ಹಿಂದಿ ಹೇರಿಕೆ ಕುತಂತ್ರ ಆರೋಪ ಕರವೇ ಪ್ರತಿಭಟನೆ

KannadaprabhaNewsNetwork |  
Published : Sep 29, 2025, 03:02 AM IST
ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟಿಸಿದರು. | Kannada Prabha

ಸಾರಾಂಶ

ರಾಜ್ಯದಲ್ಲಿ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಕುತಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದಿಂದ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟಿಸಲಾಯಿತು.

ಹಾವೇರಿ: ರಾಜ್ಯದಲ್ಲಿ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಕುತಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದಿಂದ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟಿಸಲಾಯಿತು.

ಬೆಂಗಳೂರಿನ ತಾಜ್‌ವೆಸ್ಟ್ ಎಂಡ್ ಪಂಚತಾರಾ ಹೋಟೆಲ್‌ನಲ್ಲಿ ಸಂಸದೀಯ ರಾಜಭಾಷಾ ಸಮಿತಿ ನಡೆಸುತ್ತಿದ್ದ ಹಿಂದಿಹೇರಿಕೆ ಕುತಂತ್ರಗಳ ಸಮಾಲೋಚನಾ ಕಾರ್ಯಾಗಾರಕ್ಕೆ ಕರವೇ ಮುಖಂಡರು, ಕಾರ್ಯಕರ್ತರು ತೆರಳಿ ಪ್ರತಿಭಟಿಸಿದ್ದಾರೆ. ರಾಜಾಭಾಷಾ ಆಯೋಗ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರ ನಡೆಸುತ್ತಾ ಬಂದಿದೆ. ಒಕ್ಕೂಟ ಸರ್ಕಾರ ರಾಜಭಾಷಾ ಆಯೋಗವನ್ನು ಈ ಕೂಡಲೇ ರದ್ದುಪಡಿಸಬೇಕು. ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರುವುದನ್ನು ನಾವು ಸಹಿಸುವುದಿಲ್ಲ. ಹಿಂದಿ ಹೇರಿಕೆ ದೇಶಕ್ಕೆ ಮಾರಕ ಮಾತ್ರವಲ್ಲ, ಭಾರತದ ಐಕ್ಯತೆಗೆ ಧಕ್ಕೆ ತರುತ್ತಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ, ಪ್ರಮುಖರಾದ ಕರಿಬಸಯ್ಯ ಎಸ್.ಬಿ., ಸತೀಶ್‌ಗೌಡ ಮುದಿಗೌಡ್ರ, ಮಾರುತಿ ಪೂಜಾರ, ಸಂತೋಷ ಪಾಟೀಲ್, ಸಿಕಂದರ್ ಓಲೆಕಾರ, ಬಿ.ಎಚ್. ಬಣಕಾರ, ಅಬ್ಬು ಕೋಡಮಗ್ಗಿ, ನಾಗೇಶ್ ಪೂಜಾರ, ಶಿವರಾಜ ಕುರುಬರ, ರಾಮಣ್ಣ ಅಗಸರ, ವಿಜಯಲಕ್ಷ್ಮಿ, ಈರಮ್ಮ, ಮಂಗಳ, ಲಕ್ಷ್ಮಿ, ರೂಪ, ಶೋಭಕ್ಕ ಹೊನ್ನಳ್ಳಿ, ಜಿ.ಎಸ್. ಕೊಟ್ರೇಶ, ಚೆನ್ನಪ್ಪ ಕುತ್ನ, ಸಲೀಂ ದುಕಾಂಧರ್, ಮಂಜು ಕಾಯಿಕಲ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ