ಔರಾದ್: ಹುಬ್ಬಳ್ಳಿ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಭೀಕರ ಹತ್ಯೆಯನ್ನು ಖಂಡಿಸಿ ತಾಲೂಕು ಎಬಿವಿಪಿಯಿಂದ ಪ್ರತಿಭಟನೆ ನಡೆಸಿ, ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ರಾಜಾರೋಷವಾಗಿ ಇಂತಹ ಕೃತ್ಯ ನಡೆಯುತ್ತಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಇದರಿಂದ ಕಾಲೇಜಿಗೆ ವಿದ್ಯಾರ್ಥಿಗಳು ಹೋಗಲು ಭಯದ ವಾತವಾರಣ ಉಂಟಾಗುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು. ಸೂಕ್ತ ತನಿಖೆ ನಡೆಸಿ ಕೊಲೆ ಮಾಡಿರುವ ಅಪರಾಧಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ, ನೀಲಮ್ಮಾ, ಪೂಜಾ, ವೈಷ್ಣವಿ, ಭಾಗ್ಯಶ್ರೀ, ಸುಹಾಸಿನಿ, ರೊಹಿನಿ, ವಿಜಯಕುಮಾರ್, ಗಣೇಶ, ಲಕ್ಷ್ಮೀಕಾಂತ ಚಾರೆ, ಮಲ್ಲಿಕಾರ್ಜುನ ಟೆಕರಾಜ, ಅನೀಲ ಮೇತ್ರೆ, ರಮೇಶ ವಾಘಮೋಡೆ, ಸೂರ್ಯಕಾಂತ ಇಟಗ್ಯಾಳ, ನಿತಿನ್ ಮುಲಗೆ, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.