ಕನ್ನಡಪ್ರಭ ವಾರ್ತೆ ಮದ್ದೂರು
ಸಂಘಟನೆ ರಾಜ್ಯ ಸಂಚಾಲಕ ಅಂದಾನಿ ಸೋಮನಹಳ್ಳಿ ನೇತೃತ್ವದಲ್ಲಿ ಪ್ರತಿಭಟನೆಗಿಳಿದ ದಸಂಸ ಕಾರ್ಯಕರ್ತರು ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು.
ನಂತರ ತಾಲೂಕು ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ಕಚೇರಿ ಪ್ರವೇಶ ದ್ವಾರದಲ್ಲಿ ಧರಣಿ ನಡೆಸಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಮಿಷಾ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಪಡಿಸಿದರು.ರಾಷ್ಟ್ರಪತಿಗಳು ಈ ಕೂಡಲೇ ಮಧ್ಯಪ್ರವೇಶ ಮಾಡಿ ಅಂಬೇಡ್ಕರ್ ವಿರುದ್ಧ ಟೀಕೆ ಮಾಡಿರುವ ಅಮಿತ್ ಶಾ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ನಿಂದು ಅಂದಾನಿ ಸೋಮನಹಳ್ಳಿ ಒತ್ತಾಯಿಸಿದರು.
ಅಮಿತ್ ಶಾ ಹೇಳಿಕೆಯಿಂದ ಹಕ್ಕುಚ್ಯುತಿ
ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯಿಂದ ಹಕ್ಕು ಚ್ಯುತಿ ಉಲ್ಲಂಘನೆಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಗುರುವಾರ ಹೇಳಿದರು.
ದೇಶಕ್ಕೆ ಸಂವಿಧಾನ ತಂದುಕೊಟ್ಟ ಅಂಬೇಡ್ಕರ್ ಮಹಾನ್ ವ್ಯಕ್ತಿಯಾಗಿದ್ದಾರೆ. ಇಂತವರ ಬಗ್ಗೆ ಜವಾಬ್ದಾರಿ ಸ್ಥಾನದಲ್ಲಿರುವ ಅಮಿಶಾ ಈ ರೀತಿ ಮಾತನಾಡಿರುವುದು ಸರಿಯಲ್ಲ. ಹೀಗಾಗಿ ಅವರು ದಲಿತ ಜನಾಂಗದ ಕ್ಷಮೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.