ಇಂದು ಬಿಜೆಪಿ ರೈತ ಮೋರ್ಚಾದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

KannadaprabhaNewsNetwork |  
Published : Jun 26, 2024, 12:34 AM IST
ಬಿಜೆಪಿಪ್ರೆಸ್25 | Kannada Prabha

ಸಾರಾಂಶ

ಹೈನುಗಾರಿಕೆಗೆ 900 ಕೋಟಿ ರು.ಗಿಂತಲೂ ಹೆಚ್ಚು ಪ್ರೋತ್ಸಾಹ ಧನ ಬಿಡುಗಡೆಗೆ ಬಾಕಿ ಇದ್ದು ತಕ್ಷಣ ಹಣವನ್ನು ಬಿಡುಗಡೆ ಮಾಡಬೇಕು. ಹಾಲಿನ ಪ್ರೋತ್ಸಾಹ ಧನವನ್ನು ಲೀಟರಿಗೆ 10 ರು.ಗೆ ಏರಿಕೆ ಮಾಡುವಂತೆ ಒತ್ತಾಯಿಸುತ್ತಿದ್ದೇವೆ ಎಂದು ಬಿಜೆಪಿ ಉಡುಪಿ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಬಿಜೆಪಿ ಜಿಲ್ಲಾ ರೈತಮೋರ್ಚಾ ನೇತೃತ್ವದಲ್ಲಿ ಜೂನ್‌ 26ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ತಿಳಿಸಿದ್ದಾರೆ.

ಅವರು ಸೋಮವಾರ, ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನು ವಿವರಿಸಿದರು.

ಹೈನುಗಾರಿಕೆಗೆ 900 ಕೋಟಿ ರು.ಗಿಂತಲೂ ಹೆಚ್ಚು ಪ್ರೋತ್ಸಾಹ ಧನ ಬಿಡುಗಡೆಗೆ ಬಾಕಿ ಇದ್ದು ತಕ್ಷಣ ಹಣವನ್ನು ಬಿಡುಗಡೆ ಮಾಡಬೇಕು. ಹಾಲಿನ ಪ್ರೋತ್ಸಾಹ ಧನವನ್ನು ಲೀಟರಿಗೆ 10 ರು.ಗೆ ಏರಿಕೆ ಮಾಡುವಂತೆ ಒತ್ತಾಯಿಸುತ್ತಿದ್ದೇವೆ ಎಂದರು.

ತೈಲ ಬೆಲೆ ಏರಿಕೆಯಿಂದ ರೈತಾಪಿ ವರ್ಗ ಕಂಗಾಲಾಗಿದ್ದು, ತಕ್ಷಣ ತೈಲ ಬೆಲೆಯನ್ನು ಇಳಿಸಬೇಕು. ಬಿತ್ತನೇ ಬೀಜವನ್ನು ಸಬ್ಸಿಡಿ ದರದಲ್ಲಿ ನೀಡಬೇಕು. ಜಿಲ್ಲೆಯಲ್ಲಿ ವ್ಯವಸ್ಥಿತವಾದ ಕೃಷಿ ಕಾಲೇಜು ಪ್ರಾರಂಭಿಸಬೇಕು. ಜಿಲ್ಲೆಯ ರೈತರ ಬಗರ್ ಹುಕುಂ ಬೇಡಿಕೆ ಹಾಗೂ ಅಕ್ರಮ ಸಕ್ರಮ ಸಮಿತಿಯ ಮೂಲಕ ಸಂಬಂಧಪಟ್ಟ ರೈತರಿಗೆ ತಕ್ಷಣ ಶಾಶ್ವತ ಆದೇಶ ಪತ್ರ ನೀಡಬೇಕು ಎಂಬ ಒತ್ತಾಯಿಸಿ, ಸರ್ಕಾರಕ್ಕೆ ಬೇಡಿಕೆಯನ್ನು ಮುಂದಿಡುತ್ತಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಜಿಲ್ಲಾ ಪ್ರ,ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ರೈತ ಮೋರ್ಚಾದ ಕಾರ್ಯದರ್ಶಿ ಶ್ರೀಕಾಂತ್ ಕಾಮತ್, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಬೈಂದೂರು ಪುಷ್ಪರಾಜ್ ಶೆಟ್ಟಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಸ್ಯೆ ಬಗೆಹರಿದ್ರೆ 6 ತಿಂಗಳಲ್ಲಿ 1 ಲಕ್ಷ ನೇಮಕಾತಿ : ಸಾರಿಗೆ ಸಚಿವ
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಇಡೀ ಊರಿನ ರೈತರಿಗೆ ಪರಿಹಾರ