ಕೃಷಿ ಕೂಲಿಕಾರರಿಂದ ಚಿಕ್ಕರಸಿನಕೆರೆ ಗ್ರಾಪಂ ಎದುರು ಪ್ರತಿಭಟನೆ

KannadaprabhaNewsNetwork |  
Published : Feb 06, 2024, 01:31 AM IST
5ಕೆಎಂಎನ್ ಡಿ28ಚಿಕ್ಕಅರಸಿನಕೆರೆ ಗ್ರಾಮ ಪಂಚಾಯ್ತಿ ಎದುರು ಕೃಷಿ ಕೂಲಿಕಾರರು ಸಿಪಿಐಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡದೆ ಅಧಿಕಾರಿಗಳು ಬೇಜಾವಾಬ್ದಾರಿ ಪ್ರದರ್ಶಿಸುತ್ತಿದ್ದಾರೆ. ಈ ಕೂಡಲೇ ಕೆಲಸ ನೀಡಬೇಕು ಎಂದು ಆಗ್ರಹ ತಾಪಂ ಇಒ ಸ್ಥಳಕ್ಕಾಗಮಿಸಿ ಸಮಸ್ಯೆ ಬಗೆಹರಿಸುವವರೆಗೆ ಧರಣಿ ಕೈಬಿಡುವುದಿಲ್ಲವೆಂದು ಕೃಷಿ ಕೂಲಿಕಾರರು ಪಟ್ಟು.

ಕನ್ನಡಪ್ರಭ ವಾರ್ತೆ ಭಾರತೀನಗರ

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಚಿಕ್ಕರಸಿನಕೆರೆ ಗ್ರಾಪಂ ಎದುರು ಕೃಷಿಕೂಲಿಕಾರರ ಸಂಘದ ಪದಾಧಿಕಾರಿಗಳು ಸಿಪಿಐಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಗ್ರಾಪಂ ಎದುರು ಆಗಮಿಸಿ ಸಮರ್ಪಕವಾಗಿ ಕೃಷಿ ಕೂಲಿಕಾರರಿಗೆ ಕೆಲಸ ನೀಡುತ್ತಿಲ್ಲ ಎಂದು ಪಂಚಾಯ್ತಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡದೆ ಅಧಿಕಾರಿಗಳು ಬೇಜಾವಾಬ್ದಾರಿ ಪ್ರದರ್ಶಿಸುತ್ತಿದ್ದಾರೆ. ಈ ಕೂಡಲೇ ಕೆಲಸ ನೀಡಬೇಕು. ತಾಪಂ ಇಒ ಸ್ಥಳಕ್ಕಾಗಮಿಸಿ ಸಮಸ್ಯೆ ಬಗೆಹರಿಸುವವರೆಗೆ ಧರಣಿ ಕೈಬಿಡುವುದಿಲ್ಲವೆಂದು ಪಟ್ಟು ಹಿಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಪಂನ ಸಹಾಯಕ ಅಧಿಕಾರಿ ರಮೇಶ್, ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆಗಳ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ನಂತರ ಬೇಡಿಕೆ ಈಡೇರಿಸದಿದ್ದರೆ ಗ್ರಾಪಂ ಮುಂದೆ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸಿಪಿಐಎಂ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು, ತಾಲೂಕು ಘಟಕದ ಮುಖಂಡರಾದ ಮಧುಕುಮಾರ್, ಮಳವಳ್ಳಿ ತಾಲೂಕು ಘಟಕದ ಅಧ್ಯಕ್ಷ ಶಿವಮಲ್ಲಯ್ಯ, ಈರೇಗೌಡ, ನಾಗಮ್ಮ, ಬಸವರಾಜು, ಶಕುಂತಲಾ, ಯೋಗೇಶ್, ದೇವರಾಜು, ಗೌರಮ್ಮ, ಕುನ್ನಯ್ಯ, ಗೋಪಾಲಸ್ವಾಮಿ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

ಏಳನೇ ವೇತನ ಜಾರಿಗಾಗಿ ಪ್ರತಿಭಟನಾ ಧರಣಿ

ಮಂಡ್ಯ:ಶೇ.೪೦ರಷ್ಟು ಹೆಚ್ಚಳದೊಂದಿಗೆ ೭ನೇ ವೇತನ ಪರಿಷ್ಕರಣೆಯನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಫೆ.೭ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಒಂದು ದಿನದ ರಾಜ್ಯ ಮಟ್ಟದ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸದಸ್ಯೆ ರೇಣುಕಾ ತಿಳಿಸಿದರು.ರಾಜ್ಯದ ಎಲ್ಲಾ ನೌಕರರಿಗೂ ಪಿಎಫ್‌ಡಿಆರ್‌ಡಿಎ ಕಾಯ್ದೆ/ಎನ್‌ಪಿಎಸ್ ಪದ್ಧತಿ ರದ್ದುಪಡಿಸಿ ನಿಶ್ಚಿತ ಪಿಂಚಣಿ ಯೋಜನೆ (ಒಪಿಎಸ್) ಮರುಸ್ಥಾಪಿಸುವುದು, ಖಾಲಿ ಇರುವ ಎಲ್ಲಾ ಹುದ್ದೋಎಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗುತ್ತಿಗೆ, ಹೊರಗುತ್ತಿಗೆ ಅರೆಕಾಲಿಕ ನೇಮಕಾತಿಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು, ಸದರಿಯವರ ವೇತನವನ್ನು ಸರ್ಕಾರದಿಂದ ನೇರವಾಗಿ ಖಾತೆಗೆ ಜಮಾ ಮಾಡುವುದು, ಇವರುಗಳನ್ನು ಎಲ್ಲಾ ನೇರ ನೇಮಕಾತಿಗಳಲ್ಲಿ ಖಾಯಂಗೊಳಿಸುವುದು, ಇನ್ನು ಮುಂದೆ ಗುತ್ತಿಗೆ/ಹೊರಗುತ್ತಿಗೆ ನೇಮಕಾತಿಯನ್ನು ಕೈಬಿಟ್ಟು ಖಾಯಂ ನೇಮಕಾತಿ ಮಾಡಿಕೊಳ್ಳುವುದು.ಕೋವಿಡ್ ನೆಪದಲ್ಲಿ ತಡೆಹಿಡಿಯಲಾಗಿರುವ ೧೮ ತಿಂಗಳ ತುಟ್ಟಿಭತ್ಯೆ ಬಿಡುಗಡೆ ಮಾಡುವುದು. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಶೀಘ್ರ ಪರಿಷ್ಕರಣೆ ಮಾಡಿ, ಜೇಷ್ಠತಾ ಪಟ್ಟಿ ಸಿದ್ಧಪಡಿಸುವುದು ಹಾಗೂ ನಿಯಮಾನುಸಾರ ಪದೋನ್ನತಿ ನೀಡುವುದು.

ಒಕ್ಕೂಟದ ಪದಾಧಿಕಾರಿಗಳಾದ ಟಿ.ಎಸ್.ಸುನಿಲ್‌ಕುಮಾರ್, ಜಿ.ವಿ. ಶಿವಕುಮಾರ್, ಸಿದ್ದರಾಜು, ಮಹಾದೇವ, ಟಿ.ಎ.ಪ್ರಶಾಂತಬಾಬು ಗೋಷ್ಠಿಯಲ್ಲಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...