ಹೊಸಪೇಟೆಯಲ್ಲಿ ಎಬಿವಿಪಿ ಪದಾಧಿಕಾರಿಗಳಿಂದ ಪ್ರತಿಭಟನೆ

KannadaprabhaNewsNetwork |  
Published : Apr 20, 2024, 01:03 AM IST
19ಎಚ್‌ಪಿಟಿ1-ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆ ಖಂಡಿಸಿ ಎಬಿವಿಪಿ ಪದಾಧಿಕಾರಿಗಳು ಹೊಸಪೇಟೆಯ ತಹಸೀಲ್ದಾರ್‌ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಎಬಿಪಿ ರಾಜ್ಯದ ಹೋರಾಟಕ್ಕೆ ಕರೆ ನೀಡಿದ ಈ ಹಿನ್ನೆಲೆಯಲ್ಲಿ ಹೊಸಪೇಟೆ ನಗರ ಶಾಖೆಯಿಂದ ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಹೊಸಪೇಟೆ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡನೀಯ. ಲವ್‌ ಜಿಹಾದ್‌ಗಾಗಿ ಈ ಹತ್ಯೆ ಮಾಡಲಾಗಿದೆ. ಆರೋಪಿಗೆ ಶಿಕ್ಷೆ ವಿಧಿಸಬೇಕು ಎಂದು ನಗರದ ತಹಸೀಲ್ದಾರ ಕಚೇರಿ ಎದುರು ಶುಕ್ರವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಫಯಾಜ್ ಎಂಬಾತ ಆಕೆಯನ್ನುಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ನಿರಾಕರಿಸಿದಕ್ಕಾಗಿ ವಿದ್ಯಾರ್ಥಿನಿಗೆ ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದಿದ್ದಾನೆ. ಆರೋಪಿ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಜ್ಞಾನದ ದೇಗುಲವಾದ ಕಾಲೇಜು ಆವರಣದಲ್ಲೇ ಹಾಡಹಗಲೇ ಭೀಕರ ಹತ್ಯೆ ಹೆದರಿಕೆ ಹುಟ್ಟುವಂತೆ ಮಾಡಿದೆ. ಈ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಈ ಕೃತ್ಯ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಇಂತಹ ಘಟನೆ ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಬಿಪಿ ರಾಜ್ಯದ ಹೋರಾಟಕ್ಕೆ ಕರೆ ನೀಡಿದ ಈ ಹಿನ್ನೆಲೆಯಲ್ಲಿ ಹೊಸಪೇಟೆ ನಗರ ಶಾಖೆಯಿಂದ ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಂಕರ್ ಆನಂದ ಸಿಂಗ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

ಎಬಿವಿಪಿಯ ನಗರ ಕಾರ್ಯದರ್ಶಿ ಪ್ರದೀಪಕುಮಾರ್, ಪದಾಧಿಕಾರಿಗಳಾದ ವಿನೀತಕುಮಾರ್, ವೆಂಕಟ್ ಸಾಯಿ, ವಿಶ್ವ, ನವೀನ್, ವಿಜಯ್ ಕುಮಾರ್, ಕಾರ್ತಿಕ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಳೆನರಸೀಪುರದಲ್ಲಿ ಯುಗಾದಿ ಹಬ್ಬದ ವ್ಯಾಪಾರ ಬಲು ಜೋರು
ಅವಧಿ ಮುಗಿದ ಅಹಾರ ಸರಬರಾಜು: ಬ್ಲಿಂಕ್‌ಇಟ್ ಗೋದಾಮಿಗೆ ದಾಳಿ