ಕೊಲ್ಕತ್ತಾ ವೈದ್ಯೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Aug 17, 2024, 12:50 AM IST
16ಕೆ21ಕೊಲ್ಕತ್ತಾದಲ್ಲಿ ವೈದ್ಯೆ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಕೊಲೆ ಪ್ರಕರಣ ಖಂಡಿಸಿ ಕಾರವಾರ ನಗರದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ಮೆರವಣಿಗೆ ನಡೆಸಿದರು. | Kannada Prabha

ಸಾರಾಂಶ

ಕಾರವಾರ ಮೆಡಿಕಲ್ ಕಾಲೇಜಿನಿಂದ(ಕ್ರಿಮ್ಸ್) ನಗರದ ಪ್ರಮುಖ ಬೀದಿಗಳಲ್ಲಿ ರ್ಯಾ.ಲಿ ನಡೆಸಿದ ವಿದ್ಯಾರ್ಥಿಗಳು, ವೈದ್ಯೆ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಂತೆ ಆಗ್ರಹಿಸಿದರು‌‌.

ಕಾರವಾರ: ಕೊಲ್ಕತ್ತಾದಲ್ಲಿ ವೈದ್ಯೆ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಕೊಲೆ ಪ್ರಕರಣ ಖಂಡಿಸಿ ನಗರದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ಮೆರವಣಿಗೆ ನಡೆಸಿದರು. ಕಾರವಾರ ಮೆಡಿಕಲ್ ಕಾಲೇಜಿನಿಂದ(ಕ್ರಿಮ್ಸ್) ನಗರದ ಪ್ರಮುಖ ಬೀದಿಗಳಲ್ಲಿ ರ್‍ಯಾಲಿ ನಡೆಸಿದ ವಿದ್ಯಾರ್ಥಿಗಳು, ವೈದ್ಯೆ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಂತೆ ಆಗ್ರಹಿಸಿದರು‌‌.

ವೈದ್ಯರಿಗೆ, ವೈದ್ಯ ವಿದ್ಯಾರ್ಥಿಗಳಿಗೆ ಸೂಕ್ತ ಭದ್ರತೆ ಒದಗಿಸಲು ಹಾಗೂ ವೈದ್ಯಕೀಯ ಸಿಬ್ಬಂದಿ ಮೇಲಿನ ದೌರ್ಜನ್ಯ ತಡೆಯುವಂತೆ ಘೋಷಣೆ ಕೂಗಿದರು. ಕಾರವಾರ ವೈದ್ಯಕೀಯ ಕಾಲೇಜಿನ ನೂರಾರು ವಿದ್ಯಾರ್ಥಿಗಳು

ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು‌.ವೈದ್ಯ ವಿದ್ಯಾರ್ಥಿನಿ ಹತ್ಯೆಗೆ ರೂಪಾಲಿ ಖಂಡನೆಕಾರವಾರ: ಕೋಲ್ಕತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಖಂಡನೀಯವಾಗಿದೆ. ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಪೈಶಾಚಿಕ ಕೃತ್ಯ ನಡೆದಿರುವ ಘಟನೆಯಿಂದ ಇಡಿ ದೇಶವೇ ತಲ್ಲಣಗೊಂಡಿದೆ. ಮಹಿಳೆಯರಿಗೆ ಸುರಕ್ಷತೆ, ಭದ್ರತೆಯನ್ನು ಒದಗಿಸುವ ಜವಾಬ್ದಾರಿ ಆ ರಾಜ್ಯದ ಮುಖ್ಯಮಂತ್ರಿಯಾದ ಮಮತಾ ಬ್ಯಾನರ್ಜಿ ಮೇಲಿದೆ. ದುರ್ಘಟನೆ ನಡೆದ ಮೇಲೆ ವೈದ್ಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೆ ಅವರಿಗೂ ರಕ್ಷಣೆ ಸಿಗದಂತಾಗಿದೆ. ಸಂದೇಶ ಖಾಲಿ ಘಟನೆ ಹಸಿರಿರುವಾಗಲೆ ಇನ್ನೊಂದು ಬರ್ಬರ ಕೃತ್ಯ ನಡೆದಿದೆ. ಪಶ್ಚಿಮ ಬಂಗಾಲದಲ್ಲಿ ಮಹಿಳೆಯರ ಜೀವಕ್ಕೆ ಭದ್ರತೆಯೇ ಇಲ್ಲವೇ ಎಂದು ಪ್ರಶ್ನಿಸಬೇಕಾಗಿದೆ.

ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು. ಇನ್ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ರೂಪಾಲಿ ಎಸ್.ನಾಯ್ಕ ಆಗ್ರಹಿಸಿದ್ದಾರೆ.ಇಂದು ಐಎಂಎ ಘಟಕದಿಂದ ಪ್ರತಿಭಟನೆ

ಹೊನ್ನಾವರ: ಕೊಲ್ಕತ್ತಾದಲ್ಲಿ ಇತ್ತೀಚಿಗೆ ನಡೆದ ಮೆಡಿಕಲ್ ಸ್ನಾತಕೋತ್ತರ ಪದವಿದರೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಆ. 17ರಂದು ಪ್ರತಿಭಟನೆ ನಡೆಸಲಾಗುವುದು ಎಂದು ತಾಲೂಕು ಐ.ಎಂ.ಎ. ಘಟಕದ ಅಧ್ಯಕ್ಷರಾದ ಡಾ. ವಿಶಾಲ್ ಹಾಗೂ ಕಾರ್ಯದರ್ಶಿ ವಿನಾಯಕ ರಾಯ್ಕರ್ ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ದೇಶವ್ಯಾಪಿ ಮುಷ್ಕರದ ಕರೆಯ ಮೇರೆಗೆ ಹೊನ್ನಾವರದಲ್ಲಿ ಶನಿವಾರ ಮುಂಜಾನೆ 6ರಿಂದ ಭಾನುವಾರ ಮುಂಜಾನೆ 6ರ ವರೆಗೆ ಎಲ್ಲ ಖಾಸಗಿ ಆಸ್ಪತ್ರೆ ಹಾಗೂ ದಂತ ಚಿಕಿತ್ಸಾ ಕೇಂದ್ರದಲ್ಲಿ ತುರ್ತು ಸೇವೆ ಮಾತ್ರ ಲಭ್ಯವಿದೆ. ಯಾವುದೇ ಒಪಿಡಿ ಮತ್ತು ಶಸ್ತ್ರಚಿಕಿತ್ಸೆ ನಡೆಸುವುದಿಲ್ಲ. ಸರ್ಕಾರಿ ಆಸ್ಪತ್ರೆಯ ವೈದ್ಯರು ಕೈಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿ ಸೇವೆ ಸಲ್ಲಿಸಲಿದ್ದಾರೆ ಎಂದಿದ್ದಾರೆ.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ