ಬೇಡಿಕೆಗೆ ಆಗ್ರಹಿಸಿ ಅಂಗನವಾಡಿ ಬಂದ್ ಮಾಡಿ ಪ್ರತಿಭಟನೆ

KannadaprabhaNewsNetwork |  
Published : Jul 10, 2025, 12:47 AM ISTUpdated : Jul 10, 2025, 12:48 AM IST
ಅಥಣಿ ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರು, ಗ್ರಾಪಂ ನೌಕರರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಕೇಂದ್ರ ಸರ್ಕಾರ ದೇಶದಲ್ಲಿ ಜಾರಿಗೆ ತಂದಿರುವ ಕಾರ್ಮಿಕ ಕಾನೂನು ನೀತಿ ಖಂಡಿಸಿ ಮತ್ತು ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ತಾಲೂಕಿನ ನೂರಾರು ಅಂಗನವಾಡಿಯ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತಿ ಹೊರಗುತ್ತಿಗೆ ನೌಕರರು ತಾಲೂಕಾಡಳಿತದ ಶಕ್ತಿ ಕೇಂದ್ರ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜೇವರ್ಗಿ ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಅಥಣಿ

ಕೇಂದ್ರ ಸರ್ಕಾರ ದೇಶದಲ್ಲಿ ಜಾರಿಗೆ ತಂದಿರುವ ಕಾರ್ಮಿಕ ಕಾನೂನು ನೀತಿ ಖಂಡಿಸಿ ಮತ್ತು ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ತಾಲೂಕಿನ ನೂರಾರು ಅಂಗನವಾಡಿಯ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತಿ ಹೊರಗುತ್ತಿಗೆ ನೌಕರರು ತಾಲೂಕಾಡಳಿತದ ಶಕ್ತಿ ಕೇಂದ್ರ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜೇವರ್ಗಿ ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಈ ವೇಳೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಐ.ಎಸ್.ಪಾಟೀಲ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಅಂಗನವಾಡಿಗಳಲ್ಲಿ ಎಫ್‌ಆರ್‌ಎಸ್ ಕಡ್ಡಾಯವಾಗಿ ಜಾರಿಗೊಳಿಸುವಂತೆ ನಿರ್ದೇಶನ ನೀಡಿದ್ದು, ಮಕ್ಕಳ ಮುಖ ಗುರ್ತಿಸುವ ವ್ಯವಸ್ಥೆಗೆ ಅನೇಕ ಅಂಗನವಾಡಿ ಕೇಂದ್ರಗಳಲ್ಲಿ ವೈಫೈ ಮತ್ತು ಇಂಟರನೆಟ್‌ ವ್ಯವಸ್ಥೆ ಇರುವುದಿಲ್ಲ. 5ಜಿ ಸಾಮರ್ಥ್ಯ ಹೊಂದಿದ ಮೊಬೈಲ್ ಮತ್ತು ಸಿಮ್‌ಗಳು ಒದಗಿಸದೇ ಎಫ್‌ಆರ್‌ಎಸ್ ಜಾರಿಗಾಗಿ ಅಂಗನವಾಡಿ ನೌಕರರ ಮೇಲೆ ತುಂಬಾ ಒತ್ತಡ ಹೇರಲಾಗುತ್ತಿದೆ. ಇದರಿಂದ ಅನೇಕ ಅಂಗನವಾಡಿ ನೌಕರರು ಮಾನಸಿಕ ನೋವು ಅನುಭವಿಸುತ್ತಿದ್ದಾರೆ. ಈ ಯೋಜನೆಯನ್ನು ಹೇಗೆ ಸಫಲತೆ ಮಾಡುವುದು ಚಿಂತೆಯಾಗಿ ಕಾಡುತ್ತಿದೆ. ಕೇಂದ್ರ ಸರ್ಕಾರ ಈ ವ್ಯವಸ್ಥೆ ಮರುಪರಿಶೀಲಿಸಬೇಕು. ಇಲ್ಲವೇ ಕಡ್ಡಾಯ ಮಾಡಿರುವುದನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಕಳೆದ ಹಲವು ವರ್ಷಗಳಿಂದ ಐಸಿಡಿಎಸ್‌ ಅಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಈ ಯೋಜನೆಯ ಕಾಯಂಗೊಳಿಸಬೇಕು. ಈ ಯೋಜನೆಯನ್ನು ಆಧರಿಸಿ ಪಡಿತರ ಸಾಮಗ್ರಿಗಳನ್ನು ನಿಲ್ಲಿಸಬಾರದು. ಕೇಂದ್ರ ಸರ್ಕಾರದ ಈ ಧೋರಣೆಯ ವಿರುದ್ಧ ಅಂಗನವಾಡಿ ನೌಕರರ ಸಂಘ ಹೋರಾಟ ನಡೆಸುತ್ತಿದ್ದು, ದೇಶದಲ್ಲಿ 29 ಕಾರ್ಮಿಕ ಕಾನೂನುಗಳನ್ನ ರದ್ದುಗೊಳಿಸಿ ಹೊಸದಾಗಿ ಜಾರಿಗೆ ತಂದಿರುವ 4 ಸಂಹಿತೆಗಳನ್ನು ಜಾರಿಗೆ ತರುವ ಮೂಲಕ ಅಂಗನವಾಡಿ ನೌಕರರು ನಡೆಸುತ್ತಿರುವ ಹೋರಾಟವನ್ನು ಹಕ್ಕುವ ಪ್ರಯತ್ನ ಮಾಡಲಾಗುತ್ತಿದೆ. ನಾವು ಇಂದು ಅಂಗನವಾಡಿಗಳು ಕೇಂದ್ರಗಳನ್ನ ಬಂದ್ ಮಾಡಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ಗುಡುಗಿದರು.ಸಚಿವರ ಮನೆ ಮುಂದೆ ಧರಣಿ:

ಕೇಂದ್ರ ಮತ್ತು ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿದ ಇದ್ದರೇ ಸಚಿವರ ಮನೆ ಮುಂದೆ ವಿತರಣೆ ನಡೆಸಬೇಕಾಗುತ್ತದೆ. ಸರ್ಕಾರ ಎಫ್‌ಆರ್‌ಎಸ್‌ನ್ನು ಕಡ್ಡಾಯಗೊಳಿಸಬಾರದು. ₹26 ಸಾವಿರ ಕನಿಷ್ಠ ವೇತನ, ₹10 ಸಾವಿರ ಮಾಸಿಕ ಪಿಂಚಣಿ ಕೊಡಬೇಕು. ಗುಜರಾತ್ ಮಾದರಿಯಲ್ಲಿ ಅಂಗನವಾಡಿ ನೌಕರರನ್ನು ಕಾಯಂಗಗೊಳಿಸಬೇಕು. ಐಸಿಡಿಎಸ್ ಯೋಜನೆಗೆ ಬಜೆಟ್ ಹೆಚ್ಚಿಸಬೇಕು. ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ವೈಫೈ ವ್ಯವಸ್ಥೆ ಕಲ್ಪಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತ ಹಾಗೂ ಸಹಾಯಕ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಐ.ಎಸ್.ಪಾಟೀಲ ಒತ್ತಾಯಿಸಿದರು.ತಾಲೂಕು ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಮಹಾಬುಬ್ ತರತರಿ ಮಾತನಾಡಿ, ಕೇಂದ್ರ ಸರ್ಕಾರ ಅನೇಕ ಒತ್ತಡಗಳನ್ನು ಇರುವ ಮೂಲಕ ರಾಜ್ಯದಲ್ಲಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಕಾರ್ಪೊರೇಟ್ ಬಂಡವಾಳ ಶಾಹಿಗಳಿಗೆ ಮಣಿ ಹಾಕುತ್ತಿದೆ. 2019 ಹಾಗೂ 2020ರಲ್ಲಿ ಪಾರ್ಲಿಮೆಂಟ್‌ನಲ್ಲಿ ಅಂಗೀಕರಿಸಿದ 4 ಸಂಹಿತೆಗಳನ್ನು ಅನುಷ್ಠಾನಕ್ಕೆ ತೊಂದರೆ ತನ್ನ ಪ್ರಭಾವವನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈ ಕಾರ್ಮಿಕ ಕಾನೂನುಗಳಲ್ಲಿ ತಿದ್ದುಪಡಿ ಮಾಡಿ ಜಾರಿಗೆ ತರುವ ತೆರೆಮನೆಯ ಪ್ರಯತ್ನ ನಡೆಯುತ್ತಿವೆ. ಇದರಿಂದ ರಾಜ್ಯದ ಬಹು ಸಂಖ್ಯೆಯ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಹಾಗೂ ದುಡಿಯುವ ಜನರು ಕಾನೂನುಗಳ ರಕ್ಷಣೆಯಿಂದ ಹೊರಗೊಡೆಯುತ್ತಾರೆ. ಈಗಾಗಲೇ ಉದ್ಯೋಗದಲ್ಲಿರುವ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಸಂಭವ ಹೆಚ್ಚಾಗಿದೆ. ಈ ಕಾನೂನುಗಳಿಗೆ ತಿದ್ದುಪಡಿ ಮಾಡಬಾರದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಹೊರಗುತ್ತಿಗೆಯ ನೌಕರರು, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಅಥಣಿ ತಾಲೂಕು ಸಮಿತಿಯ ಎಲ್ಲ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಉದ್ಯೋಗದಲ್ಲಿರುವ ಕಾರ್ಮಿಕರಿಗೆ ಮಾರಕವಾಗಿರುವ ಈ ಕಾರ್ಮಿಕ ಕಾನೂನು ನೀತಿಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು. ನಂತರ ತಾಲೂಕ ತಹಸೀಲ್ದಾರ್ ಸಿದರಾಯ ಬೋಸಗಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಮಂಜುನಾಥ್ ಅವರಿಗೆ ಪ್ರತ್ಯೇಕ ಮನವಿ ಪತ್ರಗಳನ್ನು ನೀಡುವ ಮೂಲಕ ತಮ್ಮ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್.ಎಸ್.ತೇಲಿ, ಅಮೃತಾ ಡಂಗಿ, ಸಂಗೀತ ನಾಟಿಕಾರ್ ಸೇರಿದಂತೆ ನೂರಾರು ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯತಿ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತಿ ನೌಕರರು ಅಥಣಿ ಪಟ್ಟಣದ ಹೊರವಲಯದ ಮಿನಿವಿಧಾನಸೌಧದ ಮುಂಭಾಗದಲ್ಲಿ ಜೇವರ್ಗಿ ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲಹೊತ್ತು ವಾಹನಗಳ ಸಂಚಾರಕ್ಕೆ ಸಮಸ್ಯೆಯುಂಟಾಯಿತು. ಸ್ಥಳಕ್ಕೆ ತಹಸೀಲ್ದಾರ್‌ ಸಿದರಾಯ ಬೋಸಗಿ, ಅಥಣಿ ಪಿಎಸೈ ಗಿರಿಮಲ್ಲಪ್ಪ ಉಪ್ಪಾರ, ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಸಿಡಿಪಿಒ ಮಂಜುನಾಥ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನಾಕಾರರು ಮನವಿ ಪತ್ರಗಳನ್ನು ಸ್ವೀಕರಿಸಿದರು. ನಂತರ ರಸ್ತೆ ಸಂಚಾರವನ್ನು ಸುಗಮಗೊಳಿಸಿದರು.

PREV

Latest Stories

ಧರ್ಮಸ್ಥಳ ಗ್ರಾಮ ಕೇಸ್‌: ಇಬ್ಬರು ಐಪಿಎಸ್‌ಗಳು ಎಸ್‌ಐಟಿಯಿಂದ ಔಟ್‌?
ಡಿಕೆಶಿಗೆ ಅಪಮಾನ ಮಾಡುವುದಕ್ಕೆ ಸಿಎಂ ಸಿದ್ದು ಸಮಾವೇಶ: ಅಶೋಕ
ಸಹನೆ, ತಾಳ್ಮೆ, ನೈತಿಕತೆಯಿಂದ ಯಶಸ್ಸು ಸಾಧ್ಯ