ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ನೇತೃತ್ವದಲ್ಲಿ ಸೇರಿದ ದಸಂಸ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆಗೆ ಆಗ್ರಹಿಸಿದರು.
ಕೇಂದ್ರ ಯೋಜನಾ ಆಯೋಗದ ನಿರ್ದೇಶನಕ್ಕೆ ತದ್ವಿರುದ್ಧವಾಗಿ ರಾಜ್ಯ ಎಸ್‌ಟಿ, ಎಸ್‌ಟಿ ಕಾಯ್ದೆ (೨೦೧೩)ರಲ್ಲಿ ಸೇರಿಸಲಾಗಿರುವ ಕಲಂ ೭(ಸಿ), ೭(ಡಿ) ಗಳನ್ನು ಕಾಯ್ದೆಯಿಂದ ತೆಗೆದುಹಾಕಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ೨ ಲಕ್ಷ ಕೋಟಿಗೂ ಹೆಚ್ಚು ಎಸ್‌ಟಿ, ಎಸ್‌ಟಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಆ ಅನುದಾನವನ್ನು ವಾಪಸ್ ಕೊಟ್ಟು ಪರಿಶಿಷ್ಟರ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿ ಮೂಲಕ ಆಸ್ತಿ ಸೃಜನೆ ಮತ್ತು ಸ್ವಯಂ ಉದ್ಯೋಗ ನೀಡಲು ಸದ್ಬಳಕೆ ಮಾಡಬೇಕು ಎಂದು ಆಗ್ರಹಿಸಿದರು.ಇದೇ ಸಮಯದಲ್ಲಿ ಜಿಲ್ಲಾ ಉಸ್ತುವಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ದಸಂಸ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಪ್ರತಿಭಟನೆಯಲ್ಲಿ ದಸಂಸ ಸಮಿತಿಯ ಜಿಲ್ಲಾ ಅಧ್ಯಕ್ಷ ಆನಂದ, ಮಹಿಳಾ ಘಟಕದ ಅಧ್ಯಕ್ಷೆ ಸುಶ್ಮಿತಾ, ತಾಲೂಕು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.