ಸಿಲಿಂಡರ್ ಬೆಲೆ ಏರಿಕೆಗೆ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Jun 11, 2026, 12:45 AM IST
ಕೇಂದ್ರ ಸರ್ಕಾರ ಸಿಲಿಂಡರ್‌ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಉಣಕಲ್ಲ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗೋಪನಕೊಪ್ಪದಲ್ಲಿ ಸೌದೆ ಒಲೆ ಹಚ್ಚಿ ಚಹಾ ಮಾಡುವ ಮೂಲಕ ಪ್ರತಿಭಟಿಸಲಾಯಿತು. | Kannada Prabha

ಸಾರಾಂಶ

ಗ್ಯಾಸ್ ಸಿಲಿಂಡರ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದರ ಹೊರೆ ಸಾಮಾನ್ಯ ಜನರು ಹಾಗೂ ಬಡ ಕುಟುಂಬಗಳ ಮೇಲೆ ಬೀಳುತ್ತಿದೆ.

ಹುಬ್ಬಳ್ಳಿ:

ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಬುಧವಾರ ಉಣಕಲ್ಲ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಗೋಪನಕೊಪ್ಪದಲ್ಲಿ ಸೌದೆ ಒಲೆ ಹಚ್ಚಿ ಚಹಾ ತಯಾರಿಸುವ ಮೂಲಕ ಪ್ರತಿಭಟಿಸಿದರು.

ಈ ವೇಳೆ ಹು-ಧಾ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮ ಬಲೋಗಿ ಮಾತನಾಡಿ, ಗ್ಯಾಸ್ ಸಿಲಿಂಡರ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದರ ಹೊರೆ ಸಾಮಾನ್ಯ ಜನರು ಹಾಗೂ ಬಡ ಕುಟುಂಬಗಳ ಮೇಲೆ ಬೀಳುತ್ತಿದೆ. ಕೇಂದ್ರ ಸರ್ಕಾರದ ನೀತಿಗಳಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅನ್ಯಾಯವಾಗುತ್ತಿದೆ. ತಕ್ಷಣವೇ ಸಿಲಿಂಡರ್ ದರ ಇಳಿಸಿ ಜನರಿಗೆ ಇದರಿಂದ ಆಗುತ್ತಿರುವ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರು ಚಹಾ ತಯಾರಿಸಿ ಸಾರ್ವಜನಿಕರಿಗೆ ಹಂಚುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸ್ನೇಹಾ ಜಾಧವ್, ಮೇಘನಾ ಹಿರೇಮಠ, ರೇಷ್ಮಾ ಶೇಕ್ ಸನದಿ, ಸುನಂದಾ ಕುಸುಗಲ್, ರೂಪಾ ಕುರಹಟ್ಟಿ, ಸುಜತಾ, ಗೀತಾ, ಗೀತಾ ಶೆಟ್ಟಿ, ಶಾರದಾ ಚಿಕ್ಕತುಂಬಿ, ಸಂಧ್ಯಾ ನಾಗರಹಳ್ಳಿ, ಬಸಮ್ಮ ಹಾದಿಮನಿ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರ: ರೈತರಿಂದ ಸಾಲ ವಸೂಲಿಗೆ ಬ್ರೇಕ್‌
ರಾಜ್ಯದ 768 ಬಂಕ್‌ಗಳಲ್ಲಿ ಅಳತೆಯ ವ್ಯತ್ಯಾಸ ಪತ್ತೆ!