ಬಸ್ ಶೆಲ್ಟರ್ ಕಾಮಗಾರಿ ಸ್ಥಗಿತ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Jul 23, 2026, 02:00 AM IST
20ಎಚ್ಎಸ್ಎನ್11 :  | Kannada Prabha

ಸಾರಾಂಶ

ಹಳೆ ಬಸ್ ನಿಲ್ದಾಣದ ಸಮೀಪ ಉಪನೋಂದಣಾಧಿಕಾರಿ ಹಾಗೂ ಅಬಕಾರಿ ಇಲಾಖೆಗೆ ಸೇರಿದ ಜಾಗದಲ್ಲಿ ನಿರ್ಮಾಣವಾಗುತ್ತಿದ್ದ ಬಸ್ ಶೆಲ್ಟರ್‌ ಕಾಮಗಾರಿಯನ್ನು ಅಧಿಕಾರಿಗಳು ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಹಿಂದೂಪರ ಹೋರಾಟಗಾರ ರಘು ಸಕಲೇಶಪುರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆಯಲು ಮುಂದಿನ ಹಂತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಸೇರಿದಂತೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಹಳೆ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಬಳಿಕ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಉಪನೋಂದಣಾಧಿಕಾರಿ ಹಾಗೂ ಅಬಕಾರಿ ಇಲಾಖೆಗೆ ಸೇರಿದ ಜಾಗದಲ್ಲಿ ನಿರ್ಮಾಣವಾಗುತ್ತಿದ್ದ ಬಸ್ ಶೆಲ್ಟರ್‌ ಕಾಮಗಾರಿಯನ್ನು ಅಧಿಕಾರಿಗಳು ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಹಿಂದೂಪರ ಹೋರಾಟಗಾರ ರಘು ಸಕಲೇಶಪುರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಹಿಂದೂ ಪರ ಹೋರಾಟಗಾರ ರಘು, ಸಕಲೇಶಪುರ ಮಲೆನಾಡು ಪ್ರದೇಶವಾಗಿರುವುದರಿಂದ ಇಲ್ಲಿ ವರ್ಷಪೂರ್ತಿ ಮಳೆ ಹಾಗೂ ಚಳಿ ಹೆಚ್ಚಿರುತ್ತದೆ. ವಿವಿಧ ಭಾಗಗಳಿಂದ ಪಟ್ಟಣಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಶಾಸಕ ಸಿಮೆಂಟ್ ಮಂಜು ಅವರ ಅನುದಾನದಲ್ಲಿ ಬಸ್ ಶೆಲ್ಟರ್‌ ನಿರ್ಮಿಸಲಾಗುತ್ತಿತ್ತು. ಕಾಮಗಾರಿ ಶೇ. 75ರಷ್ಟು ಪೂರ್ಣಗೊಂಡಿರುವ ಸಂದರ್ಭದಲ್ಲಿ ಅಧಿಕಾರಿಗಳು ಏಕಾಏಕಿ ಕಾಮಗಾರಿ ಸ್ಥಗಿತಗೊಳಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.ಉಪನೋಂದಣಾಧಿಕಾರಿ ಹಾಗೂ ಅಬಕಾರಿ ಇಲಾಖೆಯ ಕಚೇರಿಗಳು ಈಗಾಗಲೇ ಬೇರೆ ಕಟ್ಟಡಗಳಿಗೆ ಸ್ಥಳಾಂತರಗೊಂಡಿದ್ದು, ಸಂಬಂಧಿತ ಜಾಗ ಸಾರ್ವಜನಿಕ ಬಳಕೆಗೆ ಉಪಯೋಗವಾಗಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾಗುತ್ತಿರುವ ಬಸ್ ಶೆಲ್ಟರ್ ಕಾಮಗಾರಿಯನ್ನು ತಡೆಯುವುದು ಯಾವುದೇ ರೀತಿಯಲ್ಲೂ ಸಮಂಜಸವಲ್ಲ ಎಂದು ಹೇಳಿದರು. ಕಾಮಗಾರಿ ಸ್ಥಗಿತಗೊಳಿಸುವ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ಜಿಲ್ಲಾಡಳಿತ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆಯಲು ಮುಂದಿನ ಹಂತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಸೇರಿದಂತೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಹಳೆ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಬಳಿಕ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈಲ್ವೆ ಹೋರಾಟ ಸಮಿತಿಯ ನಾರಾಯಣ ಆಳ್ವ, ಬಿಜೆಪಿ ಮುಖಂಡ ಲೋಹಿತ್ ಕೌಡಳ್ಳಿ, ಹಿಂದೂ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ಮಂಜು ಕಬ್ಬಿನಗದ್ದೆ, ಮಿಲಿಟರಿ ಧರ್ಮಣ್ಣ, ನಾಗರಾಜ್, ಆಟೋ ರವಿ, ಕೌಶಿಕ್, ಶಿವು ಜಿಪ್ಪಿ, ದಿಲೀಪ್, ಹರೀಶ್ ಆಟೋ, ಮನು ಆಚಂಗಿ, ಪ್ರದೀಪ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಚಾರ ನಿಯಮ ಉಲ್ಲಂಘನೆ ಪತ್ತೆಗೆ ಪೊಲೀಸ್‌ ಇಲಾಖೆ ಹದ್ದಿನಕಣ್ಣು
ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆಗೆ ಸರ್ವರ್‌ ಕಿರಿಕಿರಿ!