ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನಾಳೆ ಪ್ರತಿಭಟನೆ

KannadaprabhaNewsNetwork |  
Published : Nov 16, 2025, 02:15 AM IST
ಫೋಟೊ ಕ್ಯಾಪ್ಷನ್)15-ಆರ್‌ಎನ್‌ಆರ್-01 | Kannada Prabha

ಸಾರಾಂಶ

ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲ. ಬೆಳೆಹಾನಿಗೆ ಪರಿಹಾರವಿಲ್ಲ. ಹೀಗಾಗಿ ರೈತ ವಿರೋಧಿ ಸರಕಾರದ ಕ್ರಮ ಖಂಡಿಸಿ ಎನ್‌ಡಿಎ ಹಾಗೂ ಜೆಡಿಎಸ್ ಪಕ್ಷದ ವತಿಯಿಂದ ನ.17ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಅರುಣಕುಮಾರ ಪೂಜಾರ ತಿಳಿಸಿದರು.

ರಾಣಿಬೆನ್ನೂರು:ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲ. ಬೆಳೆಹಾನಿಗೆ ಪರಿಹಾರವಿಲ್ಲ. ಹೀಗಾಗಿ ರೈತ ವಿರೋಧಿ ಸರಕಾರದ ಕ್ರಮ ಖಂಡಿಸಿ ಎನ್‌ಡಿಎ ಹಾಗೂ ಜೆಡಿಎಸ್ ಪಕ್ಷದ ವತಿಯಿಂದ ನ.17ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಅರುಣಕುಮಾರ ಪೂಜಾರ ತಿಳಿಸಿದರು.ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ರೈತನಿಗೆ ನೆಮ್ಮದಿ ಇಲ್ಲದಾಗಿದೆ. ರೈತನು ಬೆಳೆದ ಮೆಕ್ಕೆಜೋಳ ಹಾಗೂ ಕಬ್ಬಿಗೆ ಬೆಂಬಲ ಬೆಲೆ ನೀಡಬೇಕಾಗಿದೆ. ರೈತರ ಹೋರಾಟಕ್ಕೆ ಮಣಿದ ಸರಕಾರ ಬೆಳಗಾವಿ ಭಾಗದಲ್ಲಿ ಕಬ್ಬು ಬೆಳೆಗಾರರಿಗೆ 3300 ರು. ನೀಡಲಾಗುತ್ತಿದೆ. ಹೀಗಾಗಿ ರಾಜ್ಯದ ಎಲ್ಲಾ ಕಬ್ಬು ಬೆಳೆಗಾರರಿಗೆ 3500 ರು. ಬೆಂಬಲ ಬೆಲೆ ನೀಡಬೇಕು. ಈ ಭಾಗದಲ್ಲಿ ಭತ್ತ ಬೆಳೆಗಾರರು ಹೆಚ್ಚಾಗಿದ್ದು, ಈಗಾಗಲೇ ಕೇಂದ್ರ ಸರಕಾರ ಬೆಂಬಲ ನೀಡಿದೆ. ಆದ್ದರಿಂದ ರಾಜ್ಯ ಸರಕಾರವು ಭತ್ತಕ್ಕೆ ಹೆಚ್ಚಿನ ಬೆಲೆ ನೀಡಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಸರಕಾರದ ಅವಧಿಯಲ್ಲಿ ಬಿಎಸ್‌ವೈ ಹಾಗೂ ಬಸವರಾಜ ಬೊಮ್ಮಾಯಿ ಅವರು ಕೃಷಿ ಬಜೆಟ್ ಮಂಡನೆ ಮಾಡುವ ಮೂಲಕ ರೈತರ ಹಿತಕಾಯುವ ಕೆಲಸ ಮಾಡಿದ್ದರು. ಆದರೆ ಕಾಂಗ್ರೆಸ್ ಸರಕಾರ ರೈತರನ್ನು ಸಂಪೂರ್ಣವಾಗಿ ಕಡೆಗಾಣಿಸಿದ್ದು, ಸರಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಆದ್ದರಿಂದ ನಗರ ಹಾಗೂ ಗ್ರಾಮೀಣ ಘಟಕದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ವಿನಂತಿಸಿದರು.ಇನ್ನು ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಭೂತಪೂರ್ವ ಯಶಸ್ವಿಗಳಿಸಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಕ್ಷೇತ್ರದಲ್ಲಿ ಜಯಸಾಧಿಸಿದ್ದು, ದೇಶಕ್ಕೆ ಹೆಚ್ಚಿನ ಶಕ್ತಿಯನ್ನು ತುಂಬಿದೆ ಎಂದರು.ಇದೇ ಸಮಯದಲ್ಲಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ರಾಜ್ಯ ಘಟಕದ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ನಗರ ಘಟಕದ ಅಧ್ಯಕ್ಷ ಮಂಜುನಾಥ ಕಾಟಿ, ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶ ಶಿರಗೇರಿ, ಚೋಳಪ್ಪ ಕಸವಾಳ, ಕೆ.ಶಿವಲಿಂಗಪ್ಪ, ಎಸ್.ಎಸ್. ರಾಮಲಿಂಗಣ್ಣನವರ, ಎ.ಬಿ. ಪಾಟೀಲ, ಭಾರತಿ ಜಂಬಗಿ, ನಿಂಗರಾಜ ಕೋಡಿಹಳ್ಳಿ, ಪ್ರಕಾಶ ಪೂಜಾರ, ಸಿದ್ದಪ್ಪ ಚಿಕ್ಕಬಿದರಿ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!