ಬಾಕಿ ಪಿಂಚಣಿ ಬಿಡುಗಡೆಗೆ ಆಗ್ರಹಿಸಿ ದೇವದಾಸಿ ಮಹಿಳಾ ವಿಮೋಚನಾ ಸಂಘದಿಂದ ಪ್ರತಿಭಟನೆ

KannadaprabhaNewsNetwork |  
Published : Sep 05, 2024, 12:40 AM IST
ಬಾಕಿ ಪಿಂಚಣಿ ಬಿಡುಗಡೆಗೆ ಆಗ್ರಹಿಸಿ ದೇವದಾಸಿ ಮಹಿಳಾ ವಿಮೋಚನಾ ಸಂಘದಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಜರುಗಿತು.  | Kannada Prabha

ಸಾರಾಂಶ

ಕಳೆದ 2024ರ ರಾಜ್ಯ ಬಜೆಟ್ ನಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಿಕ ಪಿಂಚಣಿ ಹೆಚ್ಚಳ ಮಾಡಲಾಗಿದೆ.

ಬಳ್ಳಾರಿ: ದೇವದಾಸಿಯರ ಬಾಕಿ ಇರುವ ಮಾಸಿಕ ಪಿಂಚಣಿಯನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಳೆದ 2024ರ ರಾಜ್ಯ ಬಜೆಟ್ ನಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಿಕ ಪಿಂಚಣಿ ಹೆಚ್ಚಳ ಮಾಡಲಾಗಿದೆ. ಆದರೆ, ಹೆಚ್ಚಳಗೊಂಡಿರುವ ಪಿಂಚಣಿಯನ್ನು ಈವರೆಗೆ ಬಿಡುಗಡೆ ಮಾಡಿಲ್ಲ. ಇದರಿಂದ ಕುಟುಂಬಗಳ ನಿರ್ವಹಣೆಗೆ ತೊಂದರೆಯಾಗಿದ್ದು, ಕೂಡಲೇ ಮಾಸಿಕ ಪಿಂಚಣಿ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಖನಿಜ ನಿಧಿ ಹಣದಿಂದ ದೇವದಾಸಿ ಮಹಿಳೆಯರಿಗೆ ನಿವೇಶನಕ್ಕಾಗಿ ಭೂಮಿಯನ್ನು ಖರೀದಿ ಮಾಡಬೇಕು. ದೇವದಾಸಿ ಮಹಿಳೆಯರಿಗೆ 80x80 ಜಾಗ ನೀಡಿ ₹6 ಲಕ್ಷವರೆಗೂ ಮನೆ ಕಟ್ಟಿಕೊಳ್ಳಲು ನೀಡಬೇಕು. ಹೈನುಗಾರಿಕೆ ಇತರೆ ಜೀವನ ಉಪಾಯಕ್ಕಾಗಿ ಐದು ಲಕ್ಷ ಸಹಾಯಧನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

2017ರಿಂದ ದೇವದಾಸಿ ಮಹಿಳೆಯರು ಮನೆಗಳನ್ನು ಕಟ್ಟಿಕೊಳ್ಳುವುದಕ್ಕೆ ಅರ್ಜಿ ಹಾಕಲಾಗಿದೆ. ಆದರೆ ಮನೆಗಳು ಬಂದಿಲ್ಲ. ಮನೆಗಳನ್ನು ಕಟ್ಟಿಕೊಳ್ಳುವುದಕ್ಕೆ ಆದೇಶ ನೀಡಬೇಕು. ಸರ್ವೆ ಪಟ್ಟಿಯಿಂದ ಕೈ ಬಿಟ್ಟ ದೇವದಾಸಿ ಮಹಿಳೆಯರನ್ನು ಸರ್ವೆ ಮಾಡಬೇಕು. ಸರ್ವೆ ಮಾಡುವ ಸಂದರ್ಭದಲ್ಲಿ ವಯಸ್ಸಿನ ಮಿತಿಯನ್ನು ತೆಗೆದು ಹಾಕಬೇಕು. ಮಾಜಿ ದೇವದಾಸಿ ಮಹಿಳೆಯರಿಗೆ ಸಾಲ ಸೌಲಭ್ಯ ಕನಿಷ್ಠ ₹5 ಲಕ್ಷವರೆಗೆ ಸಾಲ ನೀಡಬೇಕು. ದೇವದಾಸಿ ಮಹಿಳೆಯರ ಮಕ್ಕಳ ಮದುವೆ ಸಹಾಯದನಕ್ಕೆ ಅರ್ಜಿ ಹಾಕಿದ ಆರು ತಿಂಗಳ ಒಳಗಾಗಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷೆ ಈರಮ್ಮ, ಕಾರ್ಯದರ್ಶಿ ಎ.ಸ್ವಾಮಿ, ಎಚ್.ದುರುಗಮ್ಮ, ಅಂಜಿನಮ್ಮ, ಯಂಕಮ್ಮ, ವೀರೇಶ್, ಹುಲಿಗೆಮ್ಮ ಇತರರಿದ್ದರು.

ಬಾಕಿ ಪಿಂಚಣಿ ಬಿಡುಗಡೆಗೆ ಆಗ್ರಹಿಸಿ ದೇವದಾಸಿ ಮಹಿಳಾ ವಿಮೋಚನಾ ಸಂಘದಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಜರುಗಿತು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌