ಕನ್ನಡಪ್ರಭ ವಾರ್ತೆ ಮಡಿಕೇರಿ
ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಅಸಮಾಧಾನ ಹೊರ ಹಾಕಿದರು.
ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಕಾಂಗ್ರೆಸ್ ನವರು ಕಾನೂನನ್ನು ಗಾಳಿಗೆ ತೂರಿ ಗೂಂಡಾ ವರ್ತನೆ ತೋರಿದ್ದಾರೆ. ಸಿ.ಟಿ. ರವಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ದೇಶ ದ್ರೋಹಿಗಳನ್ನು ವಶಕ್ಕೆ ಪಡೆಯುವ ರೀತಿಯಲ್ಲಿ ಪೊಲೀಸರು ಅವರನ್ನು ಬಂಧಿಸಿರುವುದು ಖಂಡನೀಯ ಎಂದರು.ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ ಸುವರ್ಣ ಸೌಧದಲ್ಲಿ ಕಾಂಗ್ರೆಸ್ ನವರು ಗೂಂಡಾಗಿರಿ ಮಾಡಿದ್ದಾರೆ. ಸುವರ್ಣ ಸೌಧದಲ್ಲಿ ಶಾಸಕರಿಗೆ ರಕ್ಷಣೆ ಇಲ್ಲ. ಅಂದ ಮೇಲೆ ರಾಜ್ಯದಲ್ಲಿ ಜನರಿಗೆ ರಕ್ಷಣೆ ಇದೆಯಾ? ಅವರನ್ನು ಕೊಂದು ಬಿಡ್ತಿದ್ದರು ಎಂದು ಡಿ. ಕೆ ಶಿವಕುಮಾರ್ ಹೇಳುತ್ತಾರೆ. ಹಾಗಾದರೆ ಸಿ. ಟಿ. ರವಿ ಅವರನ್ನು ಕೊಲೆ ಮಾಡಲು ಪ್ಲಾನ್ ಮಾಡಿದ್ದಾರಾ ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
ಬಂಧಿಸಿದ ತಕ್ಷಣ ಅವರನ್ನು ಕೋರ್ಟಿಗೆ ಹಾಜರು ಪಡಿಸಬೇಕಾಗಿತ್ತು. ಗೂಂಡಾಗಳ ರೀತಿಯಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳಲಾಗಿದೆ. ಇದಕ್ಕೆಲ್ಲಾ ಕಾಂಗ್ರೆಸ್ ನ ಕುಮ್ಮಕ್ಕು ಇದೆ. ಅದರಲ್ಲೂ ಲಕ್ಷ್ಮಿ ಹೆಬ್ಬಾಳ್ಕರ್ ಕಡೆ ಬಹಳ ಗೂಂಡಾಗಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆದರೆ ಕಳೆದ ಒಂದುವರೆ ವರ್ಷಗಳಿಂದ ರಾಜ್ಯದಲ್ಲಿ ಗೂಂಡಾಗಿರಿ ಸಂಸ್ಕೃತಿ ಶುರುವಾಗಿದೆ. ಬಿಜೆಪಿಯವರನ್ನು ಈ ರೀತಿ ಕೇಸ್ ಹಾಕಿ ಮಟ್ಟ ಹಾಕುವುದಕ್ಕೆ ಸಾಧ್ಯವಿಲ್ಲ.
ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿ ಈಗ ರಾಷ್ಟ್ರದಲ್ಲಿ ಮೋದಿಯವರ ಸರ್ಕಾರ ಇದೆ.
ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಕಾಂಗೀರ ಸತೀಶ್, ಮಡಿಕೇರಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ,