ಮುಸಲ್ಮಾನರಿಗೆ ₹10 ಸಾವಿರ ಕೋಟಿ ಕೊಡುತ್ತೇನೆ ಎಂದಿದ್ದ ಸಿದ್ದರಾಮಯ್ಯ
ಮುಸ್ಲಿಂ ಸುಮುದಾಯಕ್ಕೆ ₹10 ಸಾವಿರ ಕೋಟಿ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹೇಳಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಭಾಗವಹಿಸಿದ್ದರು. ಆಗ ಮುಸ್ಲಿಮರಿಗೆ ₹10 ಸಾವಿರ ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಇದು ಸಂವಿಧಾನ ವಿರೋಧಿಯಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.ಅಲ್ಲದೇ ಹುಬ್ಬಳಿಯ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಮುಖ್ಯಮಂತ್ರಿಯವರು ಶಂಕಿತ ಐಸಿಸ್ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಇದನ್ನು ಕೂಡ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದರು.
ಅಲ್ಲದೇ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ತನ್ವೀರ್‌ಪೀರಾ ಎಂಬ ಮುಸ್ಲಿಂ ಮೌಲ್ವಿಗೆ ಶಂಕಿತ ಭಯೋತ್ಪಾದಕರ ಸಂಘಟನೆಗಳನಂಟು ಇದೆ. ಈತ ಒಬ್ಬ ದೇಶದ್ರೋಹಿ ಇಂತಹವರ ಜೊತೆ ವೇದಿಕೆ ಹಂಚಿಕೊಂಡಿರುವುದು ಸರಿಯಲ್ಲ. ಭಾರತದ ಆಂತರಿಕ ಭದ್ರತೆಗೆ ಸವಾಲಾಗಿರುವ ಈ ಪ್ರಕರಣವನ್ನು ಕೂಡ ಉನ್ನತಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
- - -
ಮುಸ್ಲಿಂ ಸುಮುದಾಯಕ್ಕೆ ₹10 ಸಾವಿರ ಕೋಟಿ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹೇಳಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಶುಕ್ರವಾರ ಶಿವಮೊಗ್ಗ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.