ನೇಹಾ ಹಿರೇಮಠ ಹತ್ಯೆ ಖಂಡಿಸಿ ಧರಣಿ

KannadaprabhaNewsNetwork |  
Published : Apr 24, 2024, 02:15 AM IST
23ಕೆಎಂಎನ್ ಡಿ17 | Kannada Prabha

ಸಾರಾಂಶ

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಯುವತಿ ಹತ್ಯೆ ಖಂಡಿಸಿ, ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಪಟ್ಟಣದಲ್ಲಿ ಮಂಗಳವಾರ ಹಿಂದೂಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಯುವತಿ ಹತ್ಯೆ ಖಂಡಿಸಿ, ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಪಟ್ಟಣದಲ್ಲಿ ಮಂಗಳವಾರ ಹಿಂದೂಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿವರೆಗೆ ನೇಹಾ ಹತ್ಯೆ ಖಂಡಿಸಿ ಮೆರವಣಿಗೆ ನಡೆಸಿದ ಮುಖಂಡರು, ಮುಸ್ಲಿಂ ಯುವಕ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ತಾಲೂಕು ಕಚೇರಿ ಎದುರು ಕೆಲ ಕಾಲ ಧರಣಿ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಹಿಂದು ಪರ ಸಂಘಟನೆ ಮುಖಂಡ ಬೆಳಗೊಳದ ಸುನೀಲ್ ಮಾತನಾಡಿ, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹೀರೇಮಠ ಅವರನ್ನು ಕೊಲೆಗೈದ ಆರೋಪಿ ಫಯಾಜ್‌ಗೆ ಮರಣ ದಂಡನೆಯಂತಹ ಕಠಿಣ ಶಿಕ್ಷಯಾಗಬೇಕು. ಕಾಂಗ್ರೆಸ್ ಪಕ್ಷದ ಕಾರ್ಪೋರೇಟರ್ ಮಗಳಿಗೆ ಸುರಕ್ಷತೆ ಇಲ್ಲವಾದಲ್ಲಿ ಇನ್ನು ಜನಸಾಮಾನ್ಯರ ರಕ್ಷಣೆ ಹೇಗೆ?. ರಾಜ್ಯದಲ್ಲಿ ಹಿಂದುಗಳ ಮೇಲೆ ಹೆಚ್ಚುತ್ತಿರುವ ಕೊಲೆ, ದೌರ್ಜನ್ಯವನ್ನು ತಡೆಗಟ್ಟಬೇಕೆಂದು ಆಗ್ರಹಿಸಿದರು.ಗೃಹಮಂತ್ರಿ ಪರಮೇಶ್ವರ್ ಘಟನೆ ಕುರಿತು ಆಕಸ್ಮಿಕ ಎಂದಿರುವುದು ಸರಿಯಲ್ಲ. ಓಟಿಗಾಗಿ ಮುಸ್ಲಿಂಮರನ್ನು ಓಲೈಸಿಕೊಳ್ಳುತ್ತಿರುವ ಸರ್ಕಾರ ಇಂತಹ ಘಟನೆಗಳ ಬಗ್ಗೆ ಅವಹೇಳನವಾಗಿ ಮಾತನಾಡುತ್ತಿದೆ. ನೇಹಾ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರ ವರ್ತನೆಯನ್ನು ಖಂಡಿಸಿದರು.

ಎಲ್ಲರ ಮನೆಯ ಸಹೋದರಿ ನೇಹ ಕೊಲೆಯ ಆರೋಪಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ನ್ಯಾಯದೊರೆಯಬೇಕು ಎಂದು ಒತ್ತಾಯಿಸಿ ಉಪತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ವೇಳೆ ನಿಕಟ ಪೂರ್ವ ಬಿಜೆಪಿ ಅಧ್ಯಕ್ಷ ಜಯಕುಮಾರ್, ಮುಖಂಡರಾದ ಇಂದ್ರಕುಮಾರ್, ಚಂದಗಾಲು ಶಂಕರ್, ಕಿರಣ್, ಹೇಮಂತಕುಮಾರ್, ಸುಧಾಕರ್, ಕೆಆರ್‌ಎಸ್ ಪ್ರಕಾಶ್‌ ಹಾಗೂ ಆರ್‌ಎಸ್‌ಎಸ್, ಬಜರಂಗದಳ, ಹಿಂದು ಜಾಗರಣೆ ವೇದಿಕೆ ಮುಖಂಡರು ಭಾಗವಹಿಸಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ