ಒಳ ಮೀಸಲಾತಿ ಜಾರಿ ವಿರೋಧಿಸಿ ಪ್ರತಿಭಟನೆ

KannadaprabhaNewsNetwork |  
Published : Dec 10, 2024, 12:32 AM IST
ಪೊಟೋ: 9ಎಸ್‌ಎಂಜಿಕಪಿ06ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಒಳ ಮೀಸಲಾತಿ ಜಾರಿ ವಿರೋಧಿಸಿ ಜಿಲ್ಲಾ ಬಂಜಾರ ಸಮಾಜ, ಬಂಜಾರ ಧರ್ಮಗುರುಗಳ ಮಹಾಸಭಾ ಹಾಗೂ ಜಿಲ್ಲೆಯ ಬಂಜಾರ ಸಮಾಜದ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ಬಂಜಾರ ಸಮಾಜದವರು  ಬೃಹತ್‌ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಶಿವಮೊಗ್ಗ : ಒಳ ಮೀಸಲಾತಿ ಜಾರಿ ವಿರೋಧಿಸಿ ಜಿಲ್ಲಾ ಬಂಜಾರ ಸಮಾಜ, ಬಂಜಾರ ಧರ್ಮಗುರುಗಳ ಮಹಾಸಭಾ ಹಾಗೂ ಜಿಲ್ಲೆಯ ಬಂಜಾರ ಸಮಾಜದ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ಬಂಜಾರ ಸಮಾಜದವರು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ : ಒಳ ಮೀಸಲಾತಿ ಜಾರಿ ವಿರೋಧಿಸಿ ಜಿಲ್ಲಾ ಬಂಜಾರ ಸಮಾಜ, ಬಂಜಾರ ಧರ್ಮಗುರುಗಳ ಮಹಾಸಭಾ ಹಾಗೂ ಜಿಲ್ಲೆಯ ಬಂಜಾರ ಸಮಾಜದ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ಬಂಜಾರ ಸಮಾಜದವರು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.

ಒಳ ಮೀಸಲಾತಿಯನ್ನು ಜಾರಿ ಮಾಡಲು ಸರ್ಕಾರ ಹೊರಟಿದೆ. ಇದು ಬಂಜಾರ ಸಮುದಾಯಕ್ಕೆ ಕೊಡಲಿ ಪೆಟ್ಟು ನೀಡಲಿದೆ. ಯಾವುದೇ ಕಾರಣಕ್ಕೂ ಇದು ಜಾರಿಯಾಗಬಾರದು. ಬಂಜಾರ ಸಮಾಜದವರು ಎಚ್ಚೆತ್ತು ಕೊಳ್ಳಬೇಕಾಗಿದೆ. ಒಳ ಮೀಸಲಾತಿ ಜಾರಿಯಾಗುವುದರಿಂದ ವಿದ್ಯಾರ್ಥಿ ವೇತನ, ಉದ್ಯೋಗ ಸಿಗುವುದಿಲ್ಲ. ನಮ್ಮ ಸಮಾಜದ ನೌಕರ ವರ್ಗದವರಿಗೆ ಬಡ್ತಿಯೂ ಸಿಗುವುದಿಲ್ಲ. ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಸ್ಥಗಿತಗೊಳ್ಳುತ್ತದೆ. ಇದು ನಮ್ಮ ಸಮುದಾಯಕ್ಕೆ ಮಾರಕ. ಇದರ ಹಿಂದೆ ಒಳ ಮೀಸಲಾತಿ ಜಾರಿಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಒಳ ಮೀಸಲಾತಿ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆದಿಲ್ಲ. ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಗೊಳಿಸಲು ತಂದ ಮಸೂದೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಬೇಕಾಗಿದೆ. ಆದ್ದರಿಂದ ಸೂಕ್ತ ಅಧ್ಯಯನ ಇಲ್ಲದೇ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ನಡೆಯುತ್ತಿರುವ ಹುನ್ನಾರಗಳು ನಿಲ್ಲಬೇಕು. ಕೂಡಲೇ ಕರ್ನಾಟಕ ತಾಂಡಾ ನಿಗಮ ಸ್ಥಾಪಿಸಿ ಹೆಚ್ಚಿನ ಅನುದಾನ ನೀಡಬೇಕೆಂದು ಆಗ್ರಹಿಸಿದರು.ಬಂಜಾರ ಧರ್ಮಗುರುಗಳ ಮಹಾಸಭಾದ ಸರ್ದಾರ್ ಸೇವಾಲಾಲ್ ಮಹಾಸ್ವಾಮಿ, ಸೈನಾ ಭಗತ್ ಸ್ವಾಮೀಜಿ, ಶಿವಪ್ರಕಾಶ್ ಸ್ವಾಮೀಜಿ, ದೇನಾ ಭಗತ್ ಸ್ವಾಮೀಜಿ, ಶಾಸಕಿ ಶಾರದಾ ಪೂರ್ಯಾನಾಯ್ಕ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌