ಮಾಜಿ ಸಚಿವ ರಾಜಣ್ಣ ವಜಾ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Sep 03, 2025, 01:00 AM IST
ಕೆ.ಎನ್.ರಾಜಣ್ಣ ವಜಾ ಖಂಡಿಸಿ ನಾಯಕ ಸಮುದಾಯದಿಂದ ಪ್ರತಿಭಟನೆ | Kannada Prabha

ಸಾರಾಂಶ

ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಮೈಸೂರು-ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಮೈಸೂರು-ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗ ಜಮಾಯಿಸಿದ ಸಂಘದ ಪದಾಧಿಕಾರಿಗಳು, ಯಜಮಾನರು, ಅಲ್ಲಿಂದ ಮಹರ್ಷಿ ವಾಲ್ಮೀಕಿ, ಕೆ.ಎನ್.ರಾಜಣ್ಣ ಭಾವಚಿತ್ರ ಹಿಡಿದು, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನ ತಲುಪಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು. ಕೆ.ಎನ್.ರಾಜಣ್ಣ ಅವರ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪವಿಲ್ಲ. ಕಳೆದ ೨ ವರ್ಷಗಳಿಂದ ಸಚಿವ ಸಂಪುಟದ ಸಹಕಾರ ಸಚಿವರಾಗಿ ಸಹಕಾರ ಸಂಘದ ಅಭಿವೃದ್ದಿಗೆ ಶ್ರಮಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮುದಾಯದವರಾದ ರಮೇಶ್ ಜಾರಕಿಹೊಳಿ, ಶ್ರೀರಾಮುಲು, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ, ಪೋಲಿಸ್ ಆಯುಕ್ತ ದಯಾನಂದ್, ಐಪಿಎಸ್‌ ಅಧಿಕಾರಿ ರವಿ.ಡಿ.ಚನ್ನಣ್ಣನವರ ಅವರಿಗೆ ಅನ್ಯಾಯ ಮಾಡಲಾಗಿದೆ. ಮುಂದುವರೆದ ವರ್ಗದ ರಾಜಕೀಯ ಮುಖಂಡರು, ಪಕ್ಷ ವಿರೋಧಿ ಹೇಳಿಕೆ ನೀಡಿದರೂ, ಅವರ ವಿರುದ್ದ ಯಾವುದೇ ಕ್ರಮ ಕೈಗೊಂಡ ಉದಾಹರಣೆಗಳಿಲ್ಲ ಎಂದು ಆರೋಪಿಸಿದರು.

ರಾಜಣ್ಣ ಅವರ ಏಳಿಗೆ ಸಹಿಸದೇ, ಯಾರೋ ದೂರು ನೀಡಿದರೆಂದು ರಾಜೀನಾಮೆಯನ್ನು ಪಡೆಯದೇ ಹೈಕಮಾಂಡ್ ವಜಾಕ್ಕೆ ಸೂಚಿಸಿರುವುದು ಖಂಡನೀಯ, ಇದರ ಹಿಂದೆ ಸಮುದಾಯದ ಮುಖಂಡ ಮೇಲೆ ಕುತಂತ್ರ ನಡೆದಿದೆ ಎಂದರು.ಸಿಎಂ ಸಿದ್ದರಾಮಯ್ಯ ಅವರು ಕೆ.ಎನ್.ರಾಜಣ್ಣ ಅವರನ್ನು ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬೇಕು, ಇಲ್ಲದಿದ್ದರೆ ಮುಂದಿ ದಿನಗಳಲ್ಲಿ ಮೈಸೂರು-ಚಾಮರಾಜನಗರ ಜಿಲ್ಲಾ ನಾಯಕ ಸಮುದಾಯ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲ್ಲಿ ಮೈಸೂರು-ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎಂ.ರಾಮಚಂದ್ರ, ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಮಹದೇವನಾಯಕ, ಉಪಾಧ್ಯಕ್ಷ ಪು.ಶ್ರೀನಿವಾಸನಾಯಕ, ನಗರಸಭೆ ಅಧ್ಯಕ್ಷ ಸುರೇಶ್, ಸದಸ್ಯ ಶಿವರಾಜ್, ಮೈಸೂರು ಘಟಕದ ಮಲ್ಲೇಶ್, ಮಹದೇವಸ್ವಾಮಿ, ವೆಂಕಟರಮಣನಾಯಕ, ಜಯಸುಂದರ, ಮುತ್ತಪ್ಪನಾಯಕ, ದೇವಪ್ಪನಾಯಕ, ಕಪಿನಿನಾಯಕ, ಮಹೇಶ್, ಮೈಸೂರು.ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ದಿ ಸಂಘದ ಪದಾಧಿಕಾರಿಗಳು, ಜಿಲ್ಲೆಯ ೫ ತಾಲೂಕುಗಳ ನಾಯಕ ಸಮುದಾಯದ ಮುಖಂಡರು, ಭಾಗವಹಿಸಿದ್ದರು.

PREV

Recommended Stories

ಜಾಗತಿಕ ಮಟ್ಟದಲ್ಲಿ ಸಾಧನೆ ನಾರಿ ಶಕ್ತಿಗೆ ಸಾಕ್ಷಿ
ಮಕ್ಕಳ ಕಲಿಕೆಯನ್ನು ಸೃಜನಾತ್ಮಕವಾಗಿಸಲು ನಲಿ-ಕಲಿ