ಕನ್ನಡಪ್ರಭ ವಾರ್ತೆ ಬೆಳಗಾವಿ
ಸಂಸದ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ನಗರದ ಬೋಗಾರವೇಸ್‌ನಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ದಿವಾಳಿ ಮಾಡುತ್ತಿದೆ. ಕೂಡಲೇ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿರುವ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ಅನಿಲ ಬೆನಕೆ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಜಗದೀಶ ಶೆಟ್ಟರ್, ಗ್ಯಾರಂಟಿ ಯೋಜನೆಗಲನ್ನು ಸರಿದೂಗಿಸಲು ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡುತ್ತಿದೆ. ಇದು ಸರಿಯಾದ ಕ್ರಮವಲ್ಲ. ಪೆಟ್ರೋಲ್, ಡೀಸೆಲ್ ದರ ಏರಿಕೆ ಎಲ್ಲದರ ಮೇಲೂ ಪರಿಣಾಮ ಬೀರುತ್ತದೆ ಎಂದರು.
ರಾಜ್ಯ ಸರ್ಕಾರ ಇದೀ ರೀತಿ ಸರ್ಕಾರ ನಡೆಯನ್ನು ಅನುಸರಿಸಿದರೆ ಜನ ದಂಗ ಏಳುವ ಪರಿಸ್ಥಿತಿ ನಿರ್ಮಾಣ ಆಗಲಿದೆ ಎಂದು ಗುಡುಗಿದರು.