ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Apr 17, 2025, 12:00 AM IST
ಪ್ರತಿಭಟನೆ | Kannada Prabha

ಸಾರಾಂಶ

ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬೆಲೆ ಏರಿಕೆ ಖಂಡಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ, ತುಮಕೂರುಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬೆಲೆ ಏರಿಕೆ ಖಂಡಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.ಈ ವೇಳೆ ತುಮಕೂರು ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯಸಂಚಾಲಕ ಎ.ನರಸಿಂಹಮೂರ್ತಿ ಸಂವಿಧಾನದ ಆಶಯವಾದ ಕಲ್ಯಾಣ ರಾಜ್ಯದ ಪರಿಕಲ್ಪನೆಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ಪರ್ಧೆ ಇಳಿದು ಬೆಲೆ ಏರಿಕೆ ಮಾಡುತ್ತಿವೆ. ಈ ಬೆಲೆಏರಿಕೆಯಿಂದ ಬಡವರ ರಕ್ತ ಹೀರಲಾಗುತ್ತಿದೆ ಎಂದರು.ರಾಜ್ಯ ಸರ್ಕಾರ ಬಸ್ ದರವನ್ನು ಶೇ.15 ರಷ್ಟುಏರಿಕೆ ಮಾಡಿದೆ, ಇನ್ನೊಂದೆಡೆ ವಿದ್ಯುತ್‌ ದರವನ್ನು ಮತ್ತೆ ಪರಿಷ್ಕರಣೆ ಮಾಡಲಾಗಿದೆ, ಸದ್ಯಕ್ಕೆ ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಇರುವುದರಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಸಮಸ್ಯೆ ಆಗದೇ ಇರಬಹುದು. ಆದರೆ ಮುಂದೆ ಗೃಹಜ್ಯೋತಿ ಯೋಜನೆ ಸ್ಥಗಿತಗೊಂಡರೆ ರಾಜ್ಯದ ಬಡವರ ಬದುಕು ನರಕವಾಗುವುದು ಖಂಡಿತ ಎಂದರು. ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಬದುಕು ಕಷ್ಟಕರವಾಗಿದ್ದು, ಕೂಡಲೇ ರಾಜ್ಯ ಸರ್ಕಾರ ಹಾಲು, ವಿದ್ಯುತ್,ಡಿಸೇಲ್, ಬಸ ಪ್ರಯಾಣದರ ಮತ್ತು ಮೆಟ್ರೋ ದರ ಸೇರಿದಂತೆ ಹಲವಾರು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಹಿಂದಕ್ಕೆ ಪಡೆದುಕೊಳ್ಳಬೇಕೆಂದು ಸ್ಲಂ ಜನಾಂದೋಲನ-ಕರ್ನಾಟಕ ಸಂಘಟನೆ ಒತ್ತಾಯಿಸುತ್ತದೆಎಂದರು.ಸಾವಿತ್ರಿಬಾಯಿ ಪುಲೆ ಮಹಿಳಾ ಸಂಘಟನೆಯ ಅನುಪಮಾ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಜನಸಾಮಾನ್ಯರು ಅದರ ಲಾಭ ಪಡೆಯುತ್ತಿದ್ದಾರೆ, ಆದರೂ ಆಗಾಗ್ಗೆ ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಪಂಚ ಗ್ಯಾರಂಟಿ ಯೋಜನೆ ಅದರ ಮಹತ್ವವನ್ನು ಕಳೆದುಕೊಳ್ಳುತ್ತಿದೆ ಎಂದರು. ಸ್ಲಂ ಸಮಿತಿಯ ಕಾರ್ಯದರ್ಶಿ ಅರುಣ್, ಪದಾಧಿಕಾರಿಗಳಾದ ಶಂಕರಯ್ಯ, ಜಾಬರ್ಖಾ ನ್ ,ತಿರುಮಲಯ್ಯ, ಕೃಷ್ಣಮೂರ್ತಿ, ಧನಂಜಯ್, ಸುನಿಲ್, ಗಣೇಶ್, ಭಾರತಿನಗರ ಶಾರದಮ್ಮ, ಗಂಗ, ಕೆಂಪಣ್ಣ, ಮಾಣಿಕ್ಯಮ್ಮ, ಮಾರಿಯಮ್ಮ ನಗರದ ಕೃಷ್ಣ, ಗೋಪಾಲ್,ಮಾರಿ, ರಾಜ, ಮಾಧವನ್ ನಿವೇಶನ ಹೋರಾಟ ಸಮಿತಿಯ ಮಂಗಳಮ್ಮ, ಪರ್ಣಿ ಮಾ, ಸುಧಾ, ರತ್ನಮ್ಮ, ರಂಗನಾಥ್, ಗುಲ್ನಾಜ್, ನರಸಿಂಹಮೂರ್ತಿ, ಪುಟ್ಟರಾಜು, ನೂರಾರು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!