ಪಂಪ್ಡ್‌ ಸ್ಟೋರೇಜ್ ಯೋಜನೆಗೆ ವಿರೋಧ: ಪ್ರತಿಭಟನೆ

KannadaprabhaNewsNetwork |  
Published : Oct 15, 2025, 02:06 AM IST
ಪೊಟೋ: 14ಎಸ್‌ಎಂಜಿಕೆಪಿ04ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ (ಸಾಮೂಹಿಕ ನಾಯಕತ್ವ)ಯ ವತಿಯಿಂದ ಮಂಗಳವಾರ ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು.  | Kannada Prabha

ಸಾರಾಂಶ

ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಈ ಯೋಜನೆಯ ಡಿಪಿಆರ್‌ನ್ನು ಸಾರ್ವಜನಿಕರ ಮುಂದೆ ಇಟ್ಟಿಲ್ಲ ಎಂದು ಆರೋಪಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ (ಸಾಮೂಹಿಕ ನಾಯಕತ್ವ)ಯ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಈ ಯೋಜನೆಯ ಡಿಪಿಆರ್‌ನ್ನು ಸಾರ್ವಜನಿಕರ ಮುಂದೆ ಇಟ್ಟಿಲ್ಲ ಎಂದು ಆರೋಪಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ (ಸಾಮೂಹಿಕ ನಾಯಕತ್ವ)ಯ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರ ಹಾಗೂ ಕೇಂದ ಸರ್ಕಾರ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಯೋಜನೆಯನ್ನು ಶರಾವತಿ ಕಣಿವೆಯಲ್ಲಿ ಸುಮಾರು 800 ಕೋಟಿ ರು. ವೆಚ್ಚದಲ್ಲಿ ಜಾರಿಮಾಡಲು ಹೊರಟಿದೆ. ಇದಕ್ಕಾಗಿ 350 ಎಕರೆ ಜಾಗವನ್ನು ಗುರುತಿಸಿದೆ. ಸರ್ಕಾರಗಳು ಈ ರೀತಿಯ ಬೃಹತ್ ಯೋಜನೆ ಮಾಡುವಾಗ ಸ್ಥಳೀಯ ನಾಗರೀಕರೊಂದಿಗೆ, ಪರಿಸರವಾದಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಬೇಕಿತ್ತು. ಯೋಜನೆಯ ಬಗ್ಗೆ ಸೂಕ್ತ ಮಾಹಿತಿಯನ್ನು ಸ್ಥಳೀಯ ನಾಗರೀಕರಿಗೆ ನೀಡುವುದು ಸರ್ಕಾರದ ಹಕ್ಕಾಗಿದೆ. ಆದರೆ ಸರ್ಕಾರ ಇದುವರೆಗೂ ಯೋಜನೆಯ ಡಿಪಿಆರ್‌ನ್ನು ಸಾರ್ವಜನಿಕರ ಮುಂದೆ ಇಡುವ ಕೆಲಸವನ್ನು ಮಾಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ವೈಜ್ಞಾನಿಕವಾದ ಮಾರ್ಗಗಳನ್ನು ಅನುಸರಿಸಬೇಕು. ದಟ್ಟ ಅರಣ್ಯದಲ್ಲಿ ಈ ಯೋಜನೆ ಬೇಡ. ಇದರಿಂದ ಪರಿಸರದ ಮೇಲೆ ತುಂಬಾ ದುಷ್ಪರಿಣಾಮ ಉಂಟಾಗುತ್ತದೆ. ನೂರಾರು ಹೆಕ್ಟೇರ್ ಅರಣ್ಯ ಪ್ರದೇಶ ನಾಶವಾಗಿ ಭೂಸವಕಳಿ, ಭೂಕೊರತೆ ಉಂಟಾಗಿ ಅಪಾಯ ಹೆಚ್ಚಾಗುತ್ತದೆ ಎಂದು ದೂರಿದರು. ಆದ್ದರಿಂದ ಈ ಯೋಜನೆಯನ್ನು ಕೈಬಿಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಅಧ್ಯಕ್ಷ ಮಂಡಳಿ ಸದಸ್ಯ ಹಾಗೂ ರೈತಮುಖಂಡ ಕೆ.ಟಿ.ಗಂಗಾಧರ್, ಈರಣ್ಣ ಪ್ಯಾಟಿ, ಹಾಲೇಶಪ್ಪ ಗೌಡ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ