದು ಈ ಸರ್ಕಾರಕ್ಕೆ ಕಪ್ಪು ಚುಕ್ಕೆ. ಈ ಸರ್ಕಾರ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮುಂದುವರೆಯಬಾರದು. ಗೃಹಮಂತ್ರಿ ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಅದರಲ್ಲಿ ಬಿಜೆಪಿ ಕಾರ್ಯ ಕರ್ತ ಪೃಥ್ವಿ ಸಿಂಗ್ ಕೊಲೆ ಮಾಡುವುದಕ್ಕೆ ಪ್ರಯತ್ನ ಮಾಡಿದ್ದಾರೆ. ಸ್ವತಃ ಮಂತ್ರಿ ಲಕ್ಷ್ಮೀ ಹೆಬ್ಬಾಳಕ್ಕರ್ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಈ ಕೃತ್ಯವನ್ನು ಎಸಗಿದ್ದಾರೆ. ಅವರ ಹಿಂಬಾಲಕರನ್ನು ಕರೆದುಕೊಂಡು ಈ ಘಟನೆ ಮಾಡಿದ್ದಾರೆ. ಕೂಡಲೇ ಈ ಘಟನೆಯಲ್ಲಿ ಭಾಗಿಯಾದ ಚನ್ನರಾಜ ಹಟ್ಟಿಹೊಳಿ ಅವರ ಮೇಲೆ ಕ್ರಮ ಜರುಗಿಸಬೇಕು. ಲಕ್ಷ್ಮೀ ಹೆಬ್ಬಾಳಕ್ಕರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಸರ್ಕಾರದಿಂದ ಭದ್ರತೆ, ಸುರಕ್ಷತೆ ಇಲ್ಲ. ಕೇವಲ ವರ್ಗಾವಣೆ ದಂಧೆ, ಹಣ ಸಂಗ್ರಹ ಮಾಡುವುದು. ಲೋಕಸಭಾ ಚುನಾವಣೆಗೆ ರಾಜ್ಯದಿಂದ 5 ಸಾವಿರ ಕೋಟಿ ರು. ಫಂಡ್ ಕೊಡಲು ಹೊರಟಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಪರಿಷತ್ ಶಾಸಕ ಪಿ.ಎಚ್.ಪೂಜಾರ, ಮಾಜಿ ಶಾಸಕ ವೀರಣ್ಣ ಚರಂತಿಮಠ, ನಾರಾಯಣಸಾ ಭಾಂಡಗೆ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಜಿ. ಎನ್.ಪಾಟೀಲ, ಅಶೋಕ ಲಿಂಬಾವಳಿ, ಬಸವರಾಜ ಯಂಕಂಚಿ, ಸತ್ಯನಾರಾಯಣ ಹೇಮಾದ್ರಿ, ನಗರಸಭೆ ಸದಸ್ಯ ಶ್ರೀನಾಥ ಸಜ್ಜನ, ಜ್ಯೋತಿ ಭಜಂತ್ರಿ, ಸದಾನಂದ ನಾರಾ, ಮಲ್ಲಿಕಾರ್ಜುನ ಕಾಂಬಳೆ, ರಾಜು ಗಾಣಗೇರ, ರಾಜು ನಾಯಕ ಸೇರಿದಂತೆ ಕಾರ್ಯಕರ್ತ ರು ಭಾಗವಹಿಸಿದ್ದರು.---16ಬಿಕೆಟಿ5 ರಾಜ್ಯ ಸರ್ಕಾರ ವಿರುದ್ದ ಭಾರತೀಯ ಜನತಾ ಪಾರ್ಟಿಯು ನಗರದ ಬಸವೇಶ್ವರ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದರು)