ಎಸ್. ಬಂಗಾರಪ್ಪ ಜನ್ಮದಿನಾಚರಣೆ, ಜಿಲ್ಲಾ ಸಚಿವರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Nov 01, 2023, 01:01 AM IST
ಚಿತ್ರ: ಡಿ೩೧-ಬಿಡಿವಿಟಿದೀನದಲಿತರ, ಶೋಷಿತರ, ರೈತರ, ಕಾರ್ಮಿಕರ, ಎಲ್ಲಾ ವರ್ಗದ, ಎಲ್ಲಾ ಧರ್ಮದವರ ಹಿತ ಚಿಂತಕರಾದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ೯೦ನೇ ಜನ್ಮ ದಿನಾಚರಣೆ ಹಾಗು ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ಷೇತ್ರದ ನಿರ್ಲಕ್ಷ್ಯ ಖಂಡಿಸಿ ಮಂಗಳವಾರ ಭದ್ರಾವತಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು. | Kannada Prabha

ಸಾರಾಂಶ

ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ

ಕನ್ನಡಪ್ರಭ ವಾರ್ತೆ, ಭದ್ರಾವತಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 90ನೇ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಭದ್ರಾವತಿ ಕ್ಷೇತ್ರ ಅಭಿವೃದ್ಧಿ ನಿರ್ಲಕ್ಷ್ಯ ಖಂಡಿಸಿ ಮಂಗಳವಾರ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ಸಮಿತಿ ಅಧ್ಯಕ್ಷ ಬಿ.ಎನ್. ರಾಜು ಮಾತನಾಡಿ, ಮಾಜಿ ಸಿಎಂ ಎಸ್.ಬಂಗಾರಪ್ಪ ಅವರ ಪುತ್ರರಾದ ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗ, ಸಾಗರ, ಸೊರಬ ಕ್ಷೇತ್ರಗಳಿಗೆ ಮಾತ್ರವೇ ಪದೇಪದೆ ಭೇಟಿ ನೀಡುತ್ತಿದ್ದಾರೆ. ಆದರೆ, ಭದ್ರಾವತಿ ಕ್ಷೇತ್ರಕ್ಕೆ ಇದುವರೆಗೂ ಭೇಟಿ ನೀಡದೇ ನಿರ್ಲಕ್ಷ್ಯೆ ತೋರುತ್ತಿದ್ದಾರೆ ಎಂದು ಆರೋಪಿಸಿದರು. ಕ್ಷೇತ್ರದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಕಳಪೆ ಕಾಮಗಾರಿಗಳು ಹೆಚ್ಚಾಗಿ ಅವ್ಯವಸ್ಥೆ ಉಂಟಾಗಿದೆ. ಇದುವರೆಗೂ ಜಿಲ್ಲಾ ಸಚಿವರು ಕೆಡಿಪಿ ಸಭೆ ನಡೆಸಿ, ಸಮಸ್ಯೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿ ಬಗೆಹರಿಸದಿರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. 2017ರಲ್ಲಿ ಪ್ರಾರಂಭವಾದ ಡಾ. ಬಿ.ಆರ್. ಅಂಬೇಡ್ಕರ್ ಭವನ ಕಾಮಗಾರಿ ಅರ್ಧಕ್ಕೆ ನಿಂತಿದೆ. ಪದೇಪದೆ ಹೋರಾಟಗಳ ಮೂಲಕ ಮನವಿ ಸಲ್ಲಿಸಿದ್ದರೂ ಸಂವಿಧಾನ ಶಿಲ್ಪಿ ಹೆಸರಿಗೆ ಅವಮಾನವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ಸಮಸ್ಯೆ ಬಗಹರಿಸಬೇಕು. ಇಲ್ಲವಾದಲ್ಲಿ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು. ಸಮಿತಿ ಕಾರ್ಯಾಧ್ಯಕ್ಷ ಐ.ಎಲ್. ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಅಕ್ರಂ ಖಾನ್, ಉಪಾಧ್ಯಕ್ಷರಾದ ಬ್ರಹ್ಮಲಿಂಗಯ್ಯ, ರಂಗಪ್ಪ, ಶೌಕತ್, ಎಂ.ವಿ. ಚಂದ್ರಣ್ಣ, ಕಾರ್ಯದರ್ಶಿಗಳಾದ ರಾಕೇಶ್ ಕುಮಾರ್, ವೀರೇಶ್, ಪ್ರಧಾನ ಸಂಚಾಲಕರಾದ ಶ್ರೀನಿವಾಸ್, ಬಸವರಾಜ್, ಸಂಚಾಲಕರಾದ ಅಜಿತ್, ಅಜಯ್, ಕೆ.ಶಿವಕುಮಾರ್, ಟಿ.ಎನ್. ನಾಗರಾಜ ಇನ್ನಿತರರು ಉಪಸ್ಥಿತರಿದ್ದರು. - - - -ಡಿ31ಬಿಡಿವಿಟಿ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 90ನೇ ಜನ್ಮ ದಿನಾಚರಣೆ, ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ಷೇತ್ರದ ನಿರ್ಲಕ್ಷ್ಯ ಖಂಡಿಸಿ ಮಂಗಳವಾರ ಭದ್ರಾವತಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ