ಚಳವಳಿಗಾರರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Dec 14, 2024, 12:48 AM IST
ಪೊಟೋ ಪೈಲ್ ನೇಮ್ ೧೩ಎಸ್‌ಜಿವಿ೩   ಪಟ್ಟಣದ ವೀರರಾಣಿ ಕಿತ್ತೂರ ಚೆನ್ನಮ್ಮ ವೃತ್ತದಲ್ಲಿ ಪಂಚಮಸಾಲಿ ಸಮಾಜದ ತಾಲ್ಲೂಕು ಅದ್ಯಕ್ಷ  ಶಿವಾನಂದ ಬಾಗೂರ್ ನೇತೃತ್ವದಲ್ಲಿ ಬೆಳಗಾವಿ ನಗರದಲ್ಲಿ  ಪಂಚಮಸಾಲಿ ಸಮಾಜದ ಮೀಸಲಾತಿ ಚಳುವಳಿಗಾರರ ಮೇಲೆ ಪ್ರತಿಭಟನೆ | Kannada Prabha

ಸಾರಾಂಶ

ಶಿಗ್ಗಾಂವಿ ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಶಿವಾನಂದ ಬಾಗೂರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಿಗ್ಗಾಂವಿ: ಬೆಳಗಾವಿ ನಗರದಲ್ಲಿ ಪಂಚಮಸಾಲಿ ಸಮಾಜದ ಮೀಸಲಾತಿ ಚಳವಳಿಗಾರರ ಮೇಲೆ ಸರ್ಕಾರ ಪೊಲೀಸರಿಂದ ಲಾಠಿ ಚಾರ್ಜ್‌ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪಂಚಮಸಾಲಿ ಸಮಾಜದ ತಾಲೂಕು ಅದ್ಯಕ್ಷ ಶಿವಾನಂದ ಬಾಗೂರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಪಂಚಮಸಾಲಿ ಮುಖಂಡರು ಮಾತನಾಡಿ, ಬೆಳಗಾವಿ ನಗರದಲ್ಲಿ ಪಂಚಮಸಾಲಿ ಸಮಾಜದ ಮೀಸಲಾತಿ ಚಳವಳಿಗಾರರ ಮೇಲೆ ಸರ್ಕಾರ ಪೊಲೀಸರಿಂದ ಲಾಠಿ ಚಾರ್ಜ್ ಮಾಡಿಸಿ ದೌರ್ಜನ್ಯ ಮಾಡಿರುವುದನ್ನು ಖಂಡಿಸಿ ಹಾಗೂ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ ವೇಳೆ ಲಾಠಿ ಚಾರ್ಜ್‌ ಮಾಡಲಾಗಿದೆ. ಇದಕ್ಕೆ ಕಾರಣರಾದವರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಶಿಗ್ಗಾಂವಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಪಂಚಮಸಾಲಿ ಸಮಾಜದ ಮುಖಂಡರು ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪುರಸಭಾ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ, ಜಿಪಂ ಮಾಜಿ ಸದಸ್ಯ ಸಿ.ಎಸ್. ಪಾಟೀಲ ವಿಶ್ವನಾಥ ದೇವರಮನಿ, ಸುನೀಲ ಪಾಟೀಲ, ವಿಜುಗೌಡ ಪಾಟೀಲ, ವೀರಭದ್ರಪ್ಪ ಮೇಳಿ, ಸಣ್ಮುಖ ಉಳ್ಳಾಗಡ್ಡಿ, ಶಿವಯೋಗಿ ನವಲಗುಂದ, ಶೇಖರ ಬಳ್ಳಾರಿ, ಧರ್ಮರಾಜ ಕೋಳಿವಾಡ, ನಿಂಬನಗೌಡ ಮೇಳ್ಳಾಗಟ್ಟಿ, ಎಸ್.ವಿ. ಹುಲಸೋಗ್ಗಿ, ಶಿದ್ದನಗೌಡ ಪಾಟೀಲ, ಅಣ್ಣಪ್ಪ ನವಲಗುಂದ, ಪ್ರಶಾಂತ ಬಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ