ತೆರಿಗೆ ನೀತಿ ವಿರೋಧಿಸಿ ತಮಟೆ ಬಾರಿಸಿ ಪ್ರತಿಭಟನೆ

KannadaprabhaNewsNetwork |  
Published : Apr 19, 2026, 03:15 AM IST
ಬೆಳಗಾವಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಮಹಾನಗರ ಪಾಲಿಕೆಯ ತೆರಿಗೆ ನೀತಿಯನ್ನು ವಿರೋಧಿಸಿ ಸಿಂಗಲ್ ಟ್ಯಾಕ್ಸ್ ವ್ಯವಸ್ಥೆ ಜಾರಿಗೆ ತರಬೇಕೆಂದು ಆಗ್ರಹಿಸಿ ನಗರ ಸೇವಕ ನಾಶಿಪುಡಿ ತಮಟೆ ಬಾರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಹಾನಗರ ಪಾಲಿಕೆಯ ತೆರಿಗೆ ನೀತಿಯನ್ನು ವಿರೋಧಿಸಿ ಸಿಂಗಲ್ ಟ್ಯಾಕ್ಸ್ ವ್ಯವಸ್ಥೆ ಜಾರಿಗೆ ತರಬೇಕೆಂದು ಆಗ್ರಹಿಸಿ ನಗರ ಸೇವಕ ನಾಶಿಪುಡಿ ತಮಟೆ ಬಾರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ನಗರದ ಪಾಲಿಕೆ ಆಯುಕ್ತರ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ನಾಶಿಪುಡಿ ಸರ್ಕಾರ ಹಾಗೂ ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಪಾಲಿಕೆಯು ವಿವಿಧ ರೂಪಗಳಲ್ಲಿ ತೆರಿಗೆ ವಿಧಿಸುತ್ತಿದ್ದು, ಇದು ಸಾಮಾನ್ಯ ಜನರ ಮೇಲೆ ಅಧಿಕ ಭಾರವಾಗುತ್ತಿದೆ. ಈಗಿನ ವ್ಯವಸ್ಥೆಯಲ್ಲಿ ಜನರು ದ್ವಿಗುಣ ತೆರಿಗೆ ಭಾರವನ್ನು ಹೊರುತ್ತಿದ್ದಾರೆ ಎಂಬ ಅಸಮಾಧಾನವೂ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಒಂದೇ ತೆರಿಗೆ ವ್ಯವಸ್ಥೆ ಜಾರಿಗೊಳಿಸಿ ಜನರಿಗೆ ಸುಲಭ ಮತ್ತು ಸ್ಪಷ್ಟ ತೆರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಮತ್ತು ಬೆಂಬಲಿಗರು ಪ್ರತಿಭಟನೆಗೆ ಬೆಂಬಲ ಸೂಚಿಸಿ, ಪಾಲಿಕೆಯ ತೆರಿಗೆ ನೀತಿಯಲ್ಲಿ ಬದಲಾವಣೆ ಅಗತ್ಯವಿದೆ ಎಂದು ಬೆಂಬಲ ಸೂಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಕ್ಕೇರಿ ಚಂದ್ರಶೇಖರ ಶ್ರೀಗೆ ಜೀವಮಾನ ಸಾಧನೆ ಪ್ರಶಸ್ತಿ
ಹಲ್ಮಿಡಿ ಶಾಸನದ ಪ್ರತಿಕೃತಿ ಮರುಸ್ಥಾಪನೆ ಮುಖಂಡರ ಸಲಹೆ