ಕಲಬುರ್ಗಿ ಜಿಲ್ಲೆಯ ಕೋಟನೂರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಸಮತಾ ಸೇನಾ ಜಿಲ್ಲೆ ಸಂಘಟನೆಯ ನೇತೃತ್ವದಲ್ಲಿ ದಲಿತ ಪರ ವಿವಿಧ ಸಂಘಟನೆಗಳೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.
ಗದಗ: ಕಲಬುರ್ಗಿ ಜಿಲ್ಲೆಯ ಕೋಟನೂರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಸಮತಾ ಸೇನಾ ಜಿಲ್ಲೆ ಸಂಘಟನೆಯ ನೇತೃತ್ವದಲ್ಲಿ ದಲಿತ ಪರ ವಿವಿಧ ಸಂಘಟನೆಗಳೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಸಮತಾ ಸೇನಾ ಜಿಲ್ಲಾಧ್ಯಕ್ಷ ಕಿರಣ ಗಾಮನಗಟ್ಟಿ ಮಾತನಾಡಿ, ಕಲಬುರ್ಗಿ ಜಿಲ್ಲೆಯ ಕೋಟನೂರನಲ್ಲಿರುವ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಅವಮಾನ ಮಾಡಿ ಪಟಾಕಿ ಸಿಡಿಸಿ, ತಮ್ಮ ವಿಕೃತ ಬುದ್ಧಿ ಪ್ರದರ್ಶಿಸಿದ್ದು, ಇಂತಹ ವಿಕೃತ ಮನಸ್ಥಿತಿಯಲ್ಲಿ ಇನ್ನೂ ಬದುಕಿದ್ದಾರೆ. ಕಲಬುರ್ಗಿ ಜಿಲ್ಲಾಡಳಿತವು ಡಾ. ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಐದು ಜನ ಆರೋಪಿಗಳ ಬಂಧನ ಮಾಡಿದ್ದು ಇವರುಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿ ಐದು ಜನ ಆರೋಪಿಗಳ ಮೇಲೆ ಉಗ್ರವಾದ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೇ ಎಲ್ಲ ಹೋರಾಟಗಾರರ ಪ್ರತಿಮೆಗಳಿಗೆ ಭದ್ರತೆ ನೀಡಿ ಸಿಸಿ ಕ್ಯಾಮೆರಾ ಅಳವಡಿಸಬೇಕೆಂದು ಆಗ್ರಹಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.