ಪ್ರಜ್ವಲ್‌ ರೇವಣ್ಣ ವಿರುದ್ಧ ಜೈಭೀಮ್‌ ಬ್ರಿಗೇಡ್‌ ಹಾಸನದಲ್ಲಿ ಪ್ರತಿಭಟನೆ

KannadaprabhaNewsNetwork |  
Published : May 03, 2024, 01:05 AM IST
2ಎಚ್ಎಸ್ಎನ್9 : ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಜೈಭೀಮ್‌ ಬ್ರಿಗೇಡ್‌ ಕಾರ್ಯಕರ್ತರು. | Kannada Prabha

ಸಾರಾಂಶ

ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯಿಂದ ಗುರುವಾರ ಹಾಸನದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಕಠಿಣ ಶಿಕ್ಷೆಗೆ ಒತ್ತಾಯಿಸಿ ಜಿಲ್ಲಾಡಳಿತ್ಕೆ ಮನವಿ । ರೇವಣ್ಣ ಕುಟುಂಕ್ಕೆ ನೀಡಿರುವ ಭದ್ರತೆ ಹಿಂಪಡೆಯಿರಿ

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯಲ್ಲಿ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯಿಂದ ಗುರುವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಸಮಿತಿ ಜಿಲ್ಲಾಧ್ಯಕ್ಷ ರಾಜೇಶ್ ಮಾಧ್ಯಮದೊಂದಿಗೆ ಮಾತನಾಡಿ, ‘ಜಿಲ್ಲೆಯಲ್ಲಿ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹೊಳೆನರಸೀಪುರದ ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು ಹಾಗೂ ಅವರ ಕುಟುಂಬಕ್ಕೆ ಭದ್ರತೆ ನೀಡುತ್ತಿರುವ ಎಸ್ಕಾರ್ಟ್‌ನ್ನು ಕರ್ನಾಟಕ ಸರ್ಕಾರ ಕೂಡಲೇ ವಾಪಾಸ್ ಪಡೆದುಕೊಂಡು ಮುಕ್ತವಾಗಿ ತನಿಖೆ ನಡೆಸಬೇಕು. ಹಾಲಿ ಹೈಕೋರ್ಟ್ ನ್ಯಾಯಧೀಶರಿಂದ ತನಿಖೆ ನಡೆಸಿ ಲೈಂಗಿಕ ದೌರ್ಜನ್ಯ ನಡೆಸಿದವರ ವಿರುದ್ಧ ಕಠಿಣ ಶಿಕ್ಷಗೆ ಒಳಪಡಿಸಬೇಕು ಎಂದು ಜೈ ಭೀಮ್ ಬ್ರಿ ಗ್ರೇಡ್ ಸಂಘಟನಾ ಸಮಿತಿ ಮತ್ತು ಅನೇಕ ದಲಿತ ಸಂಘಟನೆಗಳು ಸರ್ಕಾರಕ್ಕೆ ಅಗ್ರಹಿಸುತ್ತದೆ’ ಎಂದು ಹೇಳಿದರು.

‘ಶಾಸಕ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಭದ್ರತೆ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹಾಲಿ ಶಾಸಕ ಎಚ್.ಡಿ. ರೇವಣ್ಣ ಕುಟುಂಬದ ಸ್ಥಿರ ಹಾಗೂ ಚರಾಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಲೈಂಗಿಕ ದೌರ್ಜನ್ಯಕ್ಕೆ ಒಳಾಗಾಗಿರುವ ಸಾವಿರಾರು ಕುಟುಂಬಗಳಿಗೆ ಇವರ ಅಸ್ತಿ ಹಂಚಿಕೆ ಮಾಡಬೇಕು. ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ಅವರ ಕುಟುಂಬಗಳ ಪಾಸ್ ಪೋರ್ಟ್ ವಶಪಡಿಸಿಕೊಂಡು ತಲೆ ಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣನಿಗೆ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿ ವಿದೇಶದಿಂದ ಕರೆತಂದು ತನಿಖೆ ನಡೆಸಿ ಜೈಲು ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.ಜೈಭೀಮ್ ಬ್ರಿಗೇಡ್ ಸಂಘಟನಾ ಸಮಿತಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಹರೀಶ್ ಹುಳವಾರೆ, ತಾಲೂಕು ಅಧ್ಯಕ್ಷ ಶಂಕರ್, ಉಪಾಧ್ಯಕ್ಷ ಗೋವಿಂದರಾಜು, ದಲಿತ ಮುಖಂಡ ಸುಬ್ರಮಣ್ಯ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ಬಡಾವಣೆಯ ಸಂತ್ರಸ್ತ 12 ಕುಟುಂಬಕ್ಕೆ ಮನೆ ಹಂಚಿದ ರಾಜ್ಯ ಸರ್ಕಾರ
ಹಾಲ್‌ ಟಿಕೆಟ್‌ ಸಿಗದೆ 25 ವಿದ್ಯಾರ್ಥಿಗಳು ಪರೀಕ್ಷೆ ವಂಚಿತ