ತುಮಕೂರು: ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿ ಸಂಬಂಧಿಸಿದಂತೆ ಸುಪ್ರಿಂಕೋರ್ಟಿನ ಆದೇಶದ ನಂತರವೂ ವಿಳಂಭ ನೀತಿ ಅನುಸರಿಸುತ್ತಿರುವ ಸರಕಾರದ ಕ್ರಮವನ್ನು ಖಂಡಿಸಿ ಇದೇ 29ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಮಾದಿಗ ಸಮುದಾಯಗಳ ಸ್ವಾಭಿಮಾನಿ ಒಕ್ಕೂಟ ತೀರ್ಮಾನಿಸಿದೆ ಎಂದು ಆರ್.ಪಿ.ಐ ರಾಷ್ಟ್ರೀಯ ಅಧ್ಯಕ್ಷ ಹಾಗೂ ದಸಂಸ ರಾಜ್ಯಾಧ್ಯಕ್ಷ ಡಾ.ಎನ್.ಮೂರ್ತಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿಗಾಗಿ ಸುಮಾರು 3 ದಶಕಗಳ ಹೋರಾಟವನ್ನು ಇದುವರೆಗೂ ಆಳ್ವಿಕೆ ಮಾಡಿದ ಎಲ್ಲಾ ರಾಜಕೀಯ ಪಕ್ಷಗಳು ಕಡೆಗಣಿಸಿದ್ದು, ಸುಪ್ರಿಂಕೋರ್ಟಿನ ಆದೇಶದ ನಂತರವೂ ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸರಕಾರ ನಡೆದುಕೊಳ್ಳುತ್ತಿಲ್ಲ ಎಂದರು.ಎಂಪೆರಿಕಲ್ ಡೆಟಾ ಹೆಸರಿನಲ್ಲಿ ಅನಗ್ಯ ವಿಳಂಬ ಮಾಡುತ್ತಿದೆ. 2006 ರಲ್ಲಿ ನೇಮಕವಾಗಿ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯಲ್ಲಿ ಎಲ್ಲಾ ರೀತಿಯ ಅಂಶಗಳು ಇದ್ದು,ಇದನ್ನು ಒಪ್ಪಿ ನ್ಯಾ.ನಾಗಮೋಹನದಾಸ್ ಆಯೋಗಕ್ಕೆ ಕಳುಹಿಸುವ ಮೂಲಕ ಸಾಮಾಜಿಕ ನ್ಯಾಯ ಪರಿಪಾಲನೆ ಮಾಡಬೇಕು.ಇಲ್ಲದಿದ್ದಲ್ಲಿ ನಿಮ್ಮನ್ನು ಅಧಿಕಾರಕ್ಕೆ ಕೂರಿಸಿದ ಜನರೇ ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವ ಕಾಲ ದೂರವಿಲ್ಲ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದಿ, ಸಾಮಾಜಿಕ ನ್ಯಾಯ, ಅಹಿಂದ ಎಲ್ಲವೂ ಮುಖವಾಡ. ಒಳಮೀಸಲಾತಿ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಸಿದ್ದರಾಮಯ್ಯ ಅವರು ಕೈ ಬಿಡಬೇಕು. ಮಾದಿಗ ಸಮಾಜವನ್ನು ದಾರಿ ತಪ್ಪಿಸಬಾರದು ಎಂದು ಎಚ್ಚರಿಸಿದರು. ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಕೇಶವಮೂರ್ತಿ, ಬಿ.ಎಸ್.ಪಿ ರಾಜ್ಯ ಉಪಾಧ್ಯಕ್ಷ ಗುರುಮೂರ್ತಿ, ದಸಂಸ ಮುಖಂಡ ಪಿ.ಎನ್.ರಾಮಯ್ಯ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ದಸಂಸ ಜಿಲ್ಲಾ ಸಂಚಾಲಕ ನಾಗತಿಹಳ್ಳಿ ಕೃಷ್ಣಮೂರ್ತಿ, ಎಂಆರ್‌ಹೆಚ್‌ಎಂನ ಜಿಲ್ಲಾ ಉಪಾಧ್ಯಕ್ಷ ಸತ್ಯಪ್ಪ, ಜಿಲ್ಲಾಧ್ಯಕ್ಷ ಸಿದ್ದಗಂಗಪ್ಪ,ಕೊರಟಗೆರೆ ತಾಲೂಕು ಉಪಾಧ್ಯಕ್ಷ ಗಂಗಣ್ಣ ಮತ್ತಿತರರು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.