ರಾಜಣ್ಣ ವಜಾ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Aug 16, 2025, 02:01 AM IST
14ಡಿಡಬ್ಲೂಡಿ6ಕೆ.ಎನ್ ರಾಜಣ್ಣ ಅವರನ್ನು  ಸಚಿವ ಸ್ಥಾನದಿಂದ ವಜಾಗೊಳಿಸಿರುವ ಕ್ರಮ ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಸದಸ್ಯರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕೂಡಲೇ ಅವರನ್ನು ಸಂಪುಟಕ್ಕೆ ಮರು ಸೇರಿಸಿಕೊಂಡು ಸಮಾಜದ ಕ್ಷಮೆಯಾಚಿಸಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ

ಧಾರವಾಡ: ಅಹಿಂದ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಿರಿಯ ರಾಜಕಾರಣಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ರಾಜ್ಯ ಸರ್ಕಾರ ಸಚಿವ ಸ್ಥಾನದಿಂದ ಏಕಾಏಕಿ ವಜಾಗೊಳಿಸಿರುವ ಕ್ರಮ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಸದಸ್ಯರು ಪ್ರತಿಭಟನೆ ನಡೆಸಿದರು.

ಸದಾ ಕ್ರೀಯಾಶೀಲತೆಯಿಂದ ಶೋಷಿತ ಸಮುದಾಯದ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಚಿವ ಕೆ.ಎನ್.ರಾಜಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಿಂದ ವಜಾಗೊಳಿಸಿರುವ ಕ್ರಮ ಖಂಡನೀಯ. ಕೂಡಲೇ ಅವರನ್ನು ಸಂಪುಟಕ್ಕೆ ಮರು ಸೇರಿಸಿಕೊಂಡು ಸಮಾಜದ ಕ್ಷಮೆಯಾಚಿಸಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಎಫ್.ಎನ್.ಯಾದವಾಡ, ಟಿ.ಎಚ್.ತಳವಾರ, ಮಂಜು ಓಲೇಕಾರ, ಸುರೇಶ್ ಬಾಬು ತಳವಾರ, ಪಾಂಡುರಂಗ, ಬಸವರಾಜ ಕುರಬೇಟ್ಟ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಶಾಲೆ ದುಬೈ ವಾರ್ಷಿಕೋತ್ಸವಕ್ಕೆ ಗೌರ್ನರ್‌ಗೆ ಆಹ್ವಾನ
ಬಾಯಿಮುಚ್ಕೊಂಡಿದ್ರೆ ಒಳ್ಳೇದು : ಮೂವರು ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ವಾರ್ನಿಂಗ್