2..ಸಾಗರ ಕಾಲೇಜಲ್ಲಿ ಪ್ರಾಧ್ಯಾಪಕರ ಕೊರತೆ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Sep 12, 2026, 01:30 AM IST
ಕೊಠಡಿಯಲ್ಲಿ ಚರ್ಚೆ ನಡೆಸಿದರು | Kannada Prabha

ಸಾರಾಂಶ

Protest at Sagar College against the shortage of professors.

ಸಾಗರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರ ಕೊರತೆ ವಿರೋಧಿಸಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕಾಲೇಜಿನ ಎದುರು ಪ್ರತಿಭಟನೆ ನಡೆಸಲಾಯಿತು. ಎಬಿವಿಪಿ ಪ್ರತಿಭಟನೆಗೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಚ್. ಹಾಲಪ್ಪ ಬೆಂಬಲ ನೀಡಿದರು.ನಂತರ ಕಾಲೇಜಿನ ಪ್ರಾಚಾರ್ಯರ ಕೋಣೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪ್ರಾಧ್ಯಾಪಕರ ಕೊರತೆಯಿಂದ ಆಗುತ್ತಿರುವ ಸಮಸ್ಯೆಯನ್ನು ಮನದಟ್ಟು ಮಾಡಿಕೊಡುವ ಪ್ರಯತ್ನ ನಡೆಸಿದ ಹಾಲಪ್ಪ, ತಕ್ಷಣ ಕೊರತೆ ಇರುವ ಪ್ರಾಧ್ಯಾಪಕರನ್ನು ನೇಮಕ ಮಾಡಬೇಕು. ನಾವು ಪ್ರತಿಭಟನೆ ಮಾಡಿದರೆ ವಿರೋಧ ಪಕ್ಷದವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕೆಲವರು ಆರೋಪಿಸುತ್ತಾರೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಮನಗಂಡು ತಕ್ಷಣ ಕೊರತೆ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಎಂದು ಮನವಿ ಮಾಡಿದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ದಕ್ಷಿಣ ಪ್ರಾಂತ್ಯ ರಾಜ್ಯ ಕಾರ್ಯಕಾರಿಣಿ ಸದಸ್ಯ ಮೋಹನ್ ಎಚ್.ಜಿ. ಮಾತನಾಡಿ, ಕಳೆದ ಜುಲೈನಲ್ಲಿ ಕಾಲೇಜು ಪ್ರಾರಂಭವಾಗಿದ್ದು ಈತನಕ ಪೂರ್ಣ ಪ್ರಮಾಣದ ಪ್ರಾಧ್ಯಾಪಕರು ಕಾಲೇಜಿನಲ್ಲಿ ಇಲ್ಲ. ಗಣಿತ ವಿಷಯ ಸೇರಿದಂತೆ ಅನೇಕ ಪಠ್ಯಗಳನ್ನು ಬೋಧಿಸಲು ಪ್ರಾಧ್ಯಾಪಕರೇ ಇಲ್ಲ. ಅಕ್ಟೋಬರ್ ನಂತರ ಪರೀಕ್ಷೆ ಪ್ರಾರಂಭವಾಗಲಿದ್ದು ಈತನಕ ಪಾಠ ಪ್ರವಚನ ನಡೆಯುತ್ತಿಲ್ಲ. ಅತಿಥಿ ಉಪನ್ಯಾಸಕರನ್ನು ಸಹ ನೇಮಕ ಮಾಡಿಲ್ಲ. ಮುಂದಿನ ಹತ್ತು ದಿನಗಳಲ್ಲಿ ಪ್ರಾಧ್ಯಾಪಕರ ಕೊರತೆ ನೀಗಿಸುವುದು, ಅತಿಥಿ ಉಪನ್ಯಾಸಕರನ್ನು ಭರ್ತಿ ಮಾಡದೆ ಹೋದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕುವ ಜೊತೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು.ಪುನೀತ್, ಸಂಜಯ್, ಆಕಾಶ್ ಡಿ.ಕೆ., ಮದನ್, ಭರತ್ ಇನ್ನಿತರರು ಹಾಜರಿದ್ದರು.೧೧ಕೆ.ಎಸ್.ಎ.ಜಿ.೨ಸಾಗರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರ ಕೊರತೆ ವಿರೋಧಿಸಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕಾಲೇಜಿನ ಎದುರು ಪ್ರತಿಭಟನೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ಸಾರಿಗೆ ಬಸ್‌ ಸಮಯ ಬದಲಿಸಲು ಆಗ್ರಹಿಸಿ ಧರಣಿ
ಹುತಾತ್ಮ ಅರಣ್ಯ ಅಧಿಕಾರಿಗಳ ತ್ಯಾಗ ಅಮೋಘ