ಟೋಲ್‌ ಗೇಟ್‌ ವಿರೋಧಿಸಿ ಪ್ರತಿಭಟನೆ

KannadaprabhaNewsNetwork |  
Published : Mar 20, 2024, 01:20 AM IST
ಪೊಟೊ: 19ಎಸ್‌ಎಂಜಿಕೆಪಿ07ಶಿವಮೊಗ್ಗ ಕಲ್ಲಾಪುರ ಟೋಲ್‌ ಗೇಟ್‌ ಬಳಿ ಟೋಲ್‌ ಸಂಗ್ರಹ ಕೈ ಬಿಡಬೇಕು ಆಗ್ರಹಿಸಿ ಖಾಸಗಿ ಬಸ್‌ಗಳನ್ನು ಅಡ್ಡ ನಿಲ್ಲಿಸಿ ದಿಢೀರ್‌ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ರಾಜ್ಯ ಸರ್ಕಾರ ಕೂಡಲೇ ಟೋಲ್‌ ಸಂಗ್ರಹ ಕೈ ಬಿಡಬೇಕು ಎಂದು ಆಗ್ರಹಿಸಿ ಖಾಸಗಿ ಬಸ್‌ ಮಾಲೀಕರು ಮಂಗಳವಾರ ಕಲ್ಲಾಪುರದ ಟೋಲ್‌ ಗೇಟ್‌ ಮುಂದೆ ಖಾಸಗಿ ಬಸ್‌ಗಳನ್ನು ಅಡ್ಡ ನಿಲ್ಲಿಸಿ, ದಿಢೀರ್‌ ಪ್ರತಿಭಟನೆ ನಡೆಸಿದರು. ಶಿವಮೊಗ್ಗ– ಶಿಕಾರಿಪುರ– ಹಾನಗಲ್‌ ರಾಜ್ಯ ಹೆದ್ದಾರಿಯ ಕಲ್ಲಾಪುರ ಮತ್ತು ಕುಟ್ರಳ್ಳಿಯಲ್ಲಿ ಟೋಲ್‌ ಗೇಟ್‌ಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಖಾಸಗಿ ಬಸ್‌ ಮಾಲೀಕರಿಗೆ ಹೊರೆಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೆ ಟೋಲ್‌ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಜ್ಯ ಸರ್ಕಾರ ಕೂಡಲೇ ಟೋಲ್‌ ಸಂಗ್ರಹ ಕೈ ಬಿಡಬೇಕು ಎಂದು ಆಗ್ರಹಿಸಿ ಖಾಸಗಿ ಬಸ್‌ ಮಾಲೀಕರು ಮಂಗಳವಾರ ಕಲ್ಲಾಪುರದ ಟೋಲ್‌ ಗೇಟ್‌ ಮುಂದೆ ಖಾಸಗಿ ಬಸ್‌ಗಳನ್ನು ಅಡ್ಡ ನಿಲ್ಲಿಸಿ, ದಿಢೀರ್‌ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ– ಶಿಕಾರಿಪುರ– ಹಾನಗಲ್‌ ರಾಜ್ಯ ಹೆದ್ದಾರಿಯ ಕಲ್ಲಾಪುರ ಮತ್ತು ಕುಟ್ರಳ್ಳಿಯಲ್ಲಿ ಟೋಲ್‌ ಗೇಟ್‌ಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಖಾಸಗಿ ಬಸ್‌ ಮಾಲೀಕರಿಗೆ ಹೊರೆಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೆ ಟೋಲ್‌ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ– ಸವಳಂಗ ನಡೆವೆ ಇರುವ ಕಲ್ಲಾಪುರದಲ್ಲಿ ಬಸ್‌ಗಳನ್ನು ಅಡ್ಡ ನಿಲ್ಲಿಸಿ, ಖಾಸಗಿ ಬಸ್‌ ಮಾಲೀಕರು ಪ್ರತಿಭಟನೆ ನಡೆಸಿದರು. ಅಂತರ ಜಿಲ್ಲೆ ಸಂಪರ್ಕಿಸುವ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನ ನಿತ್ಯ ಸಂಚರಿಸುತ್ತವೆ. ಎರಡು ಟೋಲ್‌ಗಳ ಅಕ್ಕಪಕ್ಕ ಹತ್ತಾರು ಹಳ್ಳಿಗಳಿವೆ. ರೈತರು ತೋಟ– ಗದ್ದೆಗೆ ತೆರಳಲು ಟೋಲ್ ಪಾವತಿಸಬೇಕಾಗುತ್ತಿದೆ. ಟೋಲ್ ಪಾವತಿಸುವುದಕ್ಕೆ ಪ್ರತಿ ತಿಂಗಳು ಖಾಸಗಿ ಬಸ್‌ ಮಾಲೀಕರಿಗೆ ಅಂದಾಜು ₹25 ಸಾವಿರ ಹೆಚ್ಚು ಹೊರೆಯಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಹೆಚ್ಚುವರಿ ಹೊರೆಯನ್ನು ಪ್ರಯಾಣಿಕರ ಮೇಲೆ ಹೊರಿಸಬೇಕಾಗುತ್ತದೆ. ಬಡವರು ಬಸ್‌ ಹತ್ತುವುದು ಕಷ್ಟವಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಲ್ಲಾಪುರ ಮತ್ತು ಕುಟ್ರಳ್ಳಿಯಲ್ಲಿ ಟೋಲ್‌ಗಳ ನಿರ್ಮಾಣಕ್ಕೆ ಸ್ಥಳೀಯರು, ರೈತರು, ವಿವಿಧ ಸಂಘಟನೆಗಳ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿಂದಿನಿಂದಲೂ ಇರುವ ರಸ್ತೆಗೆ ಟೋಲ್‌ ಪಾವತಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಶಿವಮೊಗ್ಗ– ಸವಳಂಗ ಮಧ್ಯೆ ವಾಹನ ಸಂಚಾರ ವ್ಯತ್ಯಯವಾಗಿತ್ತು.

- - - -19ಎಸ್‌ಎಂಜಿಕೆಪಿ07:

ಶಿವಮೊಗ್ಗ ಕಲ್ಲಾಪುರ ಟೋಲ್‌ ಗೇಟ್‌ ಬಳಿ ಟೋಲ್‌ ಸಂಗ್ರಹ ಕೈ ಬಿಡಬೇಕು ಆಗ್ರಹಿಸಿ ಖಾಸಗಿ ಬಸ್‌ಗಳನ್ನು ಅಡ್ಡ ನಿಲ್ಲಿಸಿ ದಿಢೀರ್‌ ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೀ ಹೆಬ್ಬಾಳಕರ್‌ ಬ್ಯಾಟಿಂಗ್‌ಗೆ ಶಾಸಕ ಆಸೀಫ್ ಸೇಠ್ ಬೋಲ್ಡ್‌
ಮೆಟ್ರೋ ದರ ಏರಿಸಿದ್ದು ನಾವಲ್ಲ, ಕೇಂದ್ರ : ಸಿಎಂ ಸಿದ್ದರಾಮಯ್ಯ