ಮಂಡ್ಯ: ಕೇರಳಂ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ನಿವಾಸದ ಮೇಲಿನ ಜಾರಿ ನಿರ್ದೇಶನಾಲಯ (ಇಡಿ) ದಾಳಿ ವಿರೋಧಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಸೇರಿದ ಕಾರ್‍ಯಕರ್ತರು, ಕರ್ನಾಟಕ ರಾಜ್ಯ ಸಮಿತಿ ಕರೆ ಮೇರೆಗೆ ನಗರದಲ್ಲಿ ಪ್ರತಿಭಟಿಸಿ, ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪಿಣರಾಯಿ ವಿಜಯನ್ ಅವರ ಮೇಲೆ ದಾಳಿ ಮಾಡಿದ್ದು, ಇದು ರಾಜಕೀಯ ಪ್ರೇರಿತ, ಪ್ರತಿಕಾರ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಿಣರಾಯಿ ವಿಜಯನ್ ಅವರಿಗೂ ಎಕ್ಸಲಾಜಿಕ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಾಲಯಗಳು ಪದೇ ಪದೇ ಹೇಳಿವೆ. ಆದರೂ ಅವರ ವಿರುದ್ಧ ದಾಳಿ ನಡೆಯುತ್ತಿದೆ. ಕೇರಳ ನೂತನ ಸಿಎಂ ವಿ.ಡಿ.ಸತೀಶನ್ ಅವರು ದಿಲ್ಲಿಯಲ್ಲಿ ಪ್ರಧಾನಮಂತ್ರಿ ಭೇಟಿಯಾದ ತಕ್ಷಣ ಇಂತಹ ಕ್ರಮವು ನಡೆಯುತ್ತಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ ಎಂದು ಅನುಮಾನ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಟಿ.ಎಲ್. ಕೃಷ್ಣೇಗೌಡ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಭರತ್ ರಾಜ್, ಸಿ.ಕುಮಾರಿ, ಬಿ. ಹನುಮೇಶ್, ಲಿಂಗರಾಜಮೂರ್ತಿ, ಜಿಲ್ಲಾ ಸಮಿತಿ ಸದಸ್ಯರಾದ ಕೃಷ್ಣ, ಚಂದ್ರಶೇಖರ, ಸುರೇಂದ್ರ, ಸುಶೀಲ, ಶೋಭಾ ಇತರರು ಭಾಗವಹಿಸಿದ್ದರು.
28ಕೆಎಂಎನ್ ಡಿ32
ಮಂಡ್ಯದಲ್ಲಿ ಸಿಪಿಐ(ಎಂ) ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.