ಸುಹಾಸ್‌ ಶೆಟ್ಟಿ ಕೊಲೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

KannadaprabhaNewsNetwork |  
Published : May 04, 2025, 01:30 AM IST
೨ಕೆಎಲ್‌ಆರ್-೧೧ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಕೋಲಾರದ ಡೊಂಲೈಟ್ ವೃತ್ತದಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಮುಖಂಡರು ಮಾನವ ಸರಪಳಿ ನಿರ್ಮಿಸಿ, ಕೆಲ ಕಾಲ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವುದು. | Kannada Prabha

ಸಾರಾಂಶ

ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ, ನಗರದ ಡೊಂಲೈಟ್ ವೃತ್ತದಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಮುಖಂಡರು ಮಾನವ ಸರಪಳಿ ನಿರ್ಮಿಸಿ, ಕೆಲ ಕಾಲ ರಸ್ತೆ ಬಂದ್ ಮಾಡಿ, ಟಯರ್‌ಗೆ ಬೆಂಕಿ ಹಾಕಿ ಸಿಎಂ ಸಿದ್ದರಾಮಯ್ಯರ ರಾಜೀನಾಮೆಗೆ ಒತ್ತಾಯಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಕೋಲಾರಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ, ನಗರದ ಡೊಂಲೈಟ್ ವೃತ್ತದಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಮುಖಂಡರು ಮಾನವ ಸರಪಳಿ ನಿರ್ಮಿಸಿ, ಕೆಲ ಕಾಲ ರಸ್ತೆ ಬಂದ್ ಮಾಡಿ, ಟಯರ್‌ಗೆ ಬೆಂಕಿ ಹಾಕಿ ಸಿಎಂ ಸಿದ್ದರಾಮಯ್ಯರ ರಾಜೀನಾಮೆಗೆ ಒತ್ತಾಯಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸಾಕಷ್ಟು ಹಿಂದೂ ಹೋರಾಟಗಾರರ ಕೊಲೆಗಳಿಗೆ ರಾಜ್ಯದ ಜನತೆ ತಕ್ಕ ಪಾಠ ಮಾಡಿದ್ದರೂ, ಕಳೆದ ಎರಡು ವರ್ಷಗಳಿಂದ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಜಿಹಾದಿ ಮುಸ್ಲಿಂ ಯುವಕರನ್ನು ಬಳಸಿಕೊಂಡು ಕೊಲೆಗಳು ನಡೆಯುತ್ತಿದ್ದು, ನಾವು ಕರ್ನಾಟಕ ರಾಜ್ಯದಲ್ಲಿ ಇದ್ದೇವಾ ಇಲ್ಲ ಪಾಕಿಸ್ತಾನದಲ್ಲಿ ಇದ್ದೇವೆಯೇ ಎಂದು ತಿಳಿಯುತ್ತಿಲ್ಲ ಎಂದು ದೂರಿದ್ದಾರೆ.ರಾಜ್ಯದಲ್ಲಿ ಬೆಳಗಾದರೆ ಹಿಂದೂ ಯುವಕರ ಕೊಲೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸರ್ವೇ ಸಾಮಾನ್ಯವಾಗಿದೆ. ಜಿಹಾದಿ ಕಾಂಗ್ರೆಸ್ ಸರ್ಕಾರದಲ್ಲಿ ಸಾಮಾನ್ಯ ಜನರಿಗೆ ಹಾಗೂ ಹಿಂದೂ ಕಾರ್ಯಕರ್ತರಿಗೆ ಯಾವುದೇ ರಕ್ಷಣೆ ಇಲ್ಲವಾಗಿದ್ದು, ಎಷ್ಟೇ ಕೊಲೆಗಳು ಆದರೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಸ್ಲಿಂಮರನ್ನು ಓಲೈಕೆ ಮಾಡಿಕೊಂಡು, ಅಸ್ತ್ರ ನೀಡಿ ಹಿಂದೂಗಳ ಕೊಲೆಗಳನ್ನು ಮಾಡಿಸುತ್ತಿದ್ದಾರೆ ಎಂದು ದೂರಿದರು. ಮುಖಂಡರಾದ ಕೃಷ್ಣಮೂರ್ತಿ, ವಿಜಯಕುಮಾರ್, ನಾಮಾಲ್ ಮಂಜು, ಕೆಂಬೋಡಿ ನಾರಾಯಣಸ್ವಾಮಿ, ಭಜರಂಗದಳದ ಬಾಲಾಜಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!