ಯತ್ನಾಳ್ ಉಚ್ಚಾಟನೆ ವಿರೋಧಿಸಿ ಪ್ರತಿಭಟನೆ

KannadaprabhaNewsNetwork |  
Published : Apr 05, 2025, 12:47 AM IST
ಫೋಟೋ: 4 ಜಿಎಲ್‌ಡಿ1-  ಬಸನಗೌಡ ಪಾಟೀಲ  ಯತ್ನಾಳ  ಅವರ ಉಚ್ಛಾಟನೆ ಖಂಡಿಸಿ ಗುಳೇದಗುಡ್ಡದಲ್ಲಿ ಪ್ರತಿಭಟನೆ ನಡೆಯಿತು.    | Kannada Prabha

ಸಾರಾಂಶ

ವಿಜಯಪುರ ಮತಕ್ಷೇತ್ರದ ಶಾಸಕ, ಕೇಂದ್ರದ ಮಾಜಿ ಸಚಿವ ಬಸವನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಹಾಗೂ ಯತ್ನಾಳ ಬೆಂಬಲಿಗರು ಶುಕ್ರವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಗುಳೇದಗುಡ್ಡ

ವಿಜಯಪುರ ಮತಕ್ಷೇತ್ರದ ಶಾಸಕ, ಕೇಂದ್ರದ ಮಾಜಿ ಸಚಿವ ಬಸವನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಹಾಗೂ ಯತ್ನಾಳ ಬೆಂಬಲಿಗರು ಶುಕ್ರವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಪಟ್ಟಣದ ಬನ್ನಿಕಟ್ಟಿ ಓಣಿಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪುರಸಭೆ ಎದುರು ಸಭೆಯಾಗಿ ಮಾರ್ಪಟ್ಟಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ, ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪಂಚಮಸಾಲಿ ಸಮಾಜದ ಅಧ್ಯಕ್ಷ ಬಸವರಾಜ ಚಿಲ್ಲಾಪುರ ಮಾತನಾಡಿ, ಬಿಜೆಪಿಯಲ್ಲಿ ಹಿಂದುತ್ವಕ್ಕೆ ಬೆಲೆ ಇಲ್ಲದಂತಾಗಿದೆ. ಪಕ್ಷದಲ್ಲಿ ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣಕ್ಕೆ ಹೆಚ್ಚಿನ ಬೆಲೆ ನೀಡಲಾಗುತ್ತಿದೆ. ಭ್ರಷ್ಟಾಚಾರ ಮುಕ್ತ ಪಕ್ಷ ನಿರ್ಮಾಣಕ್ಕೆ ಶ್ರಮಿಸುತ್ತಿದ್ದ ಬಸವನಗೌಡ ಪಾಟೀಲ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಪಕ್ಷದ ತತ್ವ ಸಿದ್ಧಾಂತಗಳೇ ಗೊತ್ತಿಲ್ಲದ ವ್ಯಕ್ತಿಗಳನ್ನು ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದು ಖೇದಕರ ಸಂಗತಿಯಾಗಿದೆ. ಇದನ್ನು ವಿರೋಧಿಸಿದವರಿಗೆ ಪಕ್ಷದ ಹೈಕಮಾಂಡ್ ಉಚ್ಚಾಟನೆಯ ಶಿಕ್ಷೆ ನೀಡಿದೆ. ಹಿಂದುತ್ವವನ್ನು ಬಡಿದೆಬ್ಬಿಸುತ್ತಿರುವ ಹಿಂದೂ ಹುಲಿ ಎಂದೇ ಕರೆಸಿಕೊಂಡ ಬಸವನಗೌಡ ಪಾಟೀಲ್ ಯತ್ನಾಳರನ್ನು ತಕ್ಷಣವೇ ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಂಡು ಅವರ ಉಚ್ಚಾಟನೆ ರದ್ದು ಪಡಿಸಬೇಕು ಎಂದು ಆಗ್ರಹಿಸಿದರು. ಪುರಸಭೆ ಮಾಜಿ ಉಪಾಧ್ಯಕ್ಷ ಪ್ರಕಾಶ ಮುರಗೋಡ, ಸಾಗರ ಕೊಕಾಟಿ, ಬಸವರಾಜ ಚೀಲಾಪೂರ, ಮಹಾತೆಂಶ ಜಿರಲಿ, ಪ್ರಕಾಶ ಕಳಿಗುಡ್ಡ, ಶಿವಪುತ್ರಪ್ಪ ಕಳಿಗುಡ್ಡ, ಅಶೋಕ ಕಳಿಗುಡ್ಡ, ಪ್ರಭು ಕಳಿಗುಡ್ಡ ಸೇರಿದಂತೆ ಮಹಿಳೆಯರು ಹಾಗೂ ಯತ್ನಾಳ ಅವರ ಅಭಿಮಾನಿಗಳು ಭಾಗವಹಿಸಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ