ಕನ್ನಡಪ್ರಭ ವಾರ್ತೆ ಮಂಡ್ಯ
ನಗರಸಭೆ ಮುಂದೆ ಸೇರಿದ ಬೀಡಿ ಕಾರ್ಮಿಕರು ಹಾಗೂ ಕೂಲಿಕಾರರು ಸರ್ಕಾರ, ನಗರಸಭೆ ವಿರುದ್ಧ ಘೋಷಣೆ ಕೂಗಿದರು. ನಂತರ ನಗರಸಭಾಧ್ಯಕ್ಷರು, ಪೌರಾಯುಕ್ತರಿಗೆ ಮನವಿ ಸಲ್ಲಿಸಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ನಗರದ ಬೀಡಿ ಕಾಲೋನಿಯಲ್ಲಿ ವಾಸಿಸುತ್ತಿರುವ ಬಡವರಿಗೆ ಸ್ಥಳದಲ್ಲೇ ಹಕ್ಕುಪತ್ರ ನೀಡಬೇಕು. ನಗರದಲ್ಲಿ ಸಾವಿರಾರು ಕುಟುಂಬಗಳು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಇವರಿಗೆ ನಿವೇಶನ ಹಂಚಿಕೆ ಮಾಡಿ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಧನ ಸಹಾಯ ನೀಡುವಂತೆ ಒತ್ತಾಯಿಸಿದರು.ಕೆರೆಯಂಗಳ, ಬೀಡಿ ಕಾಲೋನಿ, ಮುಸ್ಲಿಂ ಬ್ಲಾಕ್, ಗುತ್ತಲು, ಹಾಲಹಳ್ಳಿ, ಎಸ್.ಡಿ.ಜಯರಾಂ ಬಡಾವಣೆ ಮತ್ತು ನಗರದಾದ್ಯಂ ಹದಗೆಟ್ಟಿರುವ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಕೆಟ್ಟುಹೋಗಿರುವ ವಿದ್ಯುತ್ ದೀಪಗಳನ್ನು ತಕ್ಷಣದಲ್ಲಿ ಅಳವಡಿಸಬೇಕು ಎಂದು ಆಗ್ರಹಿಸಿದರು.
ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು, ಜಿಲ್ಲಾಧ್ಯಕ್ಷ ಬಿ.ಎಂ.ಶಿವಮಲ್ಲಯ್ಯ, ಬಿ.ಹನುಮೇಶ್, ಅಮಾಸಯ್ಯ, ಆರ್.ರಾಜು, ಅಬ್ದುಲ್ಲಾ, ಕುಷ್ಪರ್, ಬಾನು, ಶಾಕೀರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.